ಸಚಿವ ಪಿಯೂಶ್ ಗೋಯಲ್ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ: ವಿಡಿಯೋ ನೋಡಿ
ಗೌರಿಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ನಿವಾಸಕ್ಕೆ ಭೇಟಿ ನೀಡಿ ಗಣೇಶ ಪೂಜೆಯಲ್ಲಿ ಭಾಗಿಯಾದರು. ಈ ಕುರಿತಾಗಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನವದೆಹಲಿ, ಸೆಪ್ಟೆಂಬರ್ 14: ದೇಶಾದ್ಯಂತ ಇಂದು ಅದ್ಧೂರಿಯಾಗಿ ಗಣೇಶ ಉತ್ಸವ ಆಚರಿಸಲಾಗಿದೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ದೆಹಲಿಯಲ್ಲಿರು ನಿವಾಸಕ್ಕೆ ಭೇಟಿ ನೀಡಿ ಗಣೇಶ ಪೂಜೆಯಲ್ಲಿ ಭಾಗಿ ಆದರು. ಸ್ವತಃ ನರೇಂದ್ರ ಮೋದಿ ಅವರು ಅವರು ಆರತಿ ಮಾಡುವ ಮೂಲಕ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಬೆಳಿಗ್ಗೆ ದೇಶದ ಜನತೆಗೆ ಗಣೇಶ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ, ‘ಗಣೇಶನ ದರ್ಶನ, ಪೂಜೆಯಿಂದ ಜನರ ಬದುಕಿನಲ್ಲಿ ಹೊಸ ಶಕ್ತಿ, ಹೊಸ ಉತ್ಸಾಹ ಮೂಡಲಿ. ಗಣಪತಿಯ ದಿವ್ಯ ಆಶೀರ್ವಾದದಿಂದ ಎಲ್ಲರ ಕಾರ್ಯಗಳು ಯಶಸ್ವಿಯಾಗಲಿ’ ಎಂದ ಶುಭಹಾರೈಸಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

