AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

PM Modi conducts high level meeting to review energy situation in India: ಭಾರತದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಂಧನಗಳ ದಾಸ್ತಾನು ಎಷ್ಟು, ಆಮದು ಎಷ್ಟಾಗುತ್ತಿದೆ ಎಂಬಿತ್ಯಾದಿ ಮಾಹಿತಿಯನ್ನು ಅಧಿಕಾರಿಗಳು ಪ್ರಧಾನಿಗಳಿಗೆ ತಿಳಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸಲ್​ಗಿಂತ ಎಲ್​ಪಿಜಿ ಸಮಸ್ಯೆ ಹೆಚ್ಚು ಕಾಡುತ್ತಿದೆ.

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ
ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಭೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 22, 2026 | 6:09 PM

Share

ನವದೆಹಲಿ, ಮಾರ್ಚ್ 22: ಇರಾನ್ ಯುದ್ಧ ಮುಂದುವರಿಯುತ್ತಲೇ ಇರುವುದರಿಂದ ಜಾಗತಿಕ ತೈಲ ಬಿಕ್ಕಟ್ಟು (Oil crisis) ತೀವ್ರಗೊಳ್ಳುತ್ತಿದೆ. ಭಾರತದಲ್ಲಿ ಸರ್ಕಾರವು ಇಂಧನ ಪೂರೈಕೆಗೆ ಹರಸಾಹಸ ಮಾಡುತ್ತಿದೆ. ಈ ಮುಂದುವರಿದ ಸಂಕಷ್ಟ ಎದುರಿಸಲು ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿಗಳು ಉನ್ನತ ಮಟ್ಟದ ಸಭೆ ನಡೆಸಿದರು. ಪೆಟ್ರೋಲಿಯಂ, ಕಚ್ಚಾ ತೈಲ, ನೈಸರ್ಗಿಕ ಅನಿಲ್, ವಿದ್ಯುತ್, ರಸಗೊಬ್ಬರ ಸೆಕ್ಟರ್​ಗಳಲ್ಲಿ ಪರಿಸ್ಥಿತಿ ಅವಲೋಕಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆ ಮಾಡಿದರು.

ಅತಿರೇಕದ ಸ್ಥಿತಿ ಬಂದರೆ ದೇಶದಲ್ಲಿ ಈ ವಿವಿಧ ಇಂಧನ ಸರಕುಗಳ ದಾಸ್ತಾನು ಎಷ್ಟಿದೆ, ಆಮದು ಎಷ್ಟು ಬೇಕು, ಸಿದ್ಧತೆಯ ಯೋಜನೆಗಳು ಏನೇನು ಎಂಬಿತ್ಯಾದಿ ಮಾಹಿತಿಯನ್ನು ಸರ್ಕಾರದ ಈ ಸಂಬಂಧಿತ ಇಲಾಖೆಗಳ ಉನ್ನತ ಅಧಿಕಾರಿಗಳು ಪ್ರಧಾನಿಗಳಿಗೆ ನಿವೇದಿಸಿದರು. ವಿವಿಧ ಸಚಿವರೂ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಹೋಟೆಲ್, ಮುಂಗಟ್ಟುಗಳಿಗೆ ನಿರಾಳ ಸುದ್ದಿ; ರಾಜ್ಯಗಳಿಗೆ ಕಮರ್ಷಿಯಲ್ ಎಲ್​ಪಿಜಿ ಪೂರೈಕೆ ಶೇ. 50ಕ್ಕೆ ಏರಿಕೆ

ಕಚ್ಚಾ ತೈಲ ಬೆಲೆ ಹೆಚ್ಚಳ ಆಗಿದ್ದರೂ ಭಾರತ ರಷ್ಯಾದಿಂದ ಅದರ ಪೂರೈಕೆ ಪಡೆದಿದೆ. ಭಾರತದಲ್ಲೂ ಪೆಟ್ರೋಲಿಯಂ ದಾಸ್ತಾನು ತಕ್ಕಮಟ್ಟಿಗೆ ಇದೆ. ಹೀಗಾಗಿ, ತೈಲ ಬೆಲೆ ಏರಿಕೆಯ ಶಾಕ್ ಅನ್ನು ಭಾರತ ತಡೆದುಕೊಂಡು, ಸಾಮಾನ್ಯ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆಯಾಗದಂತೆ ನೋಡಿಕೊಂಡಿದೆ. ಪ್ರೀಮಿಯಮ್ ಪೆಟ್ರೋಲ್ ಬೆಲೆ ಮಾತ್ರವೇ ಏರಿಕೆ ಆಗಿರುವುದು.

ಭಾರತಕ್ಕೆ ನೈಸರ್ಗಿಕ ಅನಿಲದ ಅಭಾವವೂ ಹೆಚ್ಚೇನೂ ಕಾಡುತ್ತಿಲ್ಲ. ಪೈಪ್ಡ್ ಗ್ಯಾಸ್ ಪೂರೈಕೆ ನಿರಂತರವಾಗಿದೆ. ಅರ್ಧಕ್ಕಿಂತ ಹೆಚ್ಚಿನ ನೈಸರ್ಗಿಕ ಅನಿಲವು ಭಾರತದಲ್ಲೇ ಸಿದ್ಧವಾಗುತ್ತಿರುವುದರಿಂದ ಅದರ ಪೂರೈಕೆಯಲ್ಲಿ ಅಷ್ಟೇನೂ ವ್ಯತ್ಯಯ ಆಗಿಲ್ಲ. ಆಸ್ಟ್ರೇಲಿಯಾ, ಕೆನಡಾ ಇತ್ಯಾದಿ ಮೂಲಗಳಿಂದ ನ್ಯಾಚುರಲ್ ಗ್ಯಾಸ್ ಪೂರೈಕೆಯನ್ನು ಭಾರತ ಪಡೆಯುತ್ತಿದೆ.

ಆದರೆ, ದೇಶಕ್ಕೆ ಹೆಚ್ಚಿನ ಸಮಸ್ಯೆಯಾಗಿರುವುದು ಎಲ್​ಪಿಜಿಯದ್ದು. ಈ ಪೆಟ್ರೋಲಿಯಂ ಗ್ಯಾಸ್ ಅಭಾವ ಹೆಚ್ಚು ಕಾಡುತ್ತಿದೆ. ಕಮರ್ಷಿಯಲ್ ಗ್ಯಾಸ್ ಬಳಕೆಗೆ ನಿರ್ಬಂಧಗಳನ್ನು ಹಾಕಿದೆ. ಗೃಹಬಳಕೆ ಎಲ್​ಪಿಜಿ ಪೂರೈಕೆಗೆ ಸರ್ಕಾರ ಮೊದಲ ಆದ್ಯತೆ ಕೊಟ್ಟಿದೆ. ಕಮರ್ಷಿಯಲ್ ಗ್ಯಾಸ್ ವಿಚಾರದಲ್ಲಿ ಹೋಟೆಲ್, ರೆಸ್ಟೋರೆಂಟ್ ಇತ್ಯಾದಿ ಸಾಮಾನ್ಯ ಜನರಿಗೆ ಸಂಬಂಧಿಸಿದ ಸೇವೆಗಳಿಗೆ ಆದ್ಯತೆ ಕೊಡಲಾಗುತ್ತಿದೆ.

ಇದನ್ನೂ ಓದಿ: ಟಿಕೆಟ್ ದರ ಮಿತಿ ಕ್ರಮ ಹಿಂತೆಗೆತ, ಜೆಟ್ ಫುಯಲ್ ಬೆಲೆ ಹೆಚ್ಚಳ ಪರಿಣಾಮ ಏ. 1ರಿಂದ ವಿಮಾನ ಟಿಕೆಟ್ ದರ ಏರಿಕೆ?

ವಾಹನಗಳಿಗೆ ಹಾಕಲಾಗುವ ಸಿಎನ್​ಜಿ ಗ್ಯಾಸ್ ಪೂರೈಕೆ ಸಮರ್ಪಕವಾಗಿದೆ ಎಂದು ಸರ್ಕಾರ ಹೇಳಿದರೂ ಹಲವು ನಗರಗಳಲ್ಲಿ ಸಿಎನ್​ಜಿ ಸ್ಟೇಷನ್​ಗಳಲ್ಲಿ ಉದ್ದುದ್ದ ಕ್ಯೂಗಳಿರುವುದನ್ನು ಕಾಣಬಹುದು ಎಂದು ವರದಿಗಳು ಬಂದಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಅಮೆರಿಕ-ಇರಾನ್ ಶಾಂತಿ ಒಪ್ಪಂದ, ಪ್ರಮುಖ ಷರತ್ತುಗಳೇನು?
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಸೋಮವಾರ ಅಮಾವಾಸ್ಯೆ: ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ
ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಹೆಚ್​​ಡಿಕೆ