ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಗೋವಾ ಮತ್ತು ಮಣಿಪುರ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿಯಾಗಿದ್ದಾರೆ. ಇದೆರಡೂ ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಸಿಎಂಗೇ ಈ ಅವಧಿಗೂ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ.

ಪಂಜಾಬ್​ ಮುಖ್ಯಮಂತ್ರಿ ಭಗವಂತ್ ಮಾನ್​​ಗೆ ಪ್ರಧಾನಿ ಮೋದಿ ಅಭಿನಂದನೆ; ಬಿರೆನ್​​ ಸಿಂಗ್​​, ಪ್ರಮೋದ್​ ಸಾವಂತ್​ಗೂ ಶುಭ ಹಾರೈಕೆ
ಪ್ರಧಾನಿ ಮೋದಿ ಮತ್ತು ಭಗವಂತ್ ಮಾನ್​
Edited By:

Updated on: Mar 16, 2022 | 6:14 PM

ಇಂದು ಪಂಜಾಬ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಭಗವಂತ್​ ಮಾನ್​ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಪಂಜಾಬ್​ ರಾಜ್ಯದ ಅಭಿವೃದ್ಧಿಗಾಗಿ, ಜನರ ಒಳಿತಿಗಾಗಿ ಕೇಂದ್ರ ಮತ್ತು ಅಲ್ಲಿನ ರಾಜ್ಯ ಸರ್ಕಾರ ಒಗ್ಗಟ್ಟಾಗಿ ಕೆಲಸ ಮಾಡೋಣ ಎಂದೂ ಹೇಳಿದ್ದಾರೆ.  ಅಂದಹಾಗೇ ಭಗವಂತ್​ ಮಾನ್​ ಇಂದು ಪಂಜಾಬ್​​ನ ಖಟ್ಕರ್​ ಕಲಾನ್​ ಗ್ರಾಮದಲ್ಲಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.  ಅವರಿಗೆ ಹಲವು ಪ್ರಮುಖ ನಾಯಕರು ಶುಭ ಹಾರೈಸಿದ್ದಾರೆ.

ಅದರೊಂದಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗೋವಾ ಮತ್ತು ಮಣಿಪುರ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಭೇಟಿಯಾಗಿದ್ದಾರೆ. ಇದೆರಡೂ ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಹಿಂದಿನ ಸಿಎಂಗೇ ಈ ಅವಧಿಗೂ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ. ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ಮಣಿಪುರದಲ್ಲಿ ಎನ್​.ಬಿರೆನ್​ ಸಿಂಗ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಹೋಳಿ ಹುಣ್ಣಿಮೆಯ ನಂತರ ಕಾರ್ಯಕ್ರಮ ನಡೆಯುವುದಾಗಿ ಮಾಹಿತಿ ಸಿಕ್ಕಿದೆ. ಇಂದು ಪ್ರಮೋದ್​ ಸಾವಂತ್​ ಮತ್ತು ಎನ್​.ಬಿರೆನ್​ ಸಿಂಗ್​ರನ್ನು ಭೇಟಿಯಾದ ಪ್ರಧಾನಿ ಮೋದಿ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಆಡಳಿತದಲ್ಲಿರುವ ಎಲ್ಲ ರಾಜ್ಯಗಳಲ್ಲೂ ಅಲ್ಲಿನ ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಬಿಜೆಪಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ.  ಹಾಗೇ, ಇಬ್ಬರೂ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಫೋಟೋವನ್ನೂ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಮುಂಜಾನೆ 4 ಗಂಟೆ ಜಿಮ್​ ಸೆಷನ್​ ವಿಡಿಯೋ ಹಂಚಿಕೊಂಡು ಟ್ರೋಲ್​ ಆದ ಕಪಿಲ್​ ಶರ್ಮಾ