Madhya Pradesh Bus Accident: ಬಸ್​ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಪರಿಹಾರ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದಾರೆ.

  • TV9 Web Team
  • Published On - 15:15 PM, 16 Feb 2021
Madhya Pradesh Bus Accident: ಬಸ್​ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆ; 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ನಾಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ದೃಶ್ಯ

ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಬಸ್​ ದುರಂತ (Madhya Pradesh Bus Accident)ದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಇಂದು ಬೆಳಗ್ಗೆ ಸುಮಾರು 54 ಪ್ರಯಾಣಿಕರು ಇದ್ದ ಬಸ್​ ನಾಲೆಗೆ ಉರುಳಿತ್ತು. ಈ ನಾಲೆ 30 ಅಡಿ ಆಳವಿದ್ದು, ಮೊದಲು ಅರ್ಧ ಮುಳುಗಿದ್ದ ಬಸ್​ ನಂತರ ಪೂರ್ತಿಯಾಗಿ ಮುಳುಗಿ ಹೋಗಿತ್ತು. ಅಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಇದುವರೆಗೆ ಯಾರೂ ಜೀವ ಸಹಿತ ಸಿಕ್ಕಿಲ್ಲ. ಒಟ್ಟು 39 ಮೃತದೇಹಗಳನ್ನು ನೀರಿನಾಳದಿಂದ ಹೊರತೆಗೆಯಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಬಸ್​ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಂದಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಹಾಗೇ, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಪರಿಹಾರ ನೀಡಲು ಅನುಮೋದನೆ ನೀಡಿದ್ದಾರೆ.  ಗಾಯಾಳುಗಳಿಗೆ 50,000 ರೂ. ನೀಡುವ ಭರವಸೆಯನ್ನೂ ನೀಡಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಸಾತ್ನಾಕ್ಕೆ ಹೊರಟಿದ್ದ ಖಾಸಗಿ ಬಸ್​ ಸಿಧಿಯ ರಾಂಪುರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿರುವ ಶಾರದಾ ನಾಲೆಯಲ್ಲಿ ಉರುಳಿ ಬೀಳಲು, ಚಾಲಕನ ನಿಯಂತ್ರಣ ತಪ್ಪಿದ್ದೇ ಕಾರಣ ಎನ್ನಲಾಗಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್​ ಸಿಂಗ್ ಚೌಹಾಣ್​ ಕೂಡ ಘಟನೆಯ ಬಗ್ಗೆ ಈಗಾಗಲೇ ಸಮಗ್ರ ಮಾಹಿತಿ ಪಡೆದಿದ್ದಾರೆ.

ಇದನ್ನೂ ಓದಿ: Madhya pradesh Bus Accident: ನಾಲೆಗೆ ಬಿದ್ದ ಬಸ್​; 32 ಮೃತದೇಹಗಳನ್ನು ಹೊರತೆಗೆದ ರಕ್ಷಣಾ ಸಿಬ್ಬಂದಿ