ಎನ್‌ಡಿಎ ಸಭೆಯಲ್ಲಿ ಸಿಎಂ ಯೋಗಿ ಬೆನ್ನು ತಟ್ಟಿ ಬಿಗ್ ಸಿಗ್ನಲ್ ಕೊಟ್ಟ ಪ್ರಧಾನಿ ಮೋದಿ

ಉತ್ತರಪ್ರದೇಶ ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಮಟ್ಟದ ಸಂಖ್ಯೆಯನ್ನು ಕಳೆದುಕೊಂಡಿತ್ತು ಬಿಜೆಪಿ, ಇದಕ್ಕೆ ಯೋಗಿ ಆಡಳಿತವೇ ಕಾರಣ, ಹಾಗೂ ಇದರ ಹೊಣೆಯನ್ನು ಯೋಗಿಯೇ ಹೊರಬೇಕು ಎಂಬ ನಿಂದನೆಯ ಮಾತಿಗೆ ಪ್ರಧಾನಿ ಮೋದಿ ಉತ್ತರ ನೀಡಿದ್ದಾರೆ. ಇಂದು ನಡೆದ ಎನ್​​ಡಿಎ ಸಭೆಯಲ್ಲಿ ಯೋಗಿ ಬೆನ್ನು ತಟ್ಟಿ ದೊಡ್ಡ ಸಂದೇಶವನ್ನು ಮೋದಿ ನೀಡಿದ್ದಾರೆ. ಆ ಸಂದೇಶ ಏನು? ರಾಜಕೀಯ ವಿಶ್ಲೇಷಕರು ಹೇಳಿದ್ದೇನು? ಇಲ್ಲಿದೆ.

ಎನ್‌ಡಿಎ ಸಭೆಯಲ್ಲಿ ಸಿಎಂ ಯೋಗಿ ಬೆನ್ನು ತಟ್ಟಿ ಬಿಗ್ ಸಿಗ್ನಲ್ ಕೊಟ್ಟ ಪ್ರಧಾನಿ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 07, 2024 | 3:17 PM

ದೆಹಲಿ, ಜೂ.9: ಪ್ರಧಾನಿ ನರೇಂದ್ರ ಮೋದಿ  (Narendra Modi) ಅವರು ಇಂದು ಹಳೆಯ ಸಂಸತ್​​​ ಭವನದಲ್ಲಿ ಎನ್​​​ಡಿಎ ಸಂಸದರ ಜತೆಗೆ ಸಭೆಯನ್ನು ನಡೆಸಿದ್ದಾರೆ.  ಮೋದಿ ನೇತೃತ್ದಲ್ಲಿ ಸರ್ಕಾರ ರಚನೆ ಮಾಡಲು ಎಲ್ಲರ ಬೆಂಬಲವನ್ನು ಪಡೆದಿದೆ, ಈ ಸಭೆಯಲ್ಲಿ ಮೋದಿ ಅವರನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಯಿತು. ಈ ವೇಳೆ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಭಾಗವಹಿಸಿದರು. ಸಭೆ ಕೊನೆಗೊಳ್ಳುವರೆಗೂ ಯೋಗಿ ಅವರು ತುಂಬಾ ಬೇಸರದಿಂದಲ್ಲೇ ಇದ್ದರು. ಉತ್ತರಪ್ರದೇಶದಲ್ಲಿ ಕಳೆದ ವರ್ಷದ ಬಂದಷ್ಟು ಸ್ಥಾನ ಈ ಬಾರಿ ಬಂದಿಲ್ಲ. ಉತ್ತರಪ್ರದೇಶ ಬಗ್ಗೆ ಬಿಜೆಪಿ ಭಾರೀ ನಿರೀಕ್ಷೆಯನ್ನು ಕೂಡ ಇಟ್ಟುಕೊಂಡಿತ್ತು. ಅದರಲ್ಲೂ ಅಯೋಧ್ಯೆಯಲ್ಲಿ ಈ ಬಾರಿ ಖಂಡಿತ ಬಿಜೆಪಿ ಬಂದೆ ಬರುತ್ತದೆ ಎಂಬ ವಿಶ್ವಾಸದಲ್ಲಿತ್ತು. ಆದರೆ ಈ ಆಸೆಗೆ ಹುಸಿ ಮಾಡಿದ್ದು ಸತ್ಯ. ಹಾಗಾಗಿಯೇ ಯೋಗಿ ತುಂಬಾ ನೋವಿನಲ್ಲಿದದ್ದು ನಿಜ. ಆದರೆ ಇದೀಗ ಮೋದಿ ಅವರು ಯೋಗಿ ಅವರಿಗೆ ಹಾಗೂ ವಿರೋಧ ಪಕ್ಷಕ್ಕೆ ದೊಡ್ಡ ಸಂದೇಶ ನೀಡಿದ್ದಾರೆ.

ಮೋದಿ ಈಗ ತಮ್ಮ ವಿರೋಧಿಗಳಿಗೆ ಎನ್​​ಡಿಎ ಸಭೆಯಲ್ಲಿ ದೊಡ್ಡ ಸಿಗ್ನಲ್​​ನ್ನು ನೀಡಿದ್ದಾರೆ. ಸಭೆ ಮುಗಿದ ನಂತರ ಎಲ್ಲರೂ ಮೋದಿಗೆ ಧನ್ಯವಾದ ಹೇಳಿದ್ದಾರೆ. ಇದರಲ್ಲಿ ಯೋಗಿ ಕೂಡ ಒಬ್ಬರು. ಈ ವೇಳೆ ಯೋಗಿಯ ಬೆನ್ನಿಗೆ ಮೋದಿ ತಟ್ಟಿದ್ದಾರೆ. ಈ ಬಗ್ಗೆ ವಿಡಿಯೋವೊಂದು ವೈರಲ್​ ಆಗಿದ್ದು, ಮೋದಿ ಅವರು ಬಿಜೆಪಿ ವಿರೋಧಿಗಳಿಗೆ ದೊಡ್ಡ ಸಂದೇಶವನ್ನು ರವಾನಿಸಿದ್ದಾರೆ ಎಂದು ಹೇಳಲಾಗಿದೆ.

ಮೋದಿ ಅವರು ಯೋಗಿ ಅವರ ಬೆನ್ನು ತಟ್ಟುವ ಮೂಲಕ ಯೋಗಿ ಅವರಿಗೆ ಒಂದು ಭರವಸೆಯೊಂದನ್ನು ನೀಡಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ ಈ ಮೂಲಕ ಯೋಗಿ ಅಧಿಕಾರಕ್ಕೆ ಯಾವುದೇ ತೊಂದರೆ ಇಲ್ಲ ಅವರೇ ಯುಪಿ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ಸಂದೇಶವನ್ನು ಮೋದಿ ನೀಡಿದ್ದಾರೆ ಎಂದು ಹೇಳಲಾಗಿದೆ. ರಾಜಕೀಯ ವಿಶ್ಲೇಷಕರ ಪ್ರಕಾರ, ಯೋಗಿ ಆದಿತ್ಯನಾಥ್‌ಗೆ ಪ್ರಧಾನಿಯವರ ಈ ಸೂಚಕ ದೊಡ್ಡ ಸಂದೇಶವನ್ನು ರವಾನಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಬಿಜೆಪಿ ವಿರೋಧಿಗಳಿಗೆ ಬಿಜೆಪಿ ಯೋಗಿ ಮೇಲೆ ಯಾವುದೇ ಅಸಮಾಧನ ಇಲ್ಲ ಎಂಬ ಸಂದೇಶವನ್ನು ನೀಡಿದೆ ಎಂದು ಈ ಮೂಲಕ ಹೇಳಲಾಗಿದೆ.

ಪ್ರಧಾನಿ ಮೋದಿಯನ್ನು 18ನೇ ಲೋಕಸಭೆಯ ನಾಯಕನನ್ನಾಗಿ ಆಯ್ಕೆ

ಪ್ರಧಾನಿ ನರೇಂದ್ರ ಮೋದಿಯವರನ್ನು 18ನೇ ಲೋಕಸಭೆಯ ನಾಯಕನ್ನಾಗಿ ಎನ್​ಡಿಎ ಸಂಸದರು ಆಯ್ಕೆ ಮಾಡಿದ್ದಾರೆ. ಈ ಮೊದಲು ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎನ್‌ಡಿಎ ನಾಯಕರು ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈತ್ರಿಕೂಟದ ನಾಯಕರನ್ನಾಗಿ ಆಯ್ಕೆ ಮಾಡಿದ್ದರು. ಇಂದು ಅಧಿಕೃತವಾಗಿ ಎನ್​ಡಿಎಯ ಎಲ್ಲಾ ಸಂಸದರು ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಇನ್ನೂ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡುವಂತೆ ಮನವಿ ಮಾಡಲಿದ್ದಾರೆ.

ಇದನ್ನೂ ಓದಿ: ಮುಂದಿನ ಬಾರಿ ಮೋದಿ ಚುನಾವಣೆಯಲ್ಲಿ ನಿಂತಾಗ ಈಗ ಅಲ್ಲಿ ಇಲ್ಲಿ ಗೆದ್ದಿರುವವರೂ ಸೋಲ್ತಾರೆ: ನಿತೀಶ್​ ಕುಮಾರ್

ಸಭೆ ಆರಂಭಕ್ಕೂ ಮುನ್ನ ಸಂವಿಧಾನಕ್ಕೆ ನಮಸ್ಕರಿಸಿದ ಮೋದಿ

ಸಭೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಸಂವಿಧಾನ ಸಧನದಲ್ಲಿ ಸಂವಿಧಾನಕ್ಕೆ ನಮಸ್ಕರಿಸಿದರು ಬಳಿಕ ಮಿತ್ರ ಪಕ್ಷಗಳ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು, ನಿತೀಶ್​ ಕುಮಾರ್ ಹಾಗೂ ಎಚ್​ಡಿ ಕುಮಾರಸ್ವಾಮಿ ಬಳಿ ಮಾತನಾಡಿದರು. ಬಳಿಕ ಮಾತನಾಡಿದ ಮೋದಿ, ‘‘ಸರ್ಕಾರ ನಡೆಸಲು ಬಹುಮತ ಅಗತ್ಯ ದೇಶವನ್ನು ಮುನ್ನಡೆಸಲು ಒಮ್ಮತ ಅಗತ್ಯ’’ ಎಂದು ಹೇಳಿದರು. ಚುನಾವಣೆಯ ಸಮಯದಲ್ಲಿ ಪ್ರಧಾನಿ ಮೋದಿ ಸಂವಿಧಾನವನ್ನು ಬದಲಿಸಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಇದೀಗ ಪ್ರಧಾನಿ ಮೋದಿ ಸಂವಿಧಾನಕ್ಕೆ ನಮಸ್ಕರಿಸುವ ಮೂಲಕ ಅಂತಃ ಯಾವುದೇ ನಿರ್ಧಾರವಿಲ್ಲ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:05 pm, Fri, 7 June 24

ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ನಾಳೆಯಲ್ಲ, ಮುಂದಿನ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆ: ಸಿದ್ದರಾಮಯ್ಯ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ
ಹಿಂದೆ ಇಂದಿರಾ ಗಾಂಧಿಯನ್ನು ಇಬ್ರಾಹಿಂ ಅವಾಚ್ಯ ಪದಗಳಿಂದ ನಿಂದಿಸಿದ್ದರು:ಶಾಸಕ