AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನಲ್ಲಿ ಕೇಬಲ್ ಸೇತುವೆ ಕುಸಿದು ದುರಂತ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಮೋದಿ ರೋಡ್ ಶೋ ಕ್ಯಾನ್ಸಲ್

ಗುಜರಾತ್‌ನಲ್ಲಿ ಕೇಬಲ್ ಸೇತುವೆ ಕುಸಿದು ದೊಡ್ಡ ದುರಂತ ಸಂಭವಿಸಿದ್ದು, ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇವೆ| ಈ ಹಿನ್ನೆಲೆಯಲ್ಲಿ ಮೋದಿ ಕಾರ್ಯಕ್ರಮಗಳು ರದ್ದಾಗಿವೆ,

ಗುಜರಾತ್‌ನಲ್ಲಿ ಕೇಬಲ್ ಸೇತುವೆ ಕುಸಿದು ದುರಂತ: ಸಾವಿನ ಸಂಖ್ಯೆ 90ಕ್ಕೆ ಏರಿಕೆ, ಮೋದಿ ರೋಡ್ ಶೋ ಕ್ಯಾನ್ಸಲ್
PM Modi
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 31, 2022 | 12:01 PM

ಗಾಂಧಿನಗರ: ಗುಜರಾತ್‌ನ ಮೊರ್ಬಿ (Morbi) ಜಿಲ್ಲೆಯ ಮಚ್ಚು ನದಿಗೆ (Machchhu river) ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ (cable bridge) ಇಂದು (ಅಕ್ಟೋಬರ್ 30) ಕುಸಿದು ಬಿದಿದ್ದು, ದೊಡ್ಡ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಈವರೆಗೆ ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದ್ದು, ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಅವರ ಗುಜರಾತ್ ಕಾರ್ಯಕ್ರಮಗಳು ರದ್ದಾಗಿವೆ.

ನಾಳೆ ಅಂದ್ರೆ ಅಕ್ಟೋಬರ್ 31ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಪ್ರವಾಸ ನಿಗದಿಯಾಗಿತ್ತು  ಆದ್ರೆ, ಸೇತುವೆ ದುರಂತ ಸಂಭವಿಸಿದ್ದರಿಂದ ಮೋದಿ ಅವರ ಗುಜರಾತ್ ಪ್ರವಾಸ ಕಾರ್ಯಕ್ರಮಗಳು ಕ್ಯಾನ್ಸಲ್​ ಆಗಿವೆ. ಸೋಮವಾರ ಅಹಮದಾಬಾದ್‌ನಲ್ಲಿ ರೋಡ್‌ ಶೋ ನಿಗದಿಯಾಗಿಯಾಗಿತ್ತು. ಆದ್ರೆ, ಇದೀಗ ಎಲ್ಲಾ ಕಾರ್ಯಕ್ರಮಗಳನ್ನ ರದ್ದು ಮಾಡಿದ್ದು,  ಮೂಲಗಳ ಪ್ರಕಾರ ನರೇಂದ್ರ ಮೋದಿ ಅವರು ಗುಜರಾತ್​ಗೆ ಆಗಮಿಸಿ ಮೊರ್ಬಿ ನದಿ ಸೇತುವೆ ದುರಂತದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Breaking News ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿತ; 35 ಮಂದಿ ಸಾವು

ಇನ್ನು ಮೊರ್ಬಿ ನದಿ ತೀರದಲ್ಲಿ ಎನ್​ಡಿಆರ್​ಎಫ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಚರಣೆ ನಡೆಸಿವೆ. ಆದರೂ ಜನರನ್ನು ತ್ವರಿಗತಿಯಲ್ಲಿ ರಕ್ಷಣೆ ಮಾಡಲು ಆಗುತ್ತಿಲ್ಲ. ಇದರಿಂದ ವಾಯುಸೇನೆ, ನೌಕಪಡೆಯನ್ನೂ ಸಹ ದುರಂತ ಸ್ಥಳಕ್ಕೆ ನಿಯೋಜಿಸಲಾಗಿದೆ. ಅಲ್ಲದೇ ಜನರನ್ನು ಏರ್ ಲಿಫ್ಟ್ ಮಾಡಲು ಹೆಲಿಕಾಪ್ಟರ್ ಸಹ ಕಳುಹಿಸಲಾಗಿದೆ.

ಈಗಾಗಲೇ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಪರಿಶೀಲನೆ ನಡೆಸಿದ್ದಾರೆ. ಭೂಪೇಂದ್ರ ಅವರು ಮೃತ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನು ಕೇಂದ್ರ ಸರ್ಕಾರವು ಸಹ ಮೃತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿದೆ.

Published On - 12:07 am, Mon, 31 October 22

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ