AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರ ಮೇಲ್ಛಾವಣಿಗಳನ್ನು ಉತ್ತೇಜಿಸಲು ‘ಪಿಎಂ ಸೂರ್ಯ ಘರ್’ ಯೋಜನೆ ಘೋಷಿಸಿದ ಮೋದಿ

'ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ' ₹ 75,000 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ಒಂದು ಕೋಟಿ ಕುಟುಂಬಗಳಿಗೆ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿಗಳನ್ನು ಒದಗಿಸಲಾಗುವುದು. ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿ ಹೇಳಿದರು.

ಸೌರ ಮೇಲ್ಛಾವಣಿಗಳನ್ನು ಉತ್ತೇಜಿಸಲು ‘ಪಿಎಂ ಸೂರ್ಯ ಘರ್’ ಯೋಜನೆ ಘೋಷಿಸಿದ ಮೋದಿ
ಸೌರ ಫಲಕ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 13, 2024 | 4:39 PM

Share

ದೆಹಲಿ ಫೆಬ್ರುವರಿ 13: ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು (solar rooftops) ಅಳವಡಿಸಲು ಪ್ರೋತ್ಸಾಹಿಸುವ ಯೋಜನೆಯನ್ನು ‘ಪಿಎಂ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ’ (‘PM Surya Ghar: Muft Bijli Yojana) ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ಘೋಷಿಸಿದ್ದಾರೆ. ₹ 75,000 ಕೋಟಿಗೂ ಹೆಚ್ಚು ಮೌಲ್ಯದ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಮೂಲಕ ಒಂದು ಕೋಟಿ ಕುಟುಂಬಗಳಿಗೆ ವಿದ್ಯುತ್ ಒದಗಿಸುವ ಗುರಿಯನ್ನು ಹೊಂದಿದೆ. ಸುಸ್ಥಿರ ಅಭಿವೃದ್ಧಿ ಮತ್ತು ಜನರ ಯೋಗಕ್ಷೇಮಕ್ಕಾಗಿ, ನಾವು ಪ್ರಧಾನ ಮಂತ್ರಿ ಸೂರ್ಯ ಘರ್: ಮುಫ್ತ್ ಬಿಜ್ಲಿ ಯೋಜನೆ ಪ್ರಾರಂಭಿಸುತ್ತಿದ್ದೇವೆ. ₹ 75,000 ಕೋಟಿಗೂ ಹೆಚ್ಚು ಹೂಡಿಕೆಯೊಂದಿಗೆ ಈ ಯೋಜನೆಯು ಪ್ರತಿ ತಿಂಗಳು 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಅನ್ನು ಒದಗಿಸುವ ಮೂಲಕ 1 ಕೋಟಿ ಮನೆಗಳನ್ನು ಬೆಳಗಿಸುವ ಗುರಿಯನ್ನು ಹೊಂದಿದೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದಿದ್ದಾರೆ.

ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿಗಳನ್ನು ಒದಗಿಸಲಾಗುವುದು. ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಪ್ರಧಾನ ಮಂತ್ರಿ ಹೇಳಿದರು.

“ಜನರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನೀಡಲಾಗುವ ಸಬ್ಸಿಡಿಗಳಿಂದ, ಹೆಚ್ಚು ರಿಯಾಯಿತಿಯ ಬ್ಯಾಂಕ್ ಸಾಲಗಳವರೆಗೆ, ಕೇಂದ್ರ ಸರ್ಕಾರವು ಜನರ ಮೇಲೆ ಯಾವುದೇ ವೆಚ್ಚದ ಹೊರೆಯಾಗದಂತೆ ನೋಡಿಕೊಳ್ಳುತ್ತದೆ” ಎಂದು ಅವರು ಹೇಳಿದರು. ಅದೇ ವೇಳೆ “ಎಲ್ಲಾ ಪಾಲುದಾರರನ್ನು ರಾಷ್ಟ್ರೀಯ ಆನ್‌ಲೈನ್ ಪೋರ್ಟಲ್‌ಗೆ ಸಂಯೋಜಿಸಲಾಗುತ್ತದೆ ಅದು ಮತ್ತಷ್ಟು ಅನುಕೂಲವಾಗುತ್ತದೆ ಎಂದಿದ್ದಾರೆ ಮೋದಿ.

ಈ ಯೋಜನೆಯನ್ನು ತಳಮಟ್ಟದಲ್ಲಿ ಜನಪ್ರಿಯಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್‌ಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಮೇಲ್ಛಾವಣಿ ಸೌರ ಫಲಕಗಳ ಬಳಕೆ ಉತ್ತೇಜಿಸಲು ಪ್ರೋತ್ಸಾಹಿಸಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ಈ ಯೋಜನೆಯು ಹೆಚ್ಚಿನ ಆದಾಯ, ಕಡಿಮೆ ವಿದ್ಯುತ್ ಬಿಲ್ ಮತ್ತು ಜನರಿಗೆ ಉದ್ಯೋಗ ಸೃಷ್ಟಿಗೆ ಕಾರಣವಾಗುತ್ತದೆ ಎಂದಿದ್ದಾರೆ ಅವರು. ಯೋಜನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ https://pmsuryaghar.gov.in ಗೆ ಭೇಟಿ ನೀಡಿ.

ಎಲ್ಲಾ ವಸತಿ ಗ್ರಾಹಕರು, ವಿಶೇಷವಾಗಿ ಯುವಕರು, ಪ್ರಧಾನಮಂತ್ರಿ-ಸೂರ್ಯ ಘರ್: ಮುಫ್ಟ್ ಬಿಜ್ಲಿ ಯೋಜನೆಗೆ https://pmsuryaghar.gov.in ನಲ್ಲಿಅರ್ಜಿ ಸಲ್ಲಿಸುವ ಮೂಲಕ “ನಾವು ಸೌರಶಕ್ತಿ ಮತ್ತು ಸುಸ್ಥಿರ ಪ್ರಗತಿಯನ್ನು ಹೆಚ್ಚಿಸೋಣ ಎಂದು ಮೋದಿ ಹೇಳಿದರು. ಸೌರ ಮೇಲ್ಛಾವಣಿಗಾಗಿ, ಸೌರ ದ್ಯುತಿವಿದ್ಯುಜ್ಜನಕ (PV) ಫಲಕಗಳನ್ನು ಕಟ್ಟಡ, ಮನೆ ಅಥವಾ ವಸತಿ ಆಸ್ತಿಯ ಮೇಲೆ ಇರಿಸಲಾಗುತ್ತದೆ.

ಹಸಿರು ಶಕ್ತಿಗೆ ಕೇಂದ್ರದ ಒತ್ತಾಯ

ಸೌರ ಫಲಕಗಳನ್ನು ಅಳವಡಿಸುವ ಯೋಜನೆಯನ್ನು 2024-25 ರ ಮಧ್ಯಂತರ ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದರು. ಸೋಲಾರ್ ಅಳವಡಿಕೆಗಳನ್ನು ಖರೀದಿಸಲು ಮತ್ತು ಗ್ರಿಡ್‌ಗೆ ಶಕ್ತಿಯನ್ನು ಮರಳಿ ನೀಡಲು ಜನರಿಗೆ ಪ್ರೋತ್ಸಾಹವನ್ನು ನೀಡುವ ಮೇಲ್ಛಾವಣಿಯ ಸೌರ ಉಪಕ್ರಮವು ವಾರ್ಷಿಕವಾಗಿ ₹ 15,000 ಉಳಿತಾಯಕ್ಕೆ ಕಾರಣವಾಗಬಹುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಇದನ್ನೂ ಓದಿ: 1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಸುವ ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ 

2024-25ರ ಸೋಲಾರ್ (ಗ್ರಿಡ್) ಗೆ ಮುಂದಿನ ಹಣಕಾಸು ವರ್ಷಕ್ಕೆ ₹ 10,000 ಕೋಟಿಯಷ್ಟು ಹಂಚಿಕೆಯಾಗಿದೆ, 2023-24 ರಲ್ಲಿ ₹ 4,970 ಕೋಟಿ ಹಂಚಿಕೆ ಆಗಿತ್ತು. ಪವನ ವಿದ್ಯುತ್ (ಗ್ರಿಡ್) ಗೆ 2023-24 ರಲ್ಲಿ ₹ 1,214 ಕೋಟಿ ವೆಚ್ಚಕ್ಕೆ ಹೋಲಿಸಿದರೆ ₹ 930 ಕೋಟಿಗಳನ್ನು ನಿಗದಿಪಡಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್