AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balipa Narayana: ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಯಕ್ಷರಂಗದ ಭೀಷ್ಮ ಬಲಿಪ ನಾರಾಯಣರಿಗೆ ದೇಶದ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Balipa Narayana: ಬಲಿಪ ನಾರಾಯಣ ಭಾಗವತರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
Balipa Narayan and PM Modi
ಅಕ್ಷಯ್​ ಪಲ್ಲಮಜಲು​​
|

Updated on:Feb 17, 2023 | 10:35 AM

Share

ದೆಹಲಿ: ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ (Tenkuthittu Yakshagana) ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು (Balipa Narayana Bhagavatha)   ಇಂದು ಸಂಜೆ ನಿಧನ ಹೊಂದಿದ್ದು, ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಯಕ್ಷರಂಗದ ಭೀಷ್ಮ ಬಲಿಪ ನಾರಾಯಣರಿಗೆ ದೇಶದ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಬಲಿಪ ನಾರಾಯಣ ಭಾಗವತರು ಸಾಂಸ್ಕೃತಿಕ ಲೋಕದಲ್ಲಿ ಛಾಪು ಮೂಡಿಸಿದ್ದಾರೆ. ಅವರು ಯಕ್ಷಗಾನ ಹಿನ್ನೆಲೆ ಗಾಯನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು ಮತ್ತು ಅವರ ಅನುಕರಣೀಯ ಶೈಲಿಯಿಂದ ಮೆಚ್ಚುಗೆ ಪಡೆದರು. ಅವರ ಕೃತಿಗಳನ್ನು ಮುಂದಿನ ಪೀಳಿಗೆಯವರು ಮೆಚ್ಚುತ್ತಾರೆ. ಅವರ ನಿಧನದಿಂದ ನೋವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಗುರುವಾರ ಸಂಜೆ 6.30 ಸುಮಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ  ಮೂಡುಬಿದಿರೆಯ ಸಮೀಪದ ನೂಯಿ ಎಂಬಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದು, ಯಕ್ಷ ಲೋಕ ಮತ್ತು ಅಭಿಮಾನಿಗಳು, ಕುಟುಂಬಸ್ಥರು ಕಂಬನಿ ಮಿಡಿಯುತ್ತಿದ್ದಾರೆ. ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಕಾಸರಗೋಡಿನ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್ 13ರಂದು ಜನಿಸಿದ ಬಲಿಪರು, 7ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿದ್ದಾರೆ. ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು 13ನೇ ವರ್ಷದಲ್ಲಿ ರಂಗ ಪ್ರವೇಶ ಮಾಡಿದ್ದರು. ಹೀಗೆ ಆರಂಭವಾದ ಯಕ್ಷ ಪ್ರಯಾಣ ಸುಮಾರು 60 ವರ್ಷಗಳ ಕಾಲ ಯಕ್ಷಗಾನ ಕಲಾ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಪಡ್ರೆ ಜಠಾಧಾರಿ ಮೇಳವನ್ನು ಇವರು ಮೊದಲಿಗೆ ಆರಂಭಿಸಿದರು. ಯಕ್ಷಗಾನದ 50ಕ್ಕೂ ಹೆಚ್ಚು ಪ್ರಸಂಗಗಳ ಕಂಠಪಾಠ ಇವರಿಗಿದೆ. 30 ಪ್ರಕಟಿತ ಮತ್ತು 15 ಅಪ್ರಕಟಿತ ಯಕ್ಷಗಾನ ಪ್ರಸಂಗಗಳನ್ನು ರಚಿಸಿದ್ದಾರೆ. ಕಪ್ಪು ಮೂರು, ಬಿಳಿ ಐದರ ಸ್ವರದಲ್ಲಿ ಬಲಿಪರು ಹಾಡುತ್ತಾರೆ. ಇವರ ಯಕ್ಷಗಾನದ ಸುದೀರ್ಘ ಸೇವೆಗಾಗಿ ಯಕ್ಷಾಭಿಮಾನಿಗಳು ಬಲಿಪ ಅಮೃತ ಭವನವನ್ನು ಕಟ್ಟಿಸಿಕೊಟ್ಟಿದ್ದಾರೆ. ಬಲಿಪ ನಾರಾಯಣ ಭಾಗವತರು ಐದು ದಿನದ ದೇವೀ ಮಹಾತ್ಮೆ ಎಂಬ ಮಹಾಪ್ರಸಂಗವನ್ನು ರಚಿಸಿದ್ದು ವೇಣೂರಿನ ಕಜೆ ಸುಬ್ರಹ್ಮಣ್ಯ ಭಟ್ ಮತ್ತು ಅವರ ಸ್ನೇಹಿತರು ಇದನ್ನು ಪ್ರಕಟಿಸಿದ್ದಾರೆ.

Published On - 10:22 am, Fri, 17 February 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ