AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ- ರಷ್ಯಾದ ಪುಟಿನ್ ಫೋನ್ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಗಟ್ಟಿಗೊಳಿಸಲು ಪ್ರತಿಜ್ಞೆ

ರಷ್ಯಾದಿಂದ ತೈಲ ಖರೀದಿ ಮಾಡುತ್ತಿದೆ ಎಂಬ ಕಾರಣವನ್ನು ನೀಡಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ ಶೇ. 25ರಷ್ಟು ಸುಂಕ ವಿಧಿಸುವ ಮೂಲಕ ವ್ಯಾಪಾರ ಆಮದು ಸುಂಕವನ್ನು ಶೇ. 50ಕ್ಕೆ ಏರಿಸಿದ್ದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳಿಂದ ಉಂಟಾಗಿರುವ ಜಾಗತಿಕ ವ್ಯಾಪಾರ ಅನಿಶ್ಚಿತತೆಯ ನಡುವೆಯೇ ಇಂದು ರಷ್ಯಾ ಮತ್ತು ಭಾರತದ ನಾಯಕರು ದೂರವಾಣಿಯಲ್ಲಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿ- ರಷ್ಯಾದ ಪುಟಿನ್ ಫೋನ್ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಗಟ್ಟಿಗೊಳಿಸಲು ಪ್ರತಿಜ್ಞೆ
Modi With Putin
ಸುಷ್ಮಾ ಚಕ್ರೆ
|

Updated on: Aug 08, 2025 | 9:26 PM

Share

ನವದೆಹಲಿ, ಆಗಸ್ಟ್ 8: ರಷ್ಯಾದ ತೈಲ ಖರೀದಿಯ ಕಾರಣಕ್ಕೆ ಭಾರತದ ಮೇಲೆ ಅಮೆರಿಕ (United States) ದುಪ್ಪಟ್ಟು ಸುಂಕ ವಿಧಿಸಿದ ಬೆನ್ನಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರೋಧ ವ್ಯಕ್ತಪಡಿಸಿದ್ದರು. ಇಂದು ಖುದ್ದಾಗಿ ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಫೋನ್ ಮಾಡಿರುವ ಅವರು ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆ ಮತ್ತು ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿ ಸೇರಿದಂತೆ ಹಲವಾರು ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಜೊತೆ ಮಾತುಕತೆ ನಡೆಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕ ಘೋಷಣೆಗಳಿಂದ ಉಂಟಾಗಿರುವ ಜಾಗತಿಕ ವ್ಯಾಪಾರ ಅನಿಶ್ಚಿತತೆಯ ನಡುವೆಯೇ ಇಬ್ಬರೂ ನಾಯಕರು ಮಾತನಾಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. “ನನ್ನ ಸ್ನೇಹಿತ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಬಹಳ ಉತ್ತಮ ಮತ್ತು ವಿವರವಾದ ಸಂಭಾಷಣೆ ನಡೆಯಿತು. ಉಕ್ರೇನ್‌ನ ಇತ್ತೀಚಿನ ಬೆಳವಣಿಗೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸಿದೆ. ನಮ್ಮ ದ್ವಿಪಕ್ಷೀಯ ಕಾರ್ಯಸೂಚಿಯಲ್ಲಿನ ಪ್ರಗತಿಯನ್ನು ನಾವು ಪರಿಶೀಲಿಸಿದ್ದೇವೆ. ಭಾರತ-ರಷ್ಯಾ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ. ಈ ವರ್ಷದ ಕೊನೆಯಲ್ಲಿ ಭಾರತಕ್ಕೆ ಆಗಮಿಸಲಿರುವ ಪುಟಿನ್ ಅವರನ್ನು ಸ್ವಾಗತಿಸಲು ನಾನು ಕಾಯುತ್ತಿದ್ದೇನೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದನ್ನೂ ಓದಿ: ಮತ್ತೆ ಸುಂಕದ ಅಸ್ತ್ರ ಪ್ರಯೋಗಿಸಿದ ಅಮೆರಿಕ; ರಷ್ಯಾದ ತೈಲ ಖರೀದಿಸಿದ್ದಕ್ಕೆ ಭಾರತಕ್ಕೆ ಟ್ರಂಪ್ ಬೆದರಿಕೆ

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗುರುವಾರ ಕ್ರೆಮ್ಲಿನ್‌ನಲ್ಲಿ ರಷ್ಯಾದ ಅಧ್ಯಕ್ಷರ ಪುಟಿನ್ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಪ್ರಧಾನಿ ಮೋದಿಗೆ ಪುಟಿನ್ ಅವರಿಂದ ಕರೆ ಬಂದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದಕ್ಕಾಗಿ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ನಿರ್ಧಾರದ ಹಿನ್ನೆಲೆಯಲ್ಲಿಯೂ ಈ ಮಹತ್ವದ ಮಾತುಕತೆ ನಡೆಯಿತು.

ಇದನ್ನೂ ಓದಿ: ಅಮೆರಿಕ-ರಷ್ಯಾ ಮಾತುಕತೆಗೂ ಮುನ್ನ ಪುಟಿನ್ ಹಾಗೂ ಝೆಲೆನ್ಸ್ಕಿ ಭೇಟಿಯಾಗಲ್ಲ ಎಂದ ಟ್ರಂಪ್

ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದು 2021ರ ಡಿಸೆಂಬರ್ 6ರಂದು. ದೆಹಲಿಯಲ್ಲಿ ನಡೆದ 21ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯ ಸಂದರ್ಭದಲ್ಲಿ ಅವರು ಭಾರತಕ್ಕೆ ಬಂದಿದ್ದರು. ಪ್ರಧಾನಿ ಮೋದಿ ಕಳೆದ ವರ್ಷ ರಷ್ಯಾ ಅಧ್ಯಕ್ಷರ ಜೊತೆ ಎರಡು ಉನ್ನತ ಬಾರಿ ಭೇಟಿ ಮಾಡಿದ್ದರು. ಜುಲೈನಲ್ಲಿ 22ನೇ ರಷ್ಯಾ-ಭಾರತ ಶೃಂಗಸಭೆಯಲ್ಲಿ ಅವರು ಭಾಗವಹಿಸಿದ್ದರು. ನಂತರ ಅಕ್ಟೋಬರ್‌ನಲ್ಲಿ ಕಜಾನ್‌ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ