ಡಿಜಿಪಿ/ಐಜಿಪಿ​​ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ತಂತ್ರಜ್ಞಾನ ಬಳಕೆಗೆ ಕರೆ

ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ವಂಚನೆ, ಸೈಬರ್ ಅಪರಾಧಗಳು ಮತ್ತು ಡೀಪ್‌ಫೇಕ್ ತಂತ್ರಜ್ಞಾನದಿಂದ ಉಂಟಾಗುವ ಬೆದರಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಇದು ಸಾಮಾಜಿಕ ಮತ್ತು ಕೌಟುಂಬಿಕ ಸಂಬಂಧಗಳ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದಾರೆ. ಪೊಲೀಸರು ತಮ್ಮ ಕೆಲಸದ ಹೊರೆಯನ್ನು ಕಡಿಮೆ ಮಾಡಲು ತಂತ್ರಜ್ಞಾನ ಬಳಕೆಗೆ ಕರೆ ನೀಡಿದ್ದಾರೆ.

ಡಿಜಿಪಿ/ಐಜಿಪಿ​​ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ತಂತ್ರಜ್ಞಾನ ಬಳಕೆಗೆ ಕರೆ
ಡಿಜಿಪಿ/ಐಜಿಪಿ​​ 59ನೇ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ತಂತ್ರಜ್ಞಾನ ಬಳಕೆಗೆ ಕರೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 01, 2024 | 11:08 PM

ದೆಹಲಿ, ಡಿಸೆಂಬರ್​ 01: ಡಿಜಿಟಲ್ ವಂಚನೆ, ಸೈಬರ್ ಅಪರಾಧಗಳು ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಉಂಟಾಗುವ ಸಂಭಾವ್ಯ ಬೆದರಿಕೆ ಮತ್ತು ವಿಶೇಷವಾಗಿ ಸಾಮಾಜಿಕ ಹಾಗೂ ಕೌಟುಂಬಿಕ ಸಂಬಂಧಗಳಿಗೆ ಧಕ್ಕೆ ಉಂಟು ಮಾಡುವ ಡೀಪ್​​ ಫೇಕ್​ ಸಾಮರ್ಥ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಭಾನುವಾರದಂದು ಭುವನೇಶ್ವರದಲ್ಲಿ ನಡೆದ ಡಿಜಿಪಿ/ಐಜಿಪಿ​​ 59ನೇ ಅಖಿಲ ಭಾರತ ಸಮ್ಮೇಳನದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೊಲೀಸರು ತಮ್ಮ ಕೆಲಸದ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಂತ್ರಜ್ಞಾನದ ಬಳಕೆಗೆ ಕರೆ ನೀಡಿದ್ದಾರೆ. ಪೊಲೀಸ್ ಠಾಣೆಯನ್ನು ಸಂಪನ್ಮೂಲದ ಕೇಂದ್ರಬಿಂದುವನ್ನಾಗಿ ರೂಪಿಸುವಂತೆ ಸಲಹೆ ನೀಡಿದ್ದಾರೆ. ಭದ್ರತಾ ಸವಾಲುಗಳ ಬಗ್ಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ ಎಂದಿದ್ದಾರೆ.

ಇದನ್ನೂ ಓದಿ: ಸಮುದಾಯ ಉಳಿಯಲು ಕನಿಷ್ಠ 3 ಮಕ್ಕಳು ಅವಶ್ಯಕ: ಮೋಹನ್​ ಭಾಗವತ್​

ಡಿಜಿಟಲ್ ವಂಚನೆಗಳು, ಸೈಬರ್ ಅಪರಾಧಗಳು ಮತ್ತು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ ಉಂಟಾಗುವ ಸಂಭಾವ್ಯ ಬೆದರಿಕೆಗಳಿಗೆ ಪ್ರತಿಯಾಗಿ, ಭಾರತದ ಕೃತಕ ಬುದ್ಧಿಮತ್ತೆ ಮತ್ತು ಮಹತ್ವಾಕಾಂಕ್ಷೆಯ ಭಾರತದ ಡಬಲ್ ಕೃತಕ ಬುದ್ಧಿಮತ್ತೆ ಶಕ್ತಿಯನ್ನು ಬಳಸಿಕೊಳ್ಳುವ ಮೂಲಕ ಸವಾಲುಗಳನ್ನು ಅವಕಾಶವನ್ನಾಗಿ ಪರಿವರ್ತಿಸುವಂತೆ ಪ್ರಧಾನಿ ಮೋದಿ ಪೊಲೀಸ್​​ರಿಗೆ ಕರೆ ನೀಡಿದ್ದಾರೆ.

ಇನ್ನು ಪ್ರಧಾನಿ ಮೋದಿ ಸ್ಮಾರ್ಟ್ ಪೋಲೀಸಿಂಗ್ ಮಂತ್ರವನ್ನು ವಿಸ್ತರಿಸಿದ್ದು, ಪೊಲೀಸರು ಕಾರ್ಯತಂತ್ರ, ನಿಖರತೆ, ವಿಶ್ವಾಸಾರ್ಹ ಮತ್ತು ಪಾರದರ್ಶಕವಾಗಿರಬೇಕು ಎಂದಿದ್ದಾರೆ. ನಗರದಲ್ಲಿ ಕೈಗೊಂಡಿರುವ ಪೊಲೀಸ್​ಉಪಕ್ರಮಗಳನ್ನು ಶ್ಲಾಘಿಸಿದ್ದಾರೆ. ಪ್ರತಿಯೊಂದು ಉಪಕ್ರಮಗಳನ್ನು ಒಟ್ಟುಗೂಡಿಸಿ ದೇಶದ 100 ನಗರಗಳಲ್ಲಿ ಸಂಪೂರ್ಣವಾಗಿ ಜಾರಿಗೆ ತರುವಂತೆ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ನಿಲ್ಲಿಸಿ; ಆರ್‌ಎಸ್‌ಎಸ್‌ ಒತ್ತಾಯ

ಕೆಲವು ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹ್ಯಾಕಥಾನ್​ಗಳ ಯಶಸ್ಸಿನ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ, ರಾಷ್ಟ್ರೀಯ ಪೊಲೀಸ್ ಹ್ಯಾಕಥಾನ್ ನಡೆಸುವ ಬಗ್ಗೆಯೂ ಚರ್ಚಿಸಲು ಸಲಹೆ ನೀಡಿದ್ದಾರೆ. ಬಂದರು ಭದ್ರತೆಯ ಮೇಲೆ ಗಮನ ಹರಿಸುವುದಾಗಿ ಮತ್ತು ಅದಕ್ಕಾಗಿ ಭವಿಷ್ಯದಲ್ಲಿ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸುವ ಅಗತ್ಯಗಳ ಬಗ್ಗೆ ಒತ್ತಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:57 pm, Sun, 1 December 24