ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?

2020ರಲ್ಲಿ ಅಡ್ಡಿಯೇ ಜಾಸ್ತಿಯಾಯಿತು. ನಮ್ಮ ದೇಶವಷ್ಟೇ ಅಲ್ಲ, ಇಡೀ ಜಗತ್ತು ಅನೇಕ ಏರಿಳಿತವನ್ನು ಕಂಡಿತು. ಆದರೆ ಈಗ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿರುವುದು ಸಮಾಧಾನಕರ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು.

ಹೊಸ ಕೃಷಿ ಕಾಯ್ದೆಗಳನ್ನು ಬಿಟ್ಟುಕೊಡುತ್ತಿಲ್ಲ ಪ್ರಧಾನಿ ಮೋದಿ.. FICCI ಸಭೆಯಲ್ಲಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ
Follow us
Lakshmi Hegde
| Updated By: ಸಾಧು ಶ್ರೀನಾಥ್​

Updated on: Dec 12, 2020 | 1:20 PM

ದೆಹಲಿ: ನೂತನ ಕೃಷಿ ಸುಧಾರಣಾ ಕಾಯ್ದೆಗಳಿಂದ ರೈತರಿಗೆ ಹೆಚ್ಚೆಚ್ಚು ಅವಕಾಶ ಮತ್ತು ನೂತನ ಮಾರುಕಟ್ಟೆ ಸೃಷ್ಟಿಯಾಗಿದೆ.. ಅಲ್ಲದೇ ಈಗ ಕೃಷಿಕರು ತಂತ್ರಜ್ಞಾನದ ಮೂಲಕವೂ ಸಂಪಾದನೆ ಮಾಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸುಧಾರಿತ ಕೃಷಿ ಕಾಯ್ದೆಗಳ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ವಾಪಸ್ ಪಡೆಯುವಂತೆ ಪಟ್ಟು ಹಿಡಿದಿದ್ದಾರೆ. ಆದರೆ ಪ್ರಧಾನಿ ಮೋದಿ ಎಲ್ಲ ಸಂದರ್ಭಗಳಲ್ಲೂ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಇಂದು ಫೆಡರೇಶನ್​ ಆಫ್​ ಇಂಡಿಯನ್​ ಚೇಂಬರ್ಸ್​ ಆಫ್​ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (Federation of Indian Chambers of Commerce & Industry –FICCI)ಯ 93ನೇ ವಾರ್ಷಿಕ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡುವಾಗಲೂ ಸಹ ನೂತನ ಕೃಷಿ ಕಾಯ್ದೆಗಳಿಂದಾಗುವ ಒಳಿತುಗಳ ಬಗ್ಗೆಯೇ ತಿಳಿಸಿದ್ದಾರೆ.

ಪ್ರಸ್ತುತ ಕಾಯ್ದೆಗಳಿಂದ ಕೃಷಿ ಕ್ಷೇತ್ರದಲ್ಲಿ ಹೂಡಿಕೆ ಹೆಚ್ಚಾಗಲಿದ್ದು, ರೈತರಿಗೆ ಲಾಭ ತಂದುಕೊಡಲಿದೆ. ಅದರಲ್ಲೂ ಸಣ್ಣ ರೈತರಿಗೆ ಅನುಕೂಲ ಹೆಚ್ಚು. ಈಗ ರೈತರು ತಮ್ಮ ಉತ್ಪನ್ನಗಳನ್ನು ಸ್ಥಳೀಯ ಮಂಡಿಯಲ್ಲೂ ಮಾರಾಟ ಮಾಡಬಹುದು. ಹೊರಗಿನ ಮಾರುಕಟ್ಟೆಯಲ್ಲೂ ಮಾರಬಹುದು. ಅಷ್ಟೇ ಏಕೆ, ಡಿಜಿಟಲ್​ ವೇದಿಕೆಯಲ್ಲೂ ಮಾರುವ ಅವಕಾಶ ಪಡೆದಿದ್ದಾರೆ. ಕೃಷಿಕರ ಆದಾಯ ಹೆಚ್ಚಳ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಕೃಷಿ ಕ್ಷೇತ್ರ ಮತ್ತು ಅದಕ್ಕೆ ಸಂಬಂಧಿಸಿದ ಪೂರಕ ವಲಯಗಳ ನಡುವೆ.. ಅಂದರೆ ಕೃಷಿಯ ಮೂಲಸೌಕರ್ಯಗಳು, ಆಹಾರ ಸಂಸ್ಕರಣೆ, ಶೇಖರಣೆ ಮತ್ತು ಶೀತಲೀಕರಣ ವ್ಯವಸ್ಥೆಗಳ ನಡುವೆ ಗೋಡೆ ಇತ್ತು. ಇದೀಗ ಅಂಥ ಅಡೆತಡೆಗಳನ್ನೆಲ್ಲ ತೊಡೆದುಹಾಕಲಾಗಿದೆ. ಹಾಗೇ, ಭಾರತದಲ್ಲಿ ಸ್ಪರ್ಧಾತ್ಮಕ ಅನುಕೂಲತೆಯುಳ್ಳ ಕ್ಷೇತ್ರದಲ್ಲಿ ತಂತ್ರಜ್ಞಾನ ಆಧಾರಿತ ಕೈಗಾರಿಕೆಗಳನ್ನು ಇನ್ನಷ್ಟು ಬಲಗೊಳಿಸಲು ಒತ್ತು ನೀಡಲಾಗುತ್ತಿದೆ ಎಂದು ಪ್ರಧಾನಿ ತಿಳಿಸಿದರು.

20-20ಯಿಂದ 2020ರವರೆಗೆ ಕ್ರಿಕೆಟ್​ನ 20-20 ಪಂದ್ಯದಲ್ಲಿ ಎಲ್ಲವೂ ವೇಗವಾಗಿ ಬದಲಾಗುವುದನ್ನು ನಾವು ನೋಡಿದ್ದೆವು. ಆದರೆ 2020ರಲ್ಲಿ ಅಡ್ಡಿಯೇ ಜಾಸ್ತಿಯಾಯಿತು. ನಮ್ಮ ದೇಶವಷ್ಟೇ ಅಲ್ಲ, ಇಡೀ ಜಗತ್ತು ಅನೇಕ ಏರಿಳಿತಗಳನ್ನು ಕಂಡಿತು. ಆದರೆ ಈಗ ಪರಿಸ್ಥಿತಿ ವೇಗವಾಗಿ ಸುಧಾರಿಸುತ್ತಿರುವುದು ಸಮಾಧಾನಕರ ಸಂಗತಿ ಎಂದು ನರೇಂದ್ರ ಮೋದಿ ಹೇಳಿದರು.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣ: ಕಿಂಗ್​ಪಿನ್ ಅರೆಸ್ಟ್

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ