ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ

Lok Sabha Elections 2024: ರಾಹುಲ್​ ಗಾಂಧಿ ಅಮೇಥಿಯಂತೆ ವಯನಾಡಿನಿಂದಲೂ ಓಡಿಹೋಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್​ ಈಗಾಗಲೇ ಸೋಲು ಒಪ್ಪಿಕೊಂಡಿದೆ. ರಾಹುಲ್​ ಗಾಂಧಿ ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಘೋಷನೆ ಮಾಡುತ್ತಾರೆ ಎಂದಿದ್ದಾರೆ.

ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on: Apr 21, 2024 | 8:55 AM

ವಯನಾಡಿ(Wayanad)ನಲ್ಲಿ ಏಪ್ರಿಲ್​ 26ರಂದು ಮತದಾನ ಮುಗಿದ ಬಳಿಕ ರಾಹುಲ್​ ಗಾಂಧಿ(Rahul Gandhi) ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಾಂಗ್ರೆಸ್​ ಸೋಲನ್ನು ಒಪ್ಪಿಕೊಂಡಿದೆ, ಹಿರಿಯ ನಾಯಕರು ಲೋಕಸಭೆ(Lok Sabha)ಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದರು. 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲೂ ಜನಬೆಂಬಲ ಪಡೆಯುವುದು ಕಷ್ಟವಾಗಿರುವುದರಿಂದ ಅಲ್ಲಿಂದಲೂ ಓಡಿಹೋಗುವುತ್ತಾರೆ ಎಂದು ಮೋದಿ ಟೀಕಿಸಿದ್ದಾರೆ.

ವಯನಾಡ್‌ನಿಂದ ಎರಡನೇ ಅವಧಿಗೆ ರಾಹುಲ್​ ಗಾಂಧಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. . 2019 ರಲ್ಲಿ, ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತರು. ಆದರೆ ಅವರು ವಯನಾಡಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

ಇಂಡಿಯಾ ಒಕ್ಕೂಟದ ನಾಯಕರ್ಯಾರು ಎಂಬುದನ್ನು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ.

ಮತ್ತಷ್ಟು ಓದಿ: PM Modi in Bengaluru: ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್; ಬೆಂಗಳೂರಿನಲ್ಲಿ ಮೋದಿ ವ್ಯಂಗ್ಯ

ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಮೇ 20 ರವರೆಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಂದೇಡ್‌ನಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಪಕ್ಷದ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುದನ್ನು ಹೆಚ್ಚಿನ ಮತದಾನದ ಶೇಕಡಾವಾರು ತೋರಿಸುತ್ತದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್​ ತನ್ನನ್ನು ಬೆಂಬಲಿಸುವವನನ್ನೇ ಬಾಡಿಸುವ ಬಳ್ಳಿ ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡ ಪ್ರಧಾನಿ ಮೋದಿ, ‘ಕಾಂಗ್ರೆಸ್ ಅಂತಹ ಬಳ್ಳಿಯಾಗಿದ್ದು, ಅದು ಬೇರುಗಳಿಲ್ಲ, ಸ್ವಂತ ಭೂಮಿ ಇಲ್ಲ ಮತ್ತು ಬೆಂಬಲಿಸುವವರನ್ನು ಒಣಗಿಸುತ್ತದೆ. ಸ್ವಾತಂತ್ರ್ಯದ ಸಮಯದಲ್ಲಿ ಕಾಂಗ್ರೆಸ್ ದೇಶವನ್ನು ವಿಭಜಿಸಿತು, ಸ್ವಾತಂತ್ರ್ಯದ ನಂತರ ಕಾಶ್ಮೀರದ ಸಮಸ್ಯೆಯನ್ನು ಸೃಷ್ಟಿಸಿತು. 370ರ ನೆಪದಲ್ಲಿ ಕಾಶ್ಮೀರದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ಜಾರಿಗೆ ತರಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ.

ಕಳೆದ ಅವಧಿಯಲ್ಲಿ ನಾವು ಚಂದ್ರಯಾನದ ಯಶಸ್ಸನ್ನು ನೋಡಿದ್ದೇವೆ, ಮುಂದಿನ ಅವಧಿಯಲ್ಲಿ ದೇಶದ ಜನರು ಗಗನಯಾನದ ಯಶಸ್ಸನ್ನು ಕಾಣುತ್ತಾರೆ. ಕೇವಲ 10 ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಬಹಳ ದೂರ ಕ್ರಮಿಸಿದೆ. ನಿಮ್ಮ ಕನಸುಗಳೇ ನನ್ನ ಸಂಕಲ್ಪ ಎಂದು ಪ್ರಧಾನಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು