PM Modi Birthday: ದ್ರೌಪದಿ ಮುರ್ಮು, ಅಮಿತ್ ಶಾ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರಿಂದ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ

ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ಮುಖ್ಯಮಂತ್ರಿಗಳಾದ ಅರವಿಂದ್ ಕೇಜ್ರಿವಾಲ್, ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

PM Modi Birthday: ದ್ರೌಪದಿ ಮುರ್ಮು, ಅಮಿತ್ ಶಾ, ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರಿಂದ ಪ್ರಧಾನಿ ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯ
ನರೇಂದ್ರ ಮೋದಿ Image Credit source: News18
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Sep 17, 2022 | 9:31 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ (Narendra Modi Birthday) 72ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮೂಲಕ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಸೃಜನಶೀಲತೆಯಿಂದ ರಾಷ್ಟ್ರ ನಿರ್ಮಾಣ ಅಭಿಯಾನ ನಡೆಯಬೇಕೆಂದು ನಾನು ಬಯಸುತ್ತೇನೆ. ನಿಮ್ಮ ನಾಯಕತ್ವದಲ್ಲಿ ದೇಶ ಪ್ರಗತಿಯನ್ನು ಮುಂದುವರೆಸಿದೆ. ದೇವರು ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಸಂಭ್ರಮ: ಸ್ವಾರ್ಥವಿಲ್ಲದೆ ದೇಶ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡ ನಾಯಕ ಎಂದು ಶುಭಕೋರಿದ ಸಿಎಂ ಬೊಮ್ಮಾಯಿ

ಪ್ರಧಾನಿ ಮೋದಿ ಅವರ 72ನೇ ಹುಟ್ಟುಹಬ್ಬದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭ ಹಾರೈಸಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಜನ್ಮದಿನದ ಶುಭಾಶಯಗಳು. ದೇಶದ ಅತ್ಯಂತ ಪ್ರೀತಿಯ ನಾಯಕ ಮತ್ತು ನಮ್ಮೆಲ್ಲರ ಸ್ಫೂರ್ತಿಯಾಗಿರುವ ಮೋದಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೇವರಿಂದ ದೀರ್ಘಾಯುಷ್ಯ ಸಿಗಲಿ. ಮೋದಿ ಅವರು ತಮ್ಮ ಚಿಂತನೆ ಮತ್ತು ಬಡವರ ಕಲ್ಯಾಣದ ದೃಢಸಂಕಲ್ಪದಿಂದ ಅಸಾಧ್ಯವಾದ ಕಾರ್ಯಗಳನ್ನು ಸಾಧ್ಯವೆಂದು ತೋರಿಸಿದ್ದಾರೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಪಿಎಂ ಮೋದಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ. “ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಅವರು ತಮ್ಮ ನೇತೃತ್ವದಲ್ಲಿ ದೇಶದ ಪ್ರಗತಿ ಮತ್ತು ಉತ್ತಮ ಆಡಳಿತಕ್ಕೆ ಅಭೂತಪೂರ್ವ ಶಕ್ತಿಯನ್ನು ನೀಡಿದ್ದಾರೆ. ದೇವರು ಅವರಿಗೆ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಲಿ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: PM Modi Birthday: ಇಂದು ಪ್ರಧಾನಿ ನರೇಂದ್ರ ಮೋದಿ 72ನೇ ಜನ್ಮದಿನ; ದೇಶಾದ್ಯಂತ ಬಿಜೆಪಿಯಿಂದ ವಿವಿಧತೆಯಲ್ಲಿ ಏಕತೆ, ರಕ್ತದಾನ, ಸ್ವಚ್ಛತಾ ಅಭಿಯಾನ ಆಯೋಜನೆ

‘ಪ್ರಧಾನಿ ಮೋದಿ ತಮ್ಮ ಜೀವನವನ್ನು ಜನರ ಕಲ್ಯಾಣಕ್ಕಾಗಿ ಸವೆಸಿದ್ದಾರೆ’ ಎಂದು ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ತಮ್ಮ ಜೀವನವನ್ನು ಜನರ ಕಲ್ಯಾಣಕ್ಕಾಗಿ ಬದ್ಧರಾಗಿದ್ದಾರೆ. ಅವರು ಪ್ರಯತ್ನ ಮಾಡದೇ ಇದ್ದಿದ್ದರೆ ಸರ್ದಾರ್ ಸರೋವರ ಅಣೆಕಟ್ಟು ಇರುತ್ತಿರಲಿಲ್ಲ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಈ ಹಿಂದೆ ನಮ್ಮ ಕುಂದುಕೊರತೆ ನಿವಾರಣೆಯಲ್ಲಿ ವಿಳಂಬವಾಗುತ್ತಿತ್ತು. ಆದರೆ ಈಗ ನಮ್ಮ ಸಮಸ್ಯೆಗಳನ್ನು ಪರಿಹರಿಸಲು ಕ್ಷಿಪ್ರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಎಂ ಶಿವರಾಜ್ ಸಿಂಗ್ ಹೇಳಿದ್ದಾರೆ.

ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ. ನಮ್ಮ ಅನೇಕ ನಾಗರಿಕರನ್ನು ಆವರಿಸಿರುವ ಕತ್ತಲೆಯನ್ನು ಹೋಗಲಾಡಿಸಲು ಮತ್ತು ಅವರಲ್ಲಿ ಪ್ರಗತಿ, ಅಭಿವೃದ್ಧಿ ಮತ್ತು ಸಾಮಾಜಿಕ ಸಾಮರಸ್ಯದ ಬೆಳಕನ್ನು ತರಲು ಮೋದಿ ಕೆಲಸ ಮಾಡಲಿ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

ನಮ್ಮ ಪ್ರಧಾನ ಮಂತ್ರಿಗಳಿಗೆ ಜನ್ಮ ದಿನದ ಶುಭ ಹಾರೈಕೆಗಳು. ನಿಮ್ಮ ದೃಷ್ಟಿಕೋನ, ನಾಯಕತ್ವ ಮತ್ತು ಶಕ್ತಿಯು ರಾಷ್ಟ್ರೀಯ ಪುನರುಜ್ಜೀವನವನ್ನು ಕೈಗೊಂಡ ಭಾರತಕ್ಕೆ ಸ್ಫೂರ್ತಿಯಾಗಿದೆ. ಜಾಗತಿಕ ವೇದಿಕೆಯಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗಿರುವುದಕ್ಕೆ ಮೋದಿಯವರ ಪ್ರಭಾವವು ಎಷ್ಟಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಕೇಂದ್ರ ಸಚಿವ ಡಾ. ಎಸ್​. ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಧೀಮಂತ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಜನತೆಯ ಪರವಾಗಿ ಜನ್ಮದಿನದ ಶುಭಾಶಯಗಳು. ಅವರಿಗೆ ಆಯುಷ್ಯ, ಆರೋಗ್ಯ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ನಮ್ಮ ಪ್ರೀತಿಯ ನಾಯಕ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ನಾಯಕತ್ವ, ಬದ್ಧತೆ ಮತ್ತು ದೂರದೃಷ್ಟಿ ರಾಷ್ಟ್ರಕ್ಕೆ ಸ್ಫೂರ್ತಿ ನೀಡುತ್ತದೆ. ನಿಮ್ಮ ಉತ್ತಮ ಆರೋಗ್ಯ ಮತ್ತು ರಾಷ್ಟ್ರವನ್ನು ಮುನ್ನಡೆಸುವಲ್ಲಿ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುವೆ ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಇಂದು ತಮ್ಮ 72ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತರಲಾದ 8 ಚಿರತೆಗಳನ್ನು ಬಿಡಲಿದ್ದಾರೆ. ಈ ಐತಿಹಾಸಿಕ ಸಂದರ್ಭದಲ್ಲಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿ (ಎನ್‌ಎಲ್‌ಪಿ) ಅನ್ನು ಬಿಡುಗಡೆ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬವನ್ನು ಆಚರಿಸಲು ಬಿಜೆಪಿ ದೇಶಾದ್ಯಂತ ‘ವೈವಿಧ್ಯತೆಯಲ್ಲಿ ಏಕತೆ’ ಹಬ್ಬಗಳು, ರಕ್ತದಾನ ಅಭಿಯಾನ, ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:30 am, Sat, 17 September 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್