ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣ ಸಂಬಂಧಿತ ಪ್ರಸ್ತುತ ಸ್ಥಿತಿಗತಿಯನ್ನು ಅವಲೋಕಿಸಲು ಪ್ರಧಾನಿ ಮೋದಿ ಇಂದು ಬೆಳಗ್ಗೆ 10.30ಕ್ಕೆ ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಕೊರೊನಾ ಕುರಿತು ಚರ್ಚಿಸಲು ಕರೆಯಲಾಗಿರುವ ಎರಡನೇ ಸರ್ವಪಕ್ಷ ಸಭೆ ಇದು. ಮೊದಲ ಸಭೆಯನ್ನು ಏಪ್ರಿಲ್ 20ರಂದು ದೇಶವ್ಯಾಪಿ ಲಾಕ್ಡೌನ್ ಬಗ್ಗೆ ಮಾತನಾಡಲು ಕರೆಯಲಾಗಿತ್ತು.
ದೀಪಾವಳಿ ನಂತರ ಕೊರೊನಾ ಪ್ರಕರಣಗಳಲ್ಲಿ ಉಂಟಾಗಿರುವ ಏರಿಳಿತ, ಚಳಿಗಾಲದ ಪರಿಣಾಮ, ಹೊಸವರ್ಷ, ಕ್ರಿಸ್ಮಸ್ ಸಂದರ್ಭದಲ್ಲಿ ರೂಪಿಸಬೇಕಾದ ನಿಯಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಿನ್ನೆಯಷ್ಟೇ ಪುಣೆ, ಅಹಮದಾಬಾದ್, ಹೈದರಾಬಾದ್ನ ಔಷಧ ತಯಾರಿಕೆ ಕಂಪೆನಿಗಳಿಗೆ ಪ್ರಧಾನಿ ಭೇಟಿ ನೀಡಿದ್ದರು. ಆದ್ದರಿಂದ, ಸಭೆಯಲ್ಲಿ ಕೊರೊನಾ ಲಸಿಕೆಯ ಕುರಿತು ಚರ್ಚಿಸಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದೆ.
ಇದನ್ನೂ ಓದಿ: ಕೊರೊನಾ ಲಸಿಕೆ ಭಾರತದ ಮಾರುಕಟ್ಟೆಯಲ್ಲಿ ಯಾವಾಗ ಸಿಗಲಿದೆ ಗೊತ್ತಾ? ಇಲ್ಲಿದೆ ಮಾಹಿತಿ