AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ

PM Modi greetings to new Tamil Nadu CM Joseph Vijay: ತಮಿಳುನಾಡು ನೂತನ ಮುಖ್ಯಮಂತ್ರಿಯಾದ ಜೋಸೆಫ್ ವಿಜಯ್​ಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಅಭಿನಂದನೆ ಹೇಳಿದ್ದಾರೆ. ಈ ಮುಂಚೆಯೂ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಅವರನ್ನು ಮೋದಿ ಅಭಿನಂದಿಸಿದ್ದರು. ಈ ಪೋಸ್ಟ್​ಗೆ ವಿಜಯ್ ಪ್ರತಿಕ್ರಿಯಿಸಿ, ಥ್ಯಾಕ್ಸ್ ಹೇಳಿದ್ದಾರೆ. ಇಂದು ಭಾನುವಾರ ವಿಜಯ್ ಸಿಎಂ ಆದರೆ, 9 ಮಂದಿ ಸಚಿವರಾಗಿ ಪ್ರಮಾಣವಚನ ಪಡೆದಿದ್ದಾರೆ.

ತಮಿಳುನಾಡು ನೂತನ ಸಿಎಂ ಜೋಸೆಫ್ ವಿಜಯ್​ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2026 | 10:00 PM

Share

ಚೆನ್ನೈ, ಮೇ 10: ಭಾನುವಾರ ಬೆಳಗ್ಗೆ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜೋಸೆಫ್ ವಿಜಯ್ (Joseph Vijay) ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿನಂದಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ ದೂರವಾಣಿ ಕರೆ ಮಾಡಿ ವಿಜಯ್ ಜೊತೆ ಮಾತನಾಡಿದರು. ಹಾಗೆಯೇ, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿ, ಉತ್ತಮ ಆಡಳಿತಕ್ಕೆ ಶುಭ ಕೋರಿದರು ಎನ್ನಲಾಗಿದೆ.

ಪ್ರಧಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲ್ಲಿಸಿದ ಅಭಿನಂದನೆಗೆ ಜೋಸೆಫ್ ವಿಜಯ್ ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ತಮ್ಮ ಜನತೆಯ ಕಲ್ಯಾಣ ಮತ್ತು ಪ್ರಗತಿಯು ತನ್ನ ಏಕೈಕ ಗುರಿಯಾಗಿದೆ. ತಮಿಳುನಾಡಿನ ಪ್ರಗತಿಗೆ ಕೇಂದ್ರ ಸರ್ಕಾರ ಸಹಕಾರ ಮತ್ತು ಬೆಂಬಲ ನೀಡುವ ಅಪೇಕ್ಷೆಯಲ್ಲಿದ್ದೇವೆ ಎಂದು ಮಾಜಿ ನಟ ವಿಜಯ್ ತಿಳಿಸಿದ್ದಾರೆ.

ಜೋಸೆಫ್ ವಿಜಯ್ ಅವರ ಟ್ವೀಟ್

ಇದನ್ನೂ ಓದಿ: ವಿಜಯ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮೊದಲು ವಂದೇ ಮಾತರಂ, ನಂತರ ಜನಗಣಮನ, ತಮಿಳು ಗೀತೆ; ಇದು ಹೊಸ ಮೆಸೇಜಾ?

ಇತ್ತೀಚಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಜೋಸೆಫ್ ವಿಜಯ್ ಅವರ ಟಿವಿಕೆ ಪಕ್ಷ 108 ಸ್ಥಾನಗಳನ್ನು ಗೆದ್ದಿದೆ. 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕಿತ್ತು. ಕಾಂಗ್ರೆಸ್ ಹಾಗು ಇತರ ಕೆಲ ಪಕ್ಷಗಳ ಬೆಂಬಲದೊಂದಿಗೆ ಟಿವಿಕೆ ಸರ್ಕಾರ ರಚಿಸಿದೆ. ಭಾನುವಾರ ವಿಜಯ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಜೊತೆ 9 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ಮಾಡಿದ್ದಾರೆ.

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಹುಲ್ ಗಾಂಧಿ ಮೊದಲಾದ ನಾಯಕರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಕ್ಕೆ ರಾಹುಲ್ ಗಾಂಧಿ ಅವರಿಗೆ ಜೋಸೆಫ್ ವಿಜಯ್ ಧನ್ಯವಾದ ಕೂಡ ಹೇಳಿದ್ದಾರೆ.

ಇದನ್ನೂ ಓದಿ: ವಿಜಯ್ ಮಂತ್ರಿಮಂಡಲ; ಎಂಜಿಆರ್ ಒಡನಾಡಿ, ವೈದ್ಯ, ಸಂಘಟನಾ ಚತುರ, ಯುವತಿ, ಚಿತ್ರ ನಟ ಮೊದಲಾದವರು…

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ವಿಪಕ್ಷ ನಾಯಕರಾಗಿದ್ದಾರೆ. ಜೋಸೆಫ್ ವಿಜಯ್ ಅವರು ತಮ್ಮ ಸರ್ಕಾರದಲ್ಲಿ ತಾನೊಬ್ಬನೇ ಏಕೈಕ ಪವರ್ ಸೆಂಟರ್ ಆಗಿದ್ದು ಎಂದು ಹೇಳುವ ಮೂಲಕ ತಾನು ಸರ್ವೋಚ್ಚ ನಾಯಕ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ಭರಪೂರ ಭರವಸೆಗಳನ್ನು ಕೊಟ್ಟಿದ್ದು, ಅದನ್ನು ಈಡೇರಿಸುವ ದೊಡ್ಡ ಸವಾಲು ವಿಜಯ್ ಎದುರಿಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!