‘ಜಾಗತಿಕ ಶಾಂತಿಗಾಗಿ ಭಾರತ-ಸ್ವಿಜರ್ಲೆಂಡ್ ಜಂಟಿ ಯತ್ನ’; ಸ್ವಿಸ್  ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಜಂಟಿ ಹೇಳಿಕೆ

Updated on: Oct 05, 2026 | 2:49 PM

ಭಾರತ ಮತ್ತು ಸ್ವಿಜರ್ಲೆಂಡ್​ ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಮತ್ತು ಹೊಸ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಕುರಿತು ಚರ್ಚಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪಾರ್ಮೆಲಿನ್ ಅವರೊಂದಿಗೆ ಇಂದು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ಉನ್ನತ ಮಟ್ಟದ ಮಾತುಕತೆ ನಡೆಸಿದರು. ಭಾರತಕ್ಕೆ ಅಧಿಕೃತ ಸರ್ಕಾರಿ ಭೇಟಿ ನೀಡಿರುವ ಸ್ವಿಜರ್ಲೆಂಡ್​ ಅಧ್ಯಕ್ಷ ಗೈ ಪಾರ್ಮೆಲಿನ್ ಅವರನ್ನು ಪ್ರಧಾನಿ ಮೋದಿ ಆತ್ಮೀಯವಾಗಿ ಬರಮಾಡಿಕೊಂಡರು. ದ್ವಿಪಕ್ಷೀಯ ಸಭೆಯ ಬಳಿಕ ಇಬ್ಬರೂ ಜಂಟಿ ಹೇಳಿಕೆ ನೀಡಿದ್ದು, ಆ ಕುರಿತು ಮಾಹಿತಿ ಇಲ್ಲಿದೆ.

ನವದೆಹಲಿ, ಅಕ್ಟೋಬರ್ 5: ಭಾರತ ಮತ್ತು ಸ್ವಿಟ್ಜಜರ್ಲೆಂಡ್ ದೇಶಗಳೆರಡೂ ಪ್ರಜಾಪ್ರಭುತ್ವದ ಮೌಲ್ಯಗಳು, ಕಾನೂನಿನ ಆಡಳಿತ, ಮಾತುಕತೆ ಮತ್ತು ರಾಜತಾಂತ್ರಿಕತೆಯಲ್ಲಿ ಬಲವಾದ ನಂಬಿಕೆ ಹೊಂದಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಸ್ವಿಜರ್ಲೆಂಡ್ ಕಾನ್ಫೆಡರೇಶನ್ ಅಧ್ಯಕ್ಷ ಗೈ ಪಾರ್ಮೆಲಿನ್ ಅವರೊಂದಿಗೆ ನಡೆಸಿದ ಜಂಟಿ ಪತ್ರಿಕಾ ಗೋಷ್ಠಿಯಲ್ಲಿ ಪ್ರಧಾನಿ ಮೋದಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಜಾಗತಿಕ ಶಾಂತಿ ಮತ್ತು ಸ್ಥಿರತೆಗಾಗಿ ಎರಡೂ ದೇಶಗಳು ಒಟ್ಟಾಗಿ ಕೆಲಸ ಮಾಡಲಿವೆ. ಉಕ್ರೇನ್ ಯುದ್ಧವೇ ಇರಲಿ ಅಥವಾ ಪಶ್ಚಿಮ ಏಷ್ಯಾದ ಬಿಕ್ಕಟ್ಟೇ ಇರಲಿ, ಶಾಂತಿಯತ್ತ ಕೈಗೊಳ್ಳುವ ಎಲ್ಲ ಸಕಾರಾತ್ಮಕ ಪ್ರಯತ್ನಗಳನ್ನು ಭಾರತ ಸದಾ ಬೆಂಬಲಿಸಿದೆ ಎಂದು ಮೋದಿ ಹೇಳಿದ್ದಾರೆ. ಅಕ್ಟೋಬರ್ 7ರಂದು ‘ಭಾರತ-ಇಎಫ್‌ಟಿಎ (EFTA) ಉದ್ಯಮ ನಾಯಕರ ಸಮೃದ್ಧಿ ಶೃಂಗಸಭೆ’ಯನ್ನು ಆಯೋಜಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದರು.

ಸ್ವಿಜರ್ಲೆಂಡ್ ಅಧ್ಯಕ್ಷ ಗೈ ಪಾರ್ಮೆಲಿನ್ ತಮ್ಮ ದೇಶದ ಉದ್ಯಮಿಗಳು ಹಾಗೂ ವ್ಯಾಪಾರ ಪ್ರತಿನಿಧಿಗಳ ನಿಯೋಗದೊಂದಿಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿಯೊಂದಿಗಿನ ಸಭೆಯಲ್ಲಿ ಉಭಯ ದೇಶಗಳು ಆರ್ಥಿಕತೆ, ವ್ಯಾಪಾರ, ನಾವೀನ್ಯತೆ ತಂತ್ರಜ್ಞಾನ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಿದವು. ಪ್ರಜಾಪ್ರಭುತ್ವದ ಮೌಲ್ಯಗಳು, ಜಾಗತಿಕ ಶಾಂತಿ, ಸ್ಥಿರತೆ ಹಾಗೂ ವಿಶ್ವಸಂಸ್ಥೆ ಸೇರಿದಂತೆ ಜಾಗತಿಕ ಸಂಸ್ಥೆಗಳಲ್ಲಿ ಮಾಡಬೇಕಾದ ಸುಧಾರಣೆಗಳ ಬಗ್ಗೆ ಇಬ್ಬರೂ ನಾಯಕರು ಒಮ್ಮತ ವ್ಯಕ್ತಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More