ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ

PM Modi announces constituting high powered task force for examination reforms: ಪ್ರಶ್ನೆಪತ್ರಿಕೆ ಸೋರಿಕೆ ಬೆನ್ನಲ್ಲೇ, ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್ಫೋಸಿಸ್ ಸಹ-ಸಂಸ್ಥಾಪಕ ಹಾಗೂ ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸುವುದಾಗಿ ಘೋಷಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆ ಸುಧಾರಿಸಲು ನಂದನ್ ನಿಲೇಕಣಿ ಅಧ್ಯಕ್ಷತೆಯಲ್ಲಿ ಟ್ಯಾಸ್ಕ್ ಫೋರ್ಸ್ ರಚನೆ
ನಂದನ್ ನಿಲೇಕಣಿ
Image Credit source: Drew Angerer/Getty Images
Edited By:

Updated on: Jul 26, 2026 | 8:28 PM

ನವದೆಹಲಿ, ಜುಲೈ 26: ನೀಟ್ (NEET-UG) ಸೇರಿದಂತೆ ದೇಶದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಸೋರಿಕೆ ಮತ್ತು ಅಕ್ರಮಗಳನ್ನು ತಡೆಗಟ್ಟಲು, ಹಾಗು ಭಾರತದ ಪರೀಕ್ಷಾ ವ್ಯವಸ್ಥೆಯನ್ನು ಸಂಪೂರ್ಣವಾಗಿ ಸುಧಾರಿಸಲು ಮತ್ತು ತಂತ್ರಜ್ಞಾನ ಆಧಾರಿತ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು (High-Powered Task Force) ರಚಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಈ ವಿಚಾರವನ್ನು ಘೋಷಿಸಿದ್ದಾರೆ.

ದೇಶದ ಪರೀಕ್ಷಾ ಸಂಸ್ಥೆಗಳ ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸುರಕ್ಷಿತಗೊಳಿಸಲು ಆಧುನಿಕ ತಂತ್ರಜ್ಞಾನವನ್ನು ಗರಿಷ್ಠ ಪ್ರಮಾಣದಲ್ಲಿ ಬಳಸುವುದು ಈ ಕಾರ್ಯಪಡೆಯ ಮುಖ್ಯ ಉದ್ದೇಶವಾಗಿದೆ.

ಮೋದಿ ಅವರ ಎಕ್ಸ್ ಪೋಸ್ಟ್

ಇದನ್ನೂ ಓದಿ: ವಿಕಸಿತ್ ವೈಬ್ರೆಂಟ್ ಗ್ರಾಮ ಯೋಜನೆ; ಪ್ರಧಾನಿ ಜೊತೆ ಅನುಭವ ಹಂಚಿಕೊಂಡ ಯುವಜನರು 

ಕಾರ್ಯಪಡೆಯಲ್ಲಿ ಯಾರ್ಯಾರು ಇದ್ದಾರೆ?

NTA ಪರೀಕ್ಷೆಯನ್ನು ವಿಶೇಷವಾಗಿ ತಂತ್ರಜ್ಞಾನ ದೃಷ್ಟಿಕೋನದಿಂದ ವ್ಯವಸ್ಥೆಯಲ್ಲಿ ಸುಧಾರಣೆಗಳಿಗೆ ಸಹಾಯ ಮಾಡಲು ತಜ್ಞರನ್ನೇ ಕಾರ್ಯಪಡೆಗೆ ನೇಮಕ ಮಾಡಲಾಗಿದೆ.

  • ತಂತ್ರಜ್ಞಾನ ತಜ್ಞ ನಂದನ್ ನಿಲೇಕಣಿ
  • ಇಸ್ರೋದ ಮಾಜಿ ಅಧ್ಯಕ್ಷ ಎಸ್ ಸೋಮನಾಥ್
  • ಮಾಜಿ ಐಬಿ ನಿರ್ದೇಶಕ ತಪನ್ ದೇಕಾ
  • ಐಐಟಿ ಚೆನ್ನೈ ನಿರ್ದೇಶಕ ವಿ ಕಾಮಕೋಟಿ
  • ಮಾಜಿ ಶಿಕ್ಷಣ ಕಾರ್ಯದರ್ಶಿ ಅನಿತಾ ಕಾರ್ವಾಲ್ಲಾ
  • ಜಿಸ್ಟಿಕ್ಸ್ ತಜ್ಞ ಅಮೃತ್ ಲಾಲ್ ಮೀನಾ

ವರದಿ ಆಧಾರಿತ ಹೊಸ ವ್ಯವಸ್ಥೆ: ನಂದನ್ ನಿಲೇಕಣಿ ನೇತೃತ್ವದ ಸಮಿತಿಯು ನೀಡುವ ಶಿಫಾರಸುಗಳು ಮತ್ತು ವರದಿಯ ಆಧಾರದ ಮೇಲೆ ಮುಂದಿನ ಎಲ್ಲಾ ಪ್ರಮುಖ ರಾಷ್ಟ್ರೀಯ ಪರೀಕ್ಷೆಗಳನ್ನು ಯಾವುದೇ ಅಕ್ರಮವಿಲ್ಲದೆ ನಡೆಸಲು ಹೊಸ ಚೌಕಟ್ಟನ್ನು ರೂಪಿಸಲಾಗುತ್ತದೆ.

ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ ಆರೋಪಿಗಳು ಈಗಾಗಲೇ ಜೈಲಿನಲ್ಲಿದ್ದಾರೆ. ಹೊಸ ಕಾನೂನುಗಳು, ವಿಶೇಷ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳ ಮೂಲಕ ಶೀಘ್ರ ವಿಚಾರಣೆ ನಡೆಸಲಾಗುವುದು ಎಂದು ಪ್ರಧಾನಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಯುವಜನರು ಆತ್ಮವಿಶ್ವಾಸದಿಂದ ಬೆಳೆಯುವುದು ಗುರಿ- ವೈಬ್ರೆಂಟ್ ವಿಲೇಜ್ ಅಭಿಯಾನದಲ್ಲಿ ಮೋದಿ ಮಾತು

ವಿದ್ಯಾರ್ಥಿಗಳು ಹಾಗೂ ಅಭ್ಯರ್ಥಿಗಳಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಮರುಸ್ಥಾಪಿಸಲು ಮತ್ತು ಭವಿಷ್ಯದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಅಕ್ರಮಗಳನ್ನು ತಡೆಯಲು ತಂತ್ರಜ್ಞಾನ ಆಧಾರಿತ ಸುಧಾರಣೆ ತರಲು ಕೇಂದ್ರ ಸರ್ಕಾರ ಈ ಪ್ರಮುಖ ಹೆಜ್ಜೆ ಇಟ್ಟಿದೆ. ಹಾಗೆಯೇ, ನಾಳೆ ಸೋಮವಾರ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಕಠಿಣ ತಿದ್ದುಪಡಿ ವಿಧೇಯಕವನ್ನೂ ಸರ್ಕಾರ ಮಂಡಿಸುತ್ತಿದೆ.
PM Modi Announces Task Force On Exam Reforms Under Infosys Co-Founder
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:27 pm, Sun, 26 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us