AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಟ್ರಂಪ್​ಗೆ ಬಹಳ ಪ್ರಾಮುಖ್ಯತೆ ನೀಡಿದ್ದಾರೆ; ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯೆ

ಪ್ರಧಾನಿ ನರೇಂದ್ರ ಮೋದಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಯಾವಾಗಲೂ ವೈಯಕ್ತಿಕವಾಗಿ ಉತ್ತಮ ಸಂಬಂಧ ಹೊಂದಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ಟ್ರಂಪ್ ಇಂದು ಮತ್ತೆ ಪ್ರಧಾನಿ ಮೋದಿಯನ್ನು ಸಾರ್ವಜನಿಕವಾಗಿ ಹೊಗಳಿದ ನಂತರ ಈ ಹೇಳಿಕೆಗಳು ಬಂದಿವೆ.

ಪ್ರಧಾನಿ ಮೋದಿ ಟ್ರಂಪ್​ಗೆ ಬಹಳ ಪ್ರಾಮುಖ್ಯತೆ ನೀಡಿದ್ದಾರೆ; ಅಮೆರಿಕ ತನ್ನ ರಾಗ ಬದಲಾಯಿಸುತ್ತಿದ್ದಂತೆ ವಿದೇಶಾಂಗ ಸಚಿವ ಜೈಶಂಕರ್ ಪ್ರತಿಕ್ರಿಯೆ
S Jaishankar
ಸುಷ್ಮಾ ಚಕ್ರೆ
|

Updated on:Sep 06, 2025 | 4:00 PM

Share

ನವದೆಹಲಿ, ಸೆಪ್ಟೆಂಬರ್ 6: ಸುಂಕದ ಕುರಿತಾದ ಉದ್ವಿಗ್ನತೆ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇಂದು ಮೋದಿ ಅವರನ್ನು “ಸ್ನೇಹಿತ” ಮತ್ತು “ಶ್ರೇಷ್ಠ ಪ್ರಧಾನಿ” ಎಂದು ಕರೆದಿದ್ದಾರೆ. ಈ ಬಗ್ಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರಧಾನಿ ಮೋದಿ (PM Modi) ಅವರು ಅಮೆರಿಕದ ಜೊತೆಗಿನ ನಮ್ಮ ಪಾಲುದಾರಿಕೆಗೆ ಅಪಾರ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಮೆರಿಕದ ಅಧ್ಯಕ್ಷ ಟ್ರಂಪ್ ಅವರಿಗೆ ಸಂಬಂಧಿಸಿದಂತೆ ಮೋದಿ ಯಾವಾಗಲೂ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಉತ್ತಮ ವೈಯಕ್ತಿಕ ಸಮೀಕರಣವನ್ನು ಹೊಂದಿದ್ದಾರೆ. ಆದರೆ ಈ ಸಮಯದಲ್ಲಿ ನಾನು ಅದಕ್ಕಿಂತ ಹೆಚ್ಚಿನದನ್ನು ಹೇಳಲು ಸಾಧ್ಯವಿಲ್ಲ” ಎಂದು ಜೈಶಂಕರ್ ಹೇಳಿದ್ದಾರೆ.

“ಪ್ರಧಾನಿ ಮೋದಿ ಅಮೆರಿಕ ಜೊತೆಗಿನ ನಮ್ಮ ಪಾಲುದಾರಿಕೆಗೆ ಅಗಾಧ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅವರು ಯಾವಾಗಲೂ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಉತ್ತಮ ವೈಯಕ್ತಿಕ ಸಮೀಕರಣವನ್ನು ಹೊಂದಿದ್ದಾರೆ. ಪ್ರಧಾನಿ ಮೋದಿ ಭಾರತ-ಯುಎಸ್​ ಸಂಬಂಧಗಳನ್ನು ಗೌರವಿಸುತ್ತಾರೆ” ಎಂದು ಜೈಶಂಕರ್ ಹೇಳಿದ್ದಾರೆ.

ಇದನ್ನೂ ಓದಿ: ಕರಾಳ ಚೀನಾಕ್ಕೆ ಭಾರತ, ರಷ್ಯಾ ಬಲಿ; ಸುಂಕದ ಉದ್ವಿಗ್ನತೆಯ ನಡುವೆ ಟ್ರಂಪ್ ಅಸಮಾಧಾನ

“ಪ್ರಧಾನಿ ಮೋದಿ ಅವರು ಅಮೆರಿಕ ಜೊತೆಗಿನ ನಮ್ಮ ಪಾಲುದಾರಿಕೆಗೆ ಅಗಾಧ ಪ್ರಾಮುಖ್ಯತೆಯನ್ನು ನೀಡುತ್ತಾರೆ. ಅಧ್ಯಕ್ಷ ಟ್ರಂಪ್ ಅವರಿಗೆ ಸಂಬಂಧಿಸಿದಂತೆ, ಅವರು ಯಾವಾಗಲೂ ಅಧ್ಯಕ್ಷ ಟ್ರಂಪ್ ಅವರೊಂದಿಗೆ ಉತ್ತಮ ವೈಯಕ್ತಿಕ ಸಮೀಕರಣವನ್ನು ಹೊಂದಿದ್ದಾರೆ. ಆದರೆ ಮುಖ್ಯ ವಿಷಯವೆಂದರೆ ನಾವು ಅಮೆರಿಕದೊಂದಿಗೆ ತೊಡಗಿಸಿಕೊಂಡಿದ್ದೇವೆ ಮತ್ತು ಈ ಸಮಯದಲ್ಲಿ, ನಾನು ಅದಕ್ಕಿಂತ ಹೆಚ್ಚಿನದನ್ನು ಹೇಳಲು ಸಾಧ್ಯವಿಲ್ಲ” ಎಂದು ಜೈಶಂಕರ್ ಹೇಳಿದ್ದಾರೆ.

ಟ್ರಂಪ್ ಅಮೆರಿಕದಲ್ಲಿ ಭಾರತೀಯ ಆಮದುಗಳ ಮೇಲೆ ಒಟ್ಟು 50% ಸುಂಕಗಳನ್ನು ವಿಧಿಸಿದ ನಂತರ ಇತ್ತೀಚಿನ ವಾರಗಳಲ್ಲಿ ಭಾರತ-ಯುಎಸ್ ಸಂಬಂಧಗಳು ಹದಗೆಟ್ಟಿವೆ. 25% ಮೂಲ ಸುಂಕವಾಗಿದ್ದರೆ, ಉಳಿದವುಗಳನ್ನು ಉಕ್ರೇನ್‌ನಲ್ಲಿ ಯುದ್ಧ ಸಾರಿರುವ ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿದೆ ಎಂಬ ಕಾರಣಕ್ಕೆ ಹೇರಲಾಗಿದೆ. ಭಾರತ ಈ ಕ್ರಮವನ್ನು ‘ಅಸಮಂಜಸ’ ಎಂದು ಕರೆದಿತ್ತು.

ಇದನ್ನೂ ಓದಿ: ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಟ್ರಂಪ್: ಮತ್ತೆ ಮೋದಿಯ ಹೊಗಳಿದ ಅಮೆರಿಕ ಅಧ್ಯಕ್ಷ!

ಇಂದು ಅಮೆರಿಕ ಅಧ್ಯಕ್ಷ ಟ್ರಂಪ್ ವಾಷಿಂಗ್ಟನ್‌ನಲ್ಲಿ ವರದಿಗಾರರನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿಯನ್ನು “ಶ್ರೇಷ್ಠ ಪ್ರಧಾನಿ” ಮತ್ತು “ಸ್ನೇಹಿತ” ಎಂದು ಉಲ್ಲೇಖಿಸಿದ್ದಾರೆ. ಭಾರತದ ಇತ್ತೀಚಿನ ಕೆಲವು ಕ್ರಮಗಳೊಂದಿಗೆ ಅವರು ಭಿನ್ನಾಭಿಪ್ರಾಯ ಹೊಂದಿದ್ದರೂ, ಭಾರತ-ಯುಎಸ್ ಸಂಬಂಧವು ವಿಶೇಷವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

“ನಾನು ಯಾವಾಗಲೂ ಮೋದಿಯೊಂದಿಗೆ ಸ್ನೇಹಿತನಾಗಿರುತ್ತೇನೆ. ಅವರು ಉತ್ತಮ ವ್ಯಕ್ತಿ. ಈ ನಿರ್ದಿಷ್ಟ ಕ್ಷಣದಲ್ಲಿ ಅವರು ಏನು ಮಾಡುತ್ತಿದ್ದಾರೆಯೋ ಅದು ನನಗೆ ಇಷ್ಟವಿಲ್ಲ. ಆದರೆ, ಆ ಬಗ್ಗೆ ಯೋಚನೆ ಮಾಡಬೇಕಾದುದು ಏನೂ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:57 pm, Sat, 6 September 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ