AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ

ಅಮೆರಿಕ- ಇರಾನ್ ನಡುವಿನ ಕದನವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ದೂರವಾಣಿ ಸಂಭಾಷಣೆ ಇದಾಗಿದೆ. ಫೆಬ್ರವರಿ 28ರಂದು ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು ನಡೆಸಿದ ನಂತರ ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಲ್ಬಣಗೊಂಡಿತ್ತು.

ಪ್ರಧಾನಿ ಮೋದಿ ಜೊತೆ ಟ್ರಂಪ್ 40 ನಿಮಿಷ ಫೋನ್ ಸಂಭಾಷಣೆ; ಹಾರ್ಮುಜ್ ಕುರಿತು ಚರ್ಚೆ
Trump With Pm Modi
ಸುಷ್ಮಾ ಚಕ್ರೆ
|

Updated on:Apr 14, 2026 | 9:26 PM

Share

ನವದೆಹಲಿ, ಏಪ್ರಿಲ್ 14: ಪ್ರಧಾನಿ ಮೋದಿಗೆ (PM Narendra Modi) ಇಂದು ಸಂಜೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹಾರ್ಮುಜ್ ಜಲಸಂಧಿಯ ದಿಗ್ಬಂಧನ, ಇರಾನ್ ಮೇಲಿನ ದಾಳಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ 40 ನಿಮಿಷ ಮಾತುಕತೆ ನಡೆಸಿದ್ದಾರೆ. ಈ ವರ್ಷ ಇಬ್ಬರು ನಾಯಕರ ನಡುವಿನ ಮೂರನೇ ಕರೆ ಇದಾಗಿದೆ. ಹಾರ್ಮುಜ್ ಜಲಸಂಧಿಯ ದಿಗ್ಬಂಧನದ ವಿಷಯದ ಕುರಿತು ಪ್ರಧಾನಿ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಟ್ರಂಪ್ ಚರ್ಚಿಸಿದ್ದಾರೆ ಎಂದು ಅಮೆರಿಕದ ರಾಯಭಾರ ಕಚೇರಿ ತಿಳಿಸಿದೆ.

ಅಮೆರಿಕ-ಇರಾನ್ ಶಾಂತಿ ಮಾತುಕತೆ ವಿಫಲವಾದ ನಂತರ ಪಶ್ಚಿಮ ಏಷ್ಯಾದಲ್ಲಿ ಹೆಚ್ಚಿದ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಮಾರು 40 ನಿಮಿಷಗಳ ದೂರವಾಣಿ ಸಂಭಾಷಣೆ ನಡೆಸಿದರು. ಪ್ರಧಾನಿ ಮೋದಿ ಎಕ್ಸ್​​ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಬ್ಯಾಡ್ ನ್ಯೂಸ್: ಪಾಕಿಸ್ತಾನ ಸಂಧಾನ ವಿಫಲ, ಇರಾನ್ ಜೊತೆ ಒಪ್ಪಂದವಿಲ್ಲದೆ ಅಮೆರಿಕ ನಿಯೋಗ ವಾಪಸ್

“ನನ್ನ ಸ್ನೇಹಿತರಾದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಫೋನ್ ಕರೆ ಬಂದಿತ್ತು. ಈ ವೇಳೆ ವಿವಿಧ ವಲಯಗಳಲ್ಲಿ ನಮ್ಮ ದ್ವಿಪಕ್ಷೀಯ ಸಹಕಾರದಲ್ಲಿ ಸಾಧಿಸಲಾದ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಬದ್ಧರಾಗಿದ್ದೇವೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿಯನ್ನು ಸಹ ನಾವು ಚರ್ಚಿಸಿದ್ದೇವೆ. ಹಾರ್ಮುಜ್ ಜಲಸಂಧಿಯನ್ನು ಮುಕ್ತ ಮತ್ತು ಸುರಕ್ಷಿತವಾಗಿರಿಸುವ ಮಹತ್ವವನ್ನು ಒತ್ತಿ ಹೇಳಿದ್ದೇವೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಮಹಿಳಾ ಮೀಸಲಾತಿಗೆ ವೇದಿಕೆ ಸಜ್ಜು; ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಏರಿಸಲು ಮೋದಿ ಸರ್ಕಾರ ಪ್ರಸ್ತಾಪ

ಅಮೆರಿಕ ಮತ್ತು ಇರಾನ್ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸುಮಾರು 21 ಗಂಟೆಗಳ ನೇರ ಮಾತುಕತೆಗಳನ್ನು ನಡೆಸಿ, ಶಾಂತಿ ಒಪ್ಪಂದಕ್ಕೆ ಬರಲು ವಿಫಲವಾದ ನಂತರ ಭಾರತ ಮತ್ತು ಅಮೆರಿಕದ ನಡುವೆ ಈ ದೂರವಾಣಿ ಮಾತುಕತೆ ನಡೆದಿದೆ. ಇರಾನ್ ತನ್ನ ಪರಮಾಣು ಉತ್ಪಾದನೆಯನ್ನು ನಿಲ್ಲಿಸಲು ನಿರಾಕರಿಸಿದ್ದರಿಂದ ಶಾಂತಿ ಮಾತುಕತೆಗಳು ಫಲಪ್ರದವಾಗಲಿಲ್ಲ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಅಮೆರಿಕ ಚರ್ಚೆಗಳನ್ನು ಹಳಿತಪ್ಪಿಸಿದೆ ಎಂದು ಇರಾನ್ ಆರೋಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:15 pm, Tue, 14 April 26

Follow Us
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!