ನವದೆಹಲಿ, ಡಿಸೆಂಬರ್ 30: ಅಯೋಧ್ಯೆಯಲ್ಲಿ (Ayodhya) ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರ ತೀರ್ಮಾನಿಸಿದ್ದು, ಆ ವಿಚಾರದಲ್ಲಿ ಬದ್ಧವಾಗಿದೆ ಎಂದು ಅಯೋಧ್ಯೆ ಭೇಟಿಗೂ ಮುನ್ನ ಮೋದಿ ತಿಳಿಸಿದ್ದಾರೆ.
‘ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ನಿರ್ಧರಿಸಿದ್ದು ಅದಕ್ಕೆ ಬದ್ಧವಾಗಿದೆ. ಈ ದಿಸೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಹಾಗೂ ಮರು ಅಭಿವೃದ್ಧಿ ಪಡಿಸಿದ ರೈಲು ನಿಲ್ದಾಣವನ್ನು ನಾಳೆ ಉದ್ಘಾಟಿಸಲಿದ್ದೇನೆ. ಇದರೊಂದಿಗೆ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಭಾಗ್ಯ ನನ್ನದಾಗಿದೆ. ಇದು ಅಯೋಧ್ಯೆ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿರುವ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸಲಿದೆ’ ಎಂದು ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಉಲ್ಲೇಖಿಸಿದ್ದಾರೆ.
भगवान श्री राम की नगरी अयोध्या में विश्वस्तरीय इंफ्रास्ट्रक्चर के विकास, कनेक्टिविटी में सुधार और यहां की समृद्ध विरासत के संरक्षण के लिए हमारी सरकार कृतसंकल्प है। इसी दिशा में कल नवनिर्मित एयरपोर्ट और पुनर्विकसित रेलवे स्टेशन का उद्घाटन करूंगा। इसके साथ ही कई और विकास परियोजनाओं…
— Narendra Modi (@narendramodi) December 29, 2023
ನವೀಕರಿಸಿದ ಅಯೋಧ್ಯೆ ರೈಲು ನಿಲ್ದಾಣವನ್ನು ಬೆಳಗ್ಗೆ 11:15ಕ್ಕೆ ಪ್ರಧಾನಿ ಮೋದಿಯವರು ಉದ್ಘಾಟಿಸುತ್ತಿದ್ದಾರೆ. ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೂ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ. ಇದರಲ್ಲಿ ಕರ್ನಾಟಕದ 2 ವಂದೇ ಭಾರತ್ ರೈಲುಗಳೂ (ಮಂಗಳೂರು-ಮಡಗಾವ್, ಕೊಯಮತ್ತೂರು-ಬೆಂಗಳೂರು ವಂದೇ ಭಾರತ್ ರೈಲು) ಸೇರಿರಲಿವೆ. ಮಧ್ಯಾಹ್ನ 12:15ಕ್ಕೆ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಇದನ್ನೂ ಓದಿ: ರಾಮಲಲ್ಲಾನ ವಿಗ್ರಹಗಳೆಲ್ಲವೂ ಚೆನ್ನಾಗಿವೆ, ಒಂದನ್ನು ಆಯ್ಕೆ ಮಾಡುವುದು ಕಷ್ಟ: ಚಂಪತ್ ರಾಯ್
ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ಮೋದಿ ಅವರು ಹಲವಾರು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 9:46 am, Sat, 30 December 23