Pahalgam Attack: ದುಷ್ಟರ ಉದ್ದೇಶವೆಂದೂ ಯಶಸ್ವಿಯಾಗದು; ಪಹಲ್ಗಾಮ್ ದಾಳಿಗೆ ಮೋದಿ ಖಂಡನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದಾರೆ. ದುಷ್ಟ ಶಕ್ತಿಗಳ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, 'ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು' ಎಂದು ಭರವಸೆ ನೀಡಿದ್ದಾರೆ. ಹಾಗೇ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

Pahalgam Attack: ದುಷ್ಟರ ಉದ್ದೇಶವೆಂದೂ ಯಶಸ್ವಿಯಾಗದು; ಪಹಲ್ಗಾಮ್ ದಾಳಿಗೆ ಮೋದಿ ಖಂಡನೆ
Narendra Modi

Updated on: Apr 22, 2025 | 8:33 PM

ನವದೆಹಲಿ, ಏಪ್ರಿಲ್ 22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terror Attack) ಅಮಾಯಕ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಖಂಡಿಸಿದ್ದಾರೆ. ಬೈಸರನ್ ಕಣಿವೆಯ ಸೂರ್ಯಾಸ್ತ ಮತ್ತು ಹಸಿರನ್ನು ಆನಂದಿಸುತ್ತಿರುವ ಪ್ರವಾಸಿಗರ ಮೇಲೆ ಗುಂಡು ಹಾರಿಸಿದ ಭಯೋತ್ಪಾದಕರನ್ನು ನ್ಯಾಯದ ಕಟಕಟೆಗೆ ತರುವುದಾಗಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ. “ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡುವುದಿಲ್ಲ. ಅವರ ದುಷ್ಟ ಉದ್ದೇಶ ಎಂದಿಗೂ ಯಶಸ್ವಿಯಾಗುವುದಿಲ್ಲ” ಎಂದು ಮೋದಿ ಎಕ್ಸ್​ನಲ್ಲಿ ಇಂದಿನ ಪಹಲ್ಗಾಮ್ ದಾಳಿಯ ಕುರಿತು ಪೋಸ್ಟ್ ಮಾಡಿದ್ದಾರೆ.

ಇಲ್ಲಿಯವರೆಗೆ ಸಾವು ದೃಢಪಟ್ಟಿರುವ ವ್ಯಕ್ತಿಯ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಅವರು ಒತ್ತಿ ಹೇಳಿದ್ದಾರೆ. “ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ.” ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌ ದಾಳಿ ಹೊಣೆಹೊತ್ತTRF:ಕನ್ನಡಿಗನ ಬಲಿಪಡೆದ ಸಂಘಟನೆ ಹಿನ್ನೆಲೆ ಏನು?
ಪಹಲ್ಗಾಮ್‌ ಉಗ್ರರ ದಾಳಿ, ಕನ್ನಡಿಗರ ನೆರವಿಗೆ ಅಧಿಕಾರಿಗಳನ್ನ ಕಳುಹಿಸಿದ ಸಿಎಂ
ಪಹಲ್ಗಾಮ್​ನಲ್ಲಿ ದಾಳಿ ನಡೆಸಿದವರನ್ನು ಸುಮ್ಮನೆ ಬಿಡೋ ಮಾತೇ ಇಲ್ಲ; ಅಮಿತ್ ಶಾ

ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ; ಶಿವಮೊಗ್ಗದ ಪ್ರವಾಸಿಗ ಸಾವು

“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಗಾಯಗೊಂಡವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಮುಂದೆ ತರಲಾಗುವುದು. ಅವರನ್ನು ಬಿಡುವುದಿಲ್ಲ! ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು ಅದು ಇನ್ನಷ್ಟು ಬಲಗೊಳ್ಳುತ್ತದೆ” ಎಂದು ಪ್ರಧಾನಿ ಮೋದಿ ಎಕ್ಸ್ ನಲ್ಲಿ ಹೇಳಿದ್ದಾರೆ.


ಇದನ್ನೂ ಓದಿ: Pahalgam Terror Attack: ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಪ್ರಧಾನಿ ಮೋದಿ ಅಮಿತ್ ಶಾ ಅವರನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಸೂಚಿಸಿದ್ದಾರೆ. ಇಂದು ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಪ್ರಮುಖ ಪ್ರವಾಸಿ ತಾಣದ ಮೇಲೆ ಭಯೋತ್ಪಾದಕರು ದಾಳಿ ನಡೆಸಿ, ಹಲವಾರು ಜನರನ್ನು ಕೊಂದಿದ್ದಾರೆ. ಈ ಘಟನೆಯಲ್ಲಿ ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.

ಈ ಘಟನೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರತಿಕ್ರಿಯಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯಿಂದ ದುಃಖಿತನಾಗಿದ್ದೇನೆ. ಮೃತರ ಕುಟುಂಬದ ಸದಸ್ಯರ ಜೊತೆ ನಾವಿದ್ದೇವೆ. ಈ ಹೇಯ ಭಯೋತ್ಪಾದಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ವಿರುದ್ಧ ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇಂದು ಪಹಲ್ಗಾಮ್​ನಲ್ಲಿ ನಡೆದ ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಫೋನ್​ನಲ್ಲಿಯೇ ವಿವರಿಸಿದ್ದೇನೆ. ಸಂಬಂಧಿತ ಅಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ. ಎಲ್ಲಾ ಸಂಸ್ಥೆಗಳೊಂದಿಗೆ ತುರ್ತು ಭದ್ರತಾ ಪರಿಶೀಲನಾ ಸಭೆ ನಡೆಸಲು ಶೀಘ್ರದಲ್ಲೇ ಶ್ರೀನಗರಕ್ಕೆ ತೆರಳುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ