ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ

Lok Sabha Elections 2024: ರಾಹುಲ್​ ಗಾಂಧಿ ಅಮೇಥಿಯಂತೆ ವಯನಾಡಿನಿಂದಲೂ ಓಡಿಹೋಗುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕಾಂಗ್ರೆಸ್​ ಈಗಾಗಲೇ ಸೋಲು ಒಪ್ಪಿಕೊಂಡಿದೆ. ರಾಹುಲ್​ ಗಾಂಧಿ ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ಬೇರೆ ಕ್ಷೇತ್ರದಿಂದ ಸ್ಪರ್ಧಿಸುವ ಘೋಷನೆ ಮಾಡುತ್ತಾರೆ ಎಂದಿದ್ದಾರೆ.

ವಯನಾಡಿನಲ್ಲಿ ಮತದಾನ ಮುಗಿಯುತ್ತಿದ್ದಂತೆ ರಾಹುಲ್ ಇನ್ನೊಂದು ಕಡೆ ಸ್ಪರ್ಧಿಸುವುದಾಗಿ ಘೋಷಿಸ್ತಾರೆ: ಮೋದಿ
ನರೇಂದ್ರ ಮೋದಿ

Updated on: Apr 21, 2024 | 8:55 AM

ವಯನಾಡಿ(Wayanad)ನಲ್ಲಿ ಏಪ್ರಿಲ್​ 26ರಂದು ಮತದಾನ ಮುಗಿದ ಬಳಿಕ ರಾಹುಲ್​ ಗಾಂಧಿ(Rahul Gandhi) ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಕಾಂಗ್ರೆಸ್​ ಸೋಲನ್ನು ಒಪ್ಪಿಕೊಂಡಿದೆ, ಹಿರಿಯ ನಾಯಕರು ಲೋಕಸಭೆ(Lok Sabha)ಗೆ ಸ್ಪರ್ಧಿಸುವ ಬದಲು ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದರು. 2019ರಲ್ಲಿ ಅಮೇಥಿಯಿಂದ ಓಡಿಹೋದಂತೆ ಕೇರಳದ ವಯನಾಡಿನಲ್ಲೂ ಜನಬೆಂಬಲ ಪಡೆಯುವುದು ಕಷ್ಟವಾಗಿರುವುದರಿಂದ ಅಲ್ಲಿಂದಲೂ ಓಡಿಹೋಗುವುತ್ತಾರೆ ಎಂದು ಮೋದಿ ಟೀಕಿಸಿದ್ದಾರೆ.

ವಯನಾಡ್‌ನಿಂದ ಎರಡನೇ ಅವಧಿಗೆ ರಾಹುಲ್​ ಗಾಂಧಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. . 2019 ರಲ್ಲಿ, ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋತರು. ಆದರೆ ಅವರು ವಯನಾಡಿನಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದರು.

ಇಂಡಿಯಾ ಒಕ್ಕೂಟದ ನಾಯಕರ್ಯಾರು ಎಂಬುದನ್ನು ಹೇಳಲು ಒಕ್ಕೂಟಕ್ಕೆ ಸಾಧ್ಯವಾಗುತ್ತಿಲ್ಲ. ಚುನಾವಣೆ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಾಯಕರು ಸೋಲನ್ನು ಒಪ್ಪಿಕೊಂಡಿದ್ದಾರೆ. ಮಹಾರಾಷ್ಟ್ರದ ಅಭಿವೃದ್ಧಿಗೆ ಕಾಂಗ್ರೆಸ್ ಅಡ್ಡಗಾಲು ಹಾಕುತ್ತಿದೆ.

ಮತ್ತಷ್ಟು ಓದಿ: PM Modi in Bengaluru: ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದ ಕಾಂಗ್ರೆಸ್; ಬೆಂಗಳೂರಿನಲ್ಲಿ ಮೋದಿ ವ್ಯಂಗ್ಯ

ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಮೇ 20 ರವರೆಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ನಾಂದೇಡ್‌ನಲ್ಲಿ ಎರಡನೇ ಹಂತದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಪಕ್ಷದ ನಾಯಕರು ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗುತ್ತಿಲ್ಲ. ಭಾರತದ ಪ್ರಜಾಸತ್ತಾತ್ಮಕ ಶಕ್ತಿ ಹೆಚ್ಚುತ್ತಿದೆ ಎಂಬುದನ್ನು ಹೆಚ್ಚಿನ ಮತದಾನದ ಶೇಕಡಾವಾರು ತೋರಿಸುತ್ತದೆ ಎಂದು ಮೋದಿ ಹೇಳಿದರು.

ಕಾಂಗ್ರೆಸ್​ ತನ್ನನ್ನು ಬೆಂಬಲಿಸುವವನನ್ನೇ ಬಾಡಿಸುವ ಬಳ್ಳಿ
ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡ ಪ್ರಧಾನಿ ಮೋದಿ, ‘ಕಾಂಗ್ರೆಸ್ ಅಂತಹ ಬಳ್ಳಿಯಾಗಿದ್ದು, ಅದು ಬೇರುಗಳಿಲ್ಲ, ಸ್ವಂತ ಭೂಮಿ ಇಲ್ಲ ಮತ್ತು ಬೆಂಬಲಿಸುವವರನ್ನು ಒಣಗಿಸುತ್ತದೆ. ಸ್ವಾತಂತ್ರ್ಯದ ಸಮಯದಲ್ಲಿ ಕಾಂಗ್ರೆಸ್ ದೇಶವನ್ನು ವಿಭಜಿಸಿತು, ಸ್ವಾತಂತ್ರ್ಯದ ನಂತರ ಕಾಶ್ಮೀರದ ಸಮಸ್ಯೆಯನ್ನು ಸೃಷ್ಟಿಸಿತು. 370ರ ನೆಪದಲ್ಲಿ ಕಾಶ್ಮೀರದಲ್ಲಿ ಬಾಬಾ ಸಾಹೇಬರ ಸಂವಿಧಾನವನ್ನು ಜಾರಿಗೆ ತರಲು ಕಾಂಗ್ರೆಸ್ ಅವಕಾಶ ನೀಡಲಿಲ್ಲ.

ಕಳೆದ ಅವಧಿಯಲ್ಲಿ ನಾವು ಚಂದ್ರಯಾನದ ಯಶಸ್ಸನ್ನು ನೋಡಿದ್ದೇವೆ, ಮುಂದಿನ ಅವಧಿಯಲ್ಲಿ ದೇಶದ ಜನರು ಗಗನಯಾನದ ಯಶಸ್ಸನ್ನು ಕಾಣುತ್ತಾರೆ. ಕೇವಲ 10 ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಬಹಳ ದೂರ ಕ್ರಮಿಸಿದೆ. ನಿಮ್ಮ ಕನಸುಗಳೇ ನನ್ನ ಸಂಕಲ್ಪ ಎಂದು ಪ್ರಧಾನಿ ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us