
ನವದೆಹಲಿ, ನವೆಂಬರ್ 17: ಸೌದಿ ಅರೇಬಿಯಾದಲ್ಲಿ ಉಮ್ರಾ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕಿಡಾಗಿ 46 ಭಾರತೀಯ ಯಾತ್ರಿಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಹೆಚ್ಚಿನವರು ತೆಲಂಗಾಣದವರು. ಕೇಂದ್ರ ಸಚಿವ ಕಿಶನ್ ರೆಡ್ಡಿ (Kishan Reddy) ಈ ಘಟನೆಯ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಮಾತನಾಡಿದ್ದಾರೆ. ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲು ಭಾರತ ಸರ್ಕಾರದಿಂದ ವಿಶೇಷ ತಂಡವನ್ನು ರಚಿಸಲಾಗಿದೆ.
ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೆಕ್ಕಾಗೆ ತೆರಳುತ್ತಿದ್ದ 46 ಭಾರತೀಯ ಯಾತ್ರಿಕರು ಸಾವನ್ನಪ್ಪಿರುವುದು ದೇಶವನ್ನು ತೀವ್ರ ದುಃಖದಲ್ಲಿ ಮುಳುಗಿಸಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ತೆಲಂಗಾಣ ರಾಜ್ಯದವರು ಅದರಲ್ಲೂ ವಿಶೇಷವಾಗಿ ಕಿಶನ್ ರೆಡ್ಡಿ ಅವರ ಸಂಸದೀಯ ಕ್ಷೇತ್ರವಾದ ಸಿಕಂದರಾಬಾದ್ನವರು. ಕೇಂದ್ರ ಸಚಿವ ಕಿಶನ್ ರೆಡ್ಡಿ ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಮಾತನಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಎರಡೂವರೆ ಲಕ್ಷ ಕಲ್ಲಿದ್ದಲು ಕಾರ್ಮಿಕರಿಗೆ 1 ಲಕ್ಷ ರೂ. ಉಡುಗೊರೆ; ಸಚಿವ ಕಿಶನ್ ರೆಡ್ಡಿ ಘೋಷಣೆ
ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯ ಮೇರೆಗೆ ಸೌದಿ ಅರೇಬಿಯಾದಲ್ಲಿ ಪರಿಹಾರದ ಪ್ರಯತ್ನಗಳನ್ನು ತ್ವರಿತಗೊಳಿಸಲು ಭಾರತದಿಂದ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಕಿಶನ್ ರೆಡ್ಡಿ ಅವರು ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಡಾ. ಸುಹೇಲ್ ಅಜಾಜ್ ಖಾನ್ ಅವರೊಂದಿಗೆ ಮಾತನಾಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ವಿಚಾರಿಸಿದ್ದಾರೆ. ಮೆಕ್ಕಾದಿಂದ ಮದೀನಾಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ ತೈಲ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಾಗ ಈ ದೊಡ್ಡ ಅಪಘಾತ ಸಂಭವಿಸಿದೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. ಬಸ್ನಲ್ಲಿದ್ದ 46 ಯಾತ್ರಿಕರಲ್ಲಿ 45 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.
మక్కా సందర్శన కోసం సౌదీ అరేబియా వెళ్లి.. ఇవాళ జరిగిన రోడ్డు ప్రమాదంలో 42 మంది భారతీయులు సజీవ దహనమైన ఘటన దిగ్భ్రాంతికరం. మృతుల్లో ఎక్కువమంది హైదరాబాద్ నుంచి ఉన్నారని తెలిసి తీవ్ర విచారం వ్యక్తం చేస్తున్నాను. మృతుల ఆత్మకు శాంతి చేకూరాలని ప్రార్థిస్తూ.. వారి కుటుంబసభ్యులకు ప్రగాఢ…
— G Kishan Reddy (@kishanreddybjp) November 17, 2025
ಈ ಭೀಕರ ಅಪಘಾತದಲ್ಲಿ ಒಬ್ಬರು ಬದುಕುಳಿದಿದ್ದಾರೆ ಮತ್ತು ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಆ ವ್ಯಕ್ತಿಗೆ ಅತ್ಯುತ್ತಮ ವೈದ್ಯಕೀಯ ನೆರವು ನೀಡಲು ಸೌದಿ ಅರೇಬಿಯಾ ಸರ್ಕಾರ ವೈದ್ಯಕೀಯ ತಜ್ಞರ ತಂಡವನ್ನು ನೇಮಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಸಗೊಬ್ಬರಗಳ ಪೋಷಕಾಂಶ ಆಧಾರಿತ ಸಬ್ಸಿಡಿಗೆ ಸಂಪುಟ ಅನುಮೋದನೆ; ಸಚಿವ ಕಿಶನ್ ರೆಡ್ಡಿ ಹೇಳಿದ್ದೇನು?
ಸೌದಿ ಅರೇಬಿಯಾ ಸರ್ಕಾರವು ಈಗ ಶವಗಳನ್ನು ಗುರುತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ. “ಈ ಅಪಘಾತದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಸಹ ಪ್ರಾರಂಭಿಸಲಾಗಿದೆ. ಭಾರತೀಯ ರಾಯಭಾರ ಕಚೇರಿಯು ತೆಲಂಗಾಣ ಸರ್ಕಾರದೊಂದಿಗೆ ಸಂಪರ್ಕದಲ್ಲಿದೆ. ಕುಟುಂಬ ಸದಸ್ಯರಿಂದ ವಿವರಗಳನ್ನು ಪಡೆದ ನಂತರ, ಶವಗಳನ್ನು ಮನೆಗೆ ತರುವ ಬಗ್ಗೆ ಅಥವಾ ಅಲ್ಲಿ ಅಂತ್ಯಕ್ರಿಯೆ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕುಟುಂಬ ಸದಸ್ಯರು ತೆಗೆದುಕೊಳ್ಳುವ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿರುತ್ತದೆ” ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ