ಕರ್ನಾಟಕಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ; ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತ
ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು.
ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ (International Yoga Day) ಪ್ರಯುಕ್ತ ಪ್ರಧಾನಿ ನರೇಂದ್ರ ಇಂದು (ಜೂನ 20) ಯಲಹಂಕ ವಾಯುನೆಲೆಗೆ ಆಗಮಿಸಿದರು. ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ನಗರಕ್ಕೆ ಆಗಮಿಸಿದ ಪ್ರಧಾನ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರು ಆತ್ಮೀಯವಾಗಿ ಸ್ವಾಗತಿಸಿದರು. IAFನ ವಿಶೇಷ ವಿಮಾನದಲ್ಲಿ ಪ್ರಧಾನಿ ಮೋದಿ ಬಂದಿಳಿದರು. ಹೆಲಿಕಾಪ್ಟರ್ನಲ್ಲಿ ಹೆಡ್ ಕ್ವಾರ್ಟರ್ಸ್ ಟ್ರೈನಿಂಗ್ ಕಮಾಂಡ್ ಇಂಡಿಯನ್ ಏರ್‌ಫೋರ್ಸ್ಗೆ ಪ್ರಧಾನಿ ಮೋದಿ ತೆರಳಿದ್ದು, ಮಧ್ಯಾಹ್ನ 12.20ಕ್ಕೆ HQTC ಹೆಲಿಪ್ಯಾಡ್ ತಲುಪಲಿದ್ದಾರೆ. HQTCಯಿಂದ ರಸ್ತೆ ಮಾರ್ಗದಲ್ಲಿ IIScಗೆ ತೆರಳಲಿರುವ ಮೋದಿ, ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಿದ್ದಾರೆ. ಜೊತೆಗೆ ಬಾಗ್ಚಿ-ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಅಡಿಗಲ್ಲು ನೆರವೇರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೋಡಲು ಮೆಖ್ರಿ ಸರ್ಕಲ್ನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಜಾಮಾಯಿಸಿದ್ದು, ಜೈ ಜೈ ಮೋದಿ. ಜೈ ಶ್ರೀರಾಮ್ ಚಂದ್ರ ಕಿ ಜೈ ಅಂತಾ ಕಾರ್ಯಕರ್ತರು ಜೈಕಾರ ಹಾಕುತ್ತಿದ್ದಾರೆ. ರಸ್ತೆಯಲ್ಲಿ ನಿಂತಿರುವ ಕಾರ್ಯಕರ್ತರು ಹಾಗೂ ಜನರಲ್ಲಿ ಕಪ್ಪು ಬಟ್ಟೆ ಕಂಡುಬಂದರೆ ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ.
ಪ್ರಧಾನಿಯಿಂದ ಲೋಕಾರ್ಪಣೆ
1.ವಿಶ್ವೇಶ್ವರಯ್ಯ ರೈಲ್ವೇ ಟರ್ಮಿನಲ್
2.ಯಲಹಂಕ-ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ರೈಲ್ವೇ ಲೈನ್ ಡಬ್ಲಿಂಗ್
3. ಕೊಂಕಣ್ ರೈಲ್ವೇ ಶೇ.100 ವಿದ್ಯುದೀಕರಣ
ಪ್ರಧಾನಿ ಹಸಿರು ನಿಶಾನೆ:
ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿ ರೈಲಿಗೆ ಪ್ರಧಾನಿ ಮೋದಿ ಹಸಿರು ನಿಶಾನಿ ತೋರಲಿದ್ದಾರೆ.
ಇದನ್ನೂ ಓದಿ: Live: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ; ಲೈವ್ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಶಂಕುಸ್ಥಾಪನೆ
1.ಬೆಂಗಳೂರು ಸಬ್ ಅರ್ಬನ್ ರೈಲು
2. ಬೆಂಗಳೂರು ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲ್ವೇ ನಿಲ್ದಾಣ ಮರು ಅಭಿವೃದ್ಧಿ ಯೋಜನೆ
3. ಬೆಂಗಳೂರು ರಿಂಗ್ ರೋಡ್( 2 ಪ್ಯಾಕೇಜ್)
4.ನೆಲಮಂಗಲ-ತುಮಕೂರು ಸೆಕ್ಷನ್ 6 ಪಥ
5. ಪುಂಜಾಲಕಟ್ಟೆಯಿಂದ ಚಾರ್ಮಾಡಿ ಎನ್ ಹೆಚ್ 73 ಅಗಲೀಕರಣ
6.ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ಎನ್ ಹೆಚ್ 69 ಮೇಲ್ದರ್ಜೆಗೆ
7. ಬಹು ಮಾದರಿ ಲಾಜಿಸ್ಟಿಕ್ ಪಾರ್ಕ್, ನಂತರ ಸಬ್ ಅರ್ಬನ್ ರೈಲು ಯೋಜನೆ ಕುರಿತಂತೆ ಪೋಸ್ಟಲ್ ಕವರ್ ಬಿಡುಗಡೆ ಮಾಡಿ, 3.30. ರಿಂದ 4 ಗಂಟೆಯವರೆಗೆ ಅರ್ಧ ಗಂಟೆ ಕಾಲ ಮೋದಿ ಭಾಷಣ ಮಾಡಲಿದ್ದಾ. ನಂತರ 4 ಗಂಟೆಗೆ ವೇದಿಕೆಯಿಂದ ನಿರ್ಗಮಿಸಲಿದ್ದಾರೆ.
ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ
ನಾಳೆ (ಜೂನ್ 21) ಮೈಸೂರಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮೋದಿ ಕನ್ನಡಲ್ಲಿಯೇ ಟ್ವೀಟ್ ಮಾಡಿದ್ದಾರೆ. ಒಟ್ಟು ತಮ್ಮ ಎರಡು ದಿನಗಳ ರಾಜ್ಯ ಪ್ರವಾಸದ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ. ‘ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲ ಕಾರ್ಯಕ್ರಮ @iiscbangalore, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು’ ಎಂದು ಮೋದಿ ಟ್ವೀಟ್ನಲ್ಲಿ ತಿಳಿಸಿದ್ದಾರೆ. ರಾತ್ರಿ ಚಾಮುಂಡಿಬೆಟ್ಟಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ ಕೆಲವೇ ಹೊತ್ತಿನಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕರಿಗೆ ನಿರ್ಬಂಧಿಸಲಿದೆ. ನಾಳೆ ಬೆಳಗ್ಗೆ 7:00 ವರೆಗೆ ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:18 pm, Mon, 20 June 22