AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ

ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ನಡೆದಿದೆ. ಇದಕ್ಕೆ ಪ್ರಧಾನಿ ಮೋದಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ ಎನ್ನಲಾಗಿದೆ. ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸಲು ಭಾರತ ಒಪ್ಪಿಕೊಂಡ ನಂತರ ಸೋಮವಾರ ಭಾರತೀಯ ಸರಕುಗಳ ಮೇಲಿನ ವ್ಯಾಪಾರ ಸುಂಕವನ್ನು ಶೇ. 50ರಿಂದ ಶೇ. 18ಕ್ಕೆ ಇಳಿಸುವುದಾಗಿ ಟ್ರಂಪ್ ಹೇಳಿದ್ದಾರೆ ಎನ್ನಲಾಗಿದೆ. ಆದರೆ, ರಷ್ಯಾದ ಬಗ್ಗೆ ಭಾರತ ತೆಗೆದುಕೊಂಡ ನಿಲುವಿನ ಬಗ್ಗೆ ಮೋದಿ ಸರ್ಕಾರದಿಂದ ಯಾವುದೇ ಸ್ಪಷ್ಟನೆ ಬಂದಿಲ್ಲ.

ಪ್ರಧಾನಿ ಮೋದಿ ಜೊತೆ ಟ್ರಂಪ್ ಮಾಡಿಕೊಂಡ ವ್ಯಾಪಾರ ಒಪ್ಪಂದದ 7 ಹೈಲೈಟ್ಸ್ ಇಲ್ಲಿವೆ
Trump With Pm Modi
ಸುಷ್ಮಾ ಚಕ್ರೆ
|

Updated on:Feb 03, 2026 | 9:02 PM

Share

ನವದೆಹಲಿ, ಫೆಬ್ರವರಿ 3: ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಭಾರತೀಯ ಸರಕುಗಳ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದ ನಂತರ ನಿನ್ನೆ (ಸೋಮವಾರ) ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಭಾರತದೊಂದಿಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ ಟ್ರೂತ್ ಸೋಶಿಯಲ್‌ನಲ್ಲಿ ಘೋಷಿಸಿದ ಈ ವ್ಯಾಪಾರ ಒಪ್ಪಂದವು ಹಲವಾರು ಅಂಶಗಳನ್ನು ಒಳಗೊಂಡಿದೆ. ಆದರೆ, ಟ್ರಂಪ್ ಘೋಷಿಸಿದ ಈ ಅಂಶಗಳ ಬಗ್ಗೆ ಭಾರತ ಸರ್ಕಾರ ಇನ್ನೂ ಸರಿಯಾದ ಸ್ಪಷ್ಟನೆ ನೀಡಿಲ್ಲ. ಕೇವಲ ವ್ಯಾಪಾರ ಒಪ್ಪಂದದ ಬಗ್ಗೆ ಮಾತ್ರ ಪ್ರಧಾನಿ ಮೋದಿ (PM Modi) ಖಚಿತಪಡಿಸಿದ್ದಾರೆ. ಅದರಲ್ಲಿರುವ ಉಳಿದ ವಿಷಯಗಳ ಬಗ್ಗೆ ಯಾವುದೇ ಸ್ಪಷ್ಟೀಕರಣವಾಗಲಿ, ದೃಢೀಕರಣವಾಗಲಿ ಬಂದಿಲ್ಲ.

ಟ್ರಂಪ್ ಭಾರತದ ಮೇಲೆ ಶೇ. 50ರಷ್ಟು ಸುಂಕವನ್ನು ವಿಧಿಸಿದ್ದರು. ಅದರಲ್ಲಿ ಶೇ. 25ರಷ್ಟು ಸುಂಕವನ್ನು ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡಿಕೊಂಡಿದ್ದಕ್ಕೆ ದಂಡದ ರೂಪದಲ್ಲಿ ವಿಧಿಸಲಾಗಿತ್ತು. ರಷ್ಯಾದಿಂದ ಭಾರತ ಕಚ್ಚಾ ತೈಲ ಖರೀದಿ ಮಾಡುವ ಮೂಲಕ ಉಕ್ರೇನ್ ವಿರುದ್ಧದ ಯುದ್ಧಕ್ಕೆ ಹಣಕಾಸು ಒದಗಿಸಲು ಸಹಾಯ ಮಾಡಿದೆ ಎಂದು ಟ್ರಂಪ್ ಪದೇ ಪದೇ ಹೇಳಿದ್ದರು.

ಇದನ್ನೂ ಓದಿ: ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ಖಾತೆಯ ಮೂಲಕ ವ್ಯಾಪಾರ ಒಪ್ಪಂದವನ್ನು ದೃಢಪಡಿಸಿದ್ದರು “ಇಂದು ನನ್ನ ಆತ್ಮೀಯ ಗೆಳೆಯ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಮಾತನಾಡಿ ಖುಷಿಯಾಯಿತು. ಭಾರತದಲ್ಲಿ ತಯಾರಿಸಿದ ಉತ್ಪನ್ನಗಳು ಈಗ ಶೇ. 18ರಷ್ಟು ಕಡಿಮೆ ಸುಂಕವನ್ನು ಹೊಂದಿರುವುದು ಸಂತೋಷ ತಂದಿದೆ. ಈ ಅದ್ಭುತ ಘೋಷಣೆಗಾಗಿ ಭಾರತದ 1.4 ಶತಕೋಟಿ ಜನರ ಪರವಾಗಿ ಅಧ್ಯಕ್ಷ ಟ್ರಂಪ್‌ಗೆ ಹೃತ್ಪೂರ್ವಕ ಧನ್ಯವಾದಗಳು. ಎರಡು ದೊಡ್ಡ ಆರ್ಥಿಕತೆಗಳು ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳು ಒಟ್ಟಾಗಿ ಕೆಲಸ ಮಾಡಿದಾಗ ಅದು ನಮ್ಮ ಜನರಿಗೆ ಪ್ರಯೋಜನವನ್ನು ನೀಡುತ್ತದೆ. ಹಾಗೇ ಪರಸ್ಪರ ಪ್ರಯೋಜನಕಾರಿ ಸಹಕಾರಕ್ಕಾಗಿ ಅಪಾರ ಅವಕಾಶಗಳನ್ನು ತೆರೆಯುತ್ತದೆ. ಅಧ್ಯಕ್ಷ ಟ್ರಂಪ್ ಅವರ ನಾಯಕತ್ವವು ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯಗತ್ಯ. ಶಾಂತಿಗಾಗಿ ಅವರ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ” ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ

ನಿನ್ನೆ ನಡೆದ ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 7 ಪ್ರಮುಖ ಅಂಶಗಳು ಇಲ್ಲಿವೆ:

– ಭಾರತವು ಅಮೆರಿಕದ ರಫ್ತಿನ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಲಿದೆ.

– ಅಮೆರಿಕವು ಆಮದು ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಲಿದೆ.

– ಭಾರತವು ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸಲಿದೆ.

– ಭಾರತವು ಅಮೆರಿಕದಿಂದ ತೈಲ ಖರೀದಿಯನ್ನು ಹೆಚ್ಚಿಸಲಿದೆ.

– ಭಾರತವು ವೆನೆಜುವೆಲಾದಿಂದ ತೈಲ ಖರೀದಿಯನ್ನು ಪ್ರಾರಂಭಿಸಲಿದೆ.

ಆದರೆ, ವ್ಯಾಪಾರ ಒಪ್ಪಂದ ಮಾಡಿಕೊಂಡಿರುವುದಾಗಿ ಮಾತ್ರ ಘೋಷಿಸಿರುವ ಪ್ರಧಾನಿ ಮೋದಿ ಈ ಯಾವ ವಿಚಾರಗಳ ಬಗ್ಗೆಯೂ ಇನ್ನೂ ಸ್ಪಷ್ಟನೆ ನೀಡಿಲ್ಲ. ಇದು ಕೇವಲ ಟ್ರಂಪ್ ಮಾಡಿರುವ ಘೋಷಣೆಯಷ್ಟೇ. ಭಾರತದ ಇನ್ನೊಂದು ಆಪ್ತ ದೇಶವಾಗಿರುವ ರಷ್ಯಾದಿಂದ ತೈಲ ಖರೀದಿಯನ್ನು ನಿಲ್ಲಿಸುವ ಬಗ್ಗೆ ಭಾರತವಾಗಲಿ ಅಥವಾ ರಷ್ಯಾವಾಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ, ಈ ಬಗ್ಗೆ ಇನ್ನೂ ಗೊಂದಲ ಉಳಿದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:02 pm, Tue, 3 February 26

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?