AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Election Results: ಉತ್ತಮ ಆಡಳಿತ, ಅಭಿವೃದ್ಧಿ ಗೆದ್ದಿದೆ; ನಿತೀಶ್ ಕುಮಾರ್​​ಗೆ ಪ್ರಧಾನಿ ಮೋದಿ ಅಭಿನಂದನೆ

ಬಿಹಾರದಲ್ಲಿ ಎನ್‌ಡಿಎಯ 'ಅಭೂತಪೂರ್ವ' ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ. ಬಿಹಾರದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ, ಸಾಮಾಜಿಕ ನ್ಯಾಯ ಗೆದ್ದಿದೆ ಎಂದಿರುವ ಮೋದಿ ಎನ್‌ಡಿಎಗೆ ಭರ್ಜರಿ ಬಹುಮತ ನೀಡಿದ್ದಕ್ಕಾಗಿ ಬಿಹಾರದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. ಬಿಹಾರದಲ್ಲಿ ಮತ ಎಣಿಕೆ ಮುಕ್ತಾಯದ ಹಂತ ತಲುಪಿದೆ. ಎನ್​ಡಿಎ 200 ಸ್ಥಾನಗಳನ್ನು ದಾಟಿ ಭಾರೀ ಬಹುಮತ ಪಡೆದಿದೆ.

Bihar Election Results: ಉತ್ತಮ ಆಡಳಿತ, ಅಭಿವೃದ್ಧಿ ಗೆದ್ದಿದೆ; ನಿತೀಶ್ ಕುಮಾರ್​​ಗೆ ಪ್ರಧಾನಿ ಮೋದಿ ಅಭಿನಂದನೆ
Bihar Nda Leaders
ಸುಷ್ಮಾ ಚಕ್ರೆ
|

Updated on:Nov 14, 2025 | 6:12 PM

Share

ನವದೆಹಲಿ, ನವೆಂಬರ್ 14: ಬಿಹಾರದಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಎನ್​ಡಿಎ 206 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಮಹಾಘಟಬಂಧನ್ ಕೇವಲ 31 ಸ್ಥಾನಗಳಲ್ಲಿ ಮುಂದಿದೆ. ಈ ಅಭೂತಪೂರ್ವ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಿಹಾರದ ಮತದಾರರಿಗೆ ಧನ್ಯವಾದ ತಿಳಿಸಿದ್ದಾರೆ. ಬಿಹಾರದಲ್ಲಿ ಎನ್​ಡಿಎ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಇತರ ಎನ್​ಡಿಎ ಬಣದ ನಾಯಕರನ್ನು ಅಭಿನಂದಿಸಿದ್ದಾರೆ.

“ಈ ಪ್ರಚಂಡ ಸಾರ್ವಜನಿಕ ಜನಾದೇಶವು ಎನ್‌ಡಿಎಗೆ ಜನರಿಗೆ ಸೇವೆ ಸಲ್ಲಿಸಲು ಅಧಿಕಾರ ನೀಡುತ್ತದೆ” ಎಂದು ಮೋದಿ ಹರ್ಷದಿಂದ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. “ಬಿಹಾರದಲ್ಲಿ ಸರ್ವತೋಮುಖ ಅಭಿವೃದ್ಧಿಯನ್ನು ಮಾಡುವ ಭರವಸೆ ಇರುವುದರಿಂದ ಎನ್‌ಡಿಎಗೆ ಈ ಜನಾದೇಶ ಸಿಕ್ಕಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ವೇಳೆ ಎನ್‌ಡಿಎ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು, “ಮಹಾಘಟಬಂಧನ್‌ನ ಸುಳ್ಳುಗಳನ್ನು ಬಹಿರಂಗಪಡಿಸಲು ನಮ್ಮ ಕಾರ್ಯಕರ್ತರು ದಣಿವರಿಯದೆ ಕೆಲಸ ಮಾಡಿದ್ದಾರೆ. ಬಿಹಾರದ ಅಭಿವೃದ್ಧಿಗಾಗಿ ಎನ್​ಡಿಎ ಮೈತ್ರಿಕೂಟವು ಕೆಲಸ ಮಾಡುವುದನ್ನು ಮುಂದುವರಿಸುತ್ತದೆ. ಪ್ರತಿಯೊಬ್ಬ ಯುವಕರು ಮತ್ತು ಮಹಿಳೆಯರು ಸಮೃದ್ಧ ಜೀವನಕ್ಕಾಗಿ ಸಾಕಷ್ಟು ಅವಕಾಶಗಳನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Bihar Election Results: ಬಿಹಾರದಲ್ಲಿ ತನ್ನದೇ ದಾಖಲೆ ಮುರಿದು ದೊಡ್ಡಣ್ಣನಾಗಿ ಹೊರಹೊಮ್ಮಿದ ಬಿಜೆಪಿ!

“ಉತ್ತಮ ಆಡಳಿತ ಗೆದ್ದಿದೆ. ಅಭಿವೃದ್ಧಿ ಗೆದ್ದಿದೆ. ಸಾರ್ವಜನಿಕ ಕಲ್ಯಾಣದ ಮನೋಭಾವ ಗೆದ್ದಿದೆ. ಸಾಮಾಜಿಕ ನ್ಯಾಯ ಗೆದ್ದಿದೆ” ಎಂದು ಪ್ರಧಾನಿ ಮೋದಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ. “2025ರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಐತಿಹಾಸಿಕ ಮತ್ತು ಅಭೂತಪೂರ್ವ ಗೆಲುವಿನಿಂದ ಆಶೀರ್ವದಿಸಿದ ಬಿಹಾರದ ಜನರಿಗೆ, ನನ್ನ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು.” ಎಂದಿದ್ದಾರೆ.

“ಮುಂಬರುವ ದಿನಗಳಲ್ಲಿ ನಾವು ಬಿಹಾರದ ಅಭಿವೃದ್ಧಿಯ ಕಡೆಗೆ ಸಕ್ರಿಯವಾಗಿ ಕೆಲಸ ಮಾಡುತ್ತೇವೆ. ಇಲ್ಲಿನ ಮೂಲಸೌಕರ್ಯ ಮತ್ತು ರಾಜ್ಯದ ಸಂಸ್ಕೃತಿಗೆ ಹೊಸ ಗುರುತನ್ನು ನೀಡುತ್ತೇವೆ” ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ನಿತೀಶ್ ಕುಮಾರ್, ಕೇಂದ್ರ ಸಚಿವರಾದ ಚಿರಾಗ್ ಪಾಸ್ವಾನ್ ಮತ್ತು ಜಿತನ್ ರಾಮ್ ಮಾಂಝಿ ಮತ್ತು ರಾಜ್ಯಸಭಾ ಸಂಸದ ಉಪೇಂದ್ರ ಕುಶ್ವಾಹ ಅವರನ್ನು ಮೋದಿ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಬಿಹಾರದ ಫಲಿತಾಂಶದ ಬಗ್ಗೆ 3 ತಿಂಗಳ ಹಿಂದೆಯೇ ಭವಿಷ್ಯ ನುಡಿದಿತ್ತು ‘ಮಾಡರ್ನ್ ಅಸ್ಟ್ರಾಲಜಿ’

ಅಮಿತ್ ಶಾ ಟ್ವೀಟ್:

ಬಿಹಾರದ ಚುನಾವಣಾ ಫಲಿತಾಂಶದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎನ್‌ಡಿಎಯ ಬೃಹತ್ ಗೆಲುವು ಅಭಿವೃದ್ಧಿ ಹೊಂದಿದ ಬಿಹಾರದಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬ ಬಿಹಾರಿಯ ಗೆಲುವು. ಜಂಗಲ್ ರಾಜ್ ಸೃಷ್ಟಿಸಿದವರಿಗೆ ಇನ್ನು ಮುಂದೆ ಜನರನ್ನು ಲೂಟಿ ಮಾಡಲು ಅವಕಾಶ ಸಿಗುವುದಿಲ್ಲ” ಎಂದು ಅಮಿತ್ ಶಾ ಹೇಳಿದ್ದಾರೆ.

ಎನ್‌ಡಿಎ ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸುತ್ತದೆ ಎಂದು ಜನರಿಗೆ ಭರವಸೆ ನೀಡಿದ ಅಮಿತ್ ಶಾ, “ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎಗೆ ನೀವು ನೀಡಿದ ಭರವಸೆ ಮತ್ತು ವಿಶ್ವಾಸದೊಂದಿಗೆ, ಎನ್‌ಡಿಎ ಸರ್ಕಾರವು ಅದನ್ನು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಪೂರೈಸುತ್ತದೆ ಎಂದು ನಾನು ಬಿಹಾರದ ಜನರಿಗೆ ಮತ್ತು ವಿಶೇಷವಾಗಿ ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

“ನರೇಂದ್ರ ಮೋದಿ, ನಿತೀಶ್ ಕುಮಾರ್ ಮತ್ತು NDAಯ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರನ್ನು ನಾನು ಅಭಿನಂದಿಸುತ್ತೇನೆ. ತಮ್ಮ ಅವಿಶ್ರಾಂತ ಕಠಿಣ ಪರಿಶ್ರಮದ ಮೂಲಕ ಈ ಫಲಿತಾಂಶವನ್ನು ಫಲಪ್ರದಗೊಳಿಸಿದ ಬಿಹಾರದ ಬಿಜೆಪಿಯ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗಿನ ಎಲ್ಲಾ ಕಾರ್ಯಕರ್ತರಿಗೆ ನಾನು ವಂದಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಯು ಹೊರತುಪಡಿಸಿ, ಎನ್‌ಡಿಎ ಮೈತ್ರಿಕೂಟದಲ್ಲಿ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ-ರಾಮ್ ವಿಲಾಸ್ (ಎಲ್‌ಜೆಪಿ-ಆರ್‌ಎಂ), ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ರಾಜ್ಯಸಭಾ ಸಂಸದ ಉಪೇಂದ್ರ ಕುಶ್ವಾಹ ನೇತೃತ್ವದ ರಾಷ್ಟ್ರೀಯ ಲೋಕ ಮೋರ್ಚಾ (ಆರ್‌ಎಲ್‌ಎಂ) ಸೇರಿವೆ.

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗಳು 2 ಹಂತಗಳಲ್ಲಿ ನಡೆದವು. ನವೆಂಬರ್ 6ರಂದು ಮೊದಲ ಹಂತದ ಮತದಾನ ಮತ್ತು ನವೆಂಬರ್ 11ರಂದು 2ನೇ ಹಂತದ ಮತದಾನ ನಡೆಯಿತು. ಈ ವರ್ಷ ಬಿಹಾರವು ಅಭೂತಪೂರ್ವವಾಗಿ ಶೇ. 66.91ರಷ್ಟು ಮತದಾನವನ್ನು ಕಂಡಿತು. ಇದು 1951ರಿಂದೀಚೆಗೆ ಬಿಹಾರದ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ECI) ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Fri, 14 November 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?