ಗುರು ಪೂರ್ಣಿಮೆ ಶುಭಾಶಯ ಕೋರಿದ ಪ್ರಧಾನಿ ಮೋದಿ: ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಿ

ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನವನ್ನು ನೀಡುವುದು ಮಾತ್ರವಲ್ಲದೆ, ತಮ್ಮ ಶಿಷ್ಯರಲ್ಲಿ ಸಕಾರಾತ್ಮಕ ಶಕ್ತಿ ತುಂಬಿ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ನೈಜ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಗುರುಗಳು ತೋರಿದ ಉನ್ನತ ಆದರ್ಶಗಳು ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ದಿಕ್ಸೂಚಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗುರುವಿನ ಮಹತ್ವವನ್ನು ಸಾರುವ ಸುಂದರ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಗುರು ಪೂರ್ಣಿಮೆ ಶುಭಾಶಯ ಕೋರಿದ ಪ್ರಧಾನಿ ಮೋದಿ: ಸಂಸ್ಕೃತ ಸುಭಾಷಿತ ಹಂಚಿಕೊಂಡ ಪ್ರಧಾನಿ
ನರೇಂದ್ರ ಮೋದಿ

Updated on: Jul 29, 2026 | 12:47 PM

ನವದೆಹಲಿ, ಜುಲೈ 29: ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದೇಶದ ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ. ಗುರುಗಳು ಕೇವಲ ಅಕ್ಷರ ಜ್ಞಾನವನ್ನು ನೀಡುವುದು ಮಾತ್ರವಲ್ಲದೆ, ತಮ್ಮ ಶಿಷ್ಯರಲ್ಲಿ ಸಕಾರಾತ್ಮಕ ಶಕ್ತಿ ತುಂಬಿ, ಉದಾತ್ತ ಚಿಂತನೆ ಮತ್ತು ಮೌಲ್ಯಗಳ ಮೂಲಕ ಅವರನ್ನು ನೈಜ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ ಎಂದು ಪ್ರಧಾನಿ ಬಣ್ಣಿಸಿದ್ದಾರೆ. ಗುರುಗಳು ತೋರಿದ ಉನ್ನತ ಆದರ್ಶಗಳು ಹಾಗೂ ಮಾರ್ಗದರ್ಶನವನ್ನು ಪ್ರತಿಯೊಬ್ಬರೂ ತಮ್ಮ ಜೀವನದ ದಿಕ್ಸೂಚಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಗುರುವಿನ ಮಹತ್ವವನ್ನು ಸಾರುವ ಸುಂದರ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್​

ಪ್ರೇರಕಃ ಸೂಚಕಶ್ಚೈವ ವಾಚಕೋ ದರ್ಶಕಸ್ತಥಾ।
ಶಿಕ್ಷಕಃ ಬೋಧಕಶ್ಚೈವ ಷಡೇತೇ ಗುರವಃ ಸ್ಮೃತಾಃ

ಪ್ರೇರಕ: ಆಲೋಚನೆ ಮತ್ತು ಕೆಲಸಗಳಿಗೆ ಸ್ಪೂರ್ತಿ ನೀಡುವವನು.

ಸೂಚಕ: ಸರಿಯಾದ ಮಾರ್ಗವನ್ನು ತೋರಿಸುವವನು.

ವಾಚಕ: ಜ್ಞಾನ ಮತ್ತು ಸತ್ಯವನ್ನು ತಿಳಿಸಿ ಹೇಳುವವನು.

ದರ್ಶಕ: ಸನ್ಮಾರ್ಗದೆಡೆಗೆ ನಡೆಸಿ ದಾರಿ ದೀಪವಾಗುವವನು.

ಶಿಕ್ಷಕ: ವಿದ್ಯೆ ಮತ್ತು ಕೌಶಲ್ಯಗಳನ್ನು ಬೋಧಿಸುವವನು.

ಬೋಧಕ: ಜೀವನದ ಸತ್ಯದ ಅರಿವು ಮೂಡಿಸಿ ಸ್ವಯಂ-ಅಭಿವೃದ್ಧಿಗೆ ದಾರಿ ಮಾಡಿಕೊಡುವವನು.

ಈ ಆರನ್ನೂ ಗುರುವಿನ ಶ್ರೇಷ್ಠ ರೂಪಗಳೆಂದು ಪರಿಗಣಿಸಲಾಗಿದೆ ಎಂದು ಪ್ರಧಾನಿ ಸ್ಮರಿಸಿದ್ದಾರೆ.

ಮತ್ತಷ್ಟು ಓದಿ:ಸಿಜೆಪಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಎಕ್ಸ್​ ಖಾತೆಗಳಿಗೆ ದೆಹಲಿ ಪೊಲೀಸರಿಂದ ನೋಟಿಸ್

ಪ್ರಧಾನಿ ಮೋದಿರ ಸಂದೇಶ:
“ಗುರುವು ಜ್ಞಾನ ಧಾರೆ ಎರೆಯುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬುತ್ತಾರೆ. ಸದುಲೋಚನೆ ಹಾಗೂ ಸಂಸ್ಕಾರಗಳೊಂದಿಗೆ ಅವರನ್ನು ಸುಶಿಕ್ಷಿತರನ್ನಾಗಿ ಮಾಡುತ್ತಾರೆ. ಬನ್ನಿ, ಅಂತಹ ಮಹಾನ್ ಗುರುಗಳ ಆದರ್ಶಗಳನ್ನು ನಮ್ಮ ಬದುಕಿನ ದಾರಿದೀಪವನ್ನಾಗಿ ಮಾಡಿಕೊಳ್ಳೋಣ” ಎಂದು ಪ್ರಧಾನಿ ದೇಶವಾಸಿಗಳಿಗೆ ಹಾರೈಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:47 pm, Wed, 29 July 26

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us