ಡಾ ಮನಮೋಹನ್ ಸಿಂಗ್ ಕೊಡುಗೆ ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ
Dr Manmohan Singh: ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ, ಕಾಂಗ್ರೆಸ್ ಮುಖಂಡ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷದ ಡಾ ಸಿಂಗ್ ಸಂಸತ್ತಿನಲ್ಲಿ 33 ವರ್ಷಗಳ ಸುದೀರ್ಘ ಸೇವೆ ಬಳಿಕ ಈ ವರ್ಷದ ಏ. 3ರಂದು ಅವರು ರಾಜ್ಯಸಭೆಯಿಂದ ನಿವೃತ್ತಿ ಹೊಂದಿದ್ದರು. ಈ ಮೂಲಕ ಅವರ ಸುದೀರ್ಘ ಸಂಸದೀಯ ಪಯಣ ಅಂತ್ಯಗೊಂಡಿತ್ತು. ಆರ್‌ಬಿಐ ಗವರ್ನರ್, ಅರ್ಥಶಾಸ್ತ್ರಜ್ಞ, ವಿತ್ತ ಸಚಿವ ಮತ್ತು ಪ್ರಧಾನಿಯಾಗಿ ಸಿಂಗ್ ಅವರ ಕೊಡುಗೆ ಈ ದೇಶಕ್ಕೆ ಅನನ್ಯ. ಇನ್ನು ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಇತರೆ ನಾಯಕರು ಸಂತಾಪ ಸೂಚಿಸಿದ್ದಾರೆ.
ನವದೆಹಲಿ, (ಡಿಸೆಂಬರ್ 26): ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ಇಂದು (ಡಿಸೆಂಬರ್ 26) ನಿಧನರಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲಾ ಪಕ್ಷದ ರಾಜಕೀಯ ಗಣ್ಯರು ಏಮ್ಸ್ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಜಕೀಯ ನಾಯಕರು ಧೀಮಂತ ನಾಯಕ ಮನಮೋಹನ್ ಸಿಂಗ್ ಅವರ ನಿಧಾನಕ್ಕೆ ಸಂತಾಪ ಸೂಚಿಸಿದ್ದು, ಡಾ ಮನಮೋಹನ್ ಸಿಂಗ್ ಅವರ ಕೊಡುಗೆ ಕೊಂಡಾಡಿದ್ದಾರೆ.
ಇದನ್ನೂ ಓದಿ: Dr.Manmohan Singh Passes Away: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ನಿಧನ
ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ
India mourns the loss of one of its most distinguished leaders, Dr. Manmohan Singh Ji. Rising from humble origins, he rose to become a respected economist. He served in various government positions as well, including as Finance Minister, leaving a strong imprint on our economic… pic.twitter.com/clW00Yv6oP
— Narendra Modi (@narendramodi) December 26, 2024
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಆಡಳಿತರ ಬಗ್ಗೆ ಕೊಂಡಾಡಿ ಸಂತಾಪ ಸೂಚಿಸಿದ್ದಾರೆ. ಭಾರತದ ಮಾಜಿ ಪ್ರಧಾನಿಯವರ ನಿಧನದಿಂದ ತೀವ್ರ ದುಃಖವಾಗಿದೆ. ಡಾ. ಮನಮೋಹನ್ ಸಿಂಗ್ಜಿ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕತೆಯನ್ನು ಪುನರ್ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತದ ಪ್ರಗತಿಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾಗಿದ್ದರು. ಮನಮೋಹನ್ ಸಿಂಗ್ ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದರು. ಹಣಕಾಸು ಸಚಿವರಾಗಿ ಸೇರಿ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ದೇಶದ ಆರ್ಥಿಕತೆ ಬೆಳೆಯಲು ಭದ್ರವಾದ ಬುನಾದಿ ಹಾಕಿದ್ದರು . ಅವರ ಜೊತೆ ಸಂಸತ್ತಿನಲ್ಲಿ ಕಳೆದ ದಿನಗಳು ಕಣ್ಣಿಗೆ ಕಟ್ಟಿದಂತಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ… pic.twitter.com/jF7kDMOo9a
— Siddaramaiah (@siddaramaiah) December 26, 2024
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ. ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ. ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ನಿಧನಕ್ಕೆ ಪ್ರಿಯಾಂಕಾ ಸಂತಾಪ
ಸರ್ದಾರ್ ಮನಮೋಹನ್ ಸಿಂಗ್ ಅವ್ರ ಪ್ರಾಮಾಣಿಕತೆ ಯಾವಾಗಲೂ ನಮಗೆ ಸ್ಫೂರ್ತಿ. ತಮ್ಮ ವಿರೋಧಿಗಳಿಂದ ತೀವ್ರ ದಾಳಿಗೆ ಒಳಗಾದರೂ ರಾಷ್ಟ್ರ ಸೇವೆಗೆ ಧೃಢವಾಗಿ ನಿಂತಿದ್ದರು. ಈ ದೇಶವನ್ನು ನಿಜವಾಗಿಯೂ ಪ್ರೀತಿಸುವವರಲ್ಲಿ ಅವರು ಶಾಶ್ವತವಾಗಿ ನಿಲ್ಲುತ್ತಾರೆ. ಅವರು ನಿಜವಾದ ಸಮಾನತಾವಾದಿ, ಬುದ್ಧಿವಂತ, ಧೈರ್ಯಶಾಲಿಯಾಗಿದ್ದರು. ರಾಜಕೀಯದ ಒರಟು ಜಗತ್ತಿನಲ್ಲಿ ವಿಶಿಷ್ಟವಾದ ಘನತೆ ಮತ್ತು ಸೌಮ್ಯ ವ್ಯಕ್ತಿ ಎಂದಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಸಂತಾಪ
ಮಾಜಿ ಪ್ರಧಾನಿ ಶ್ರೀ ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಃಖವಾಗಿದೆ. ಅವರು ಒಳ್ಳೆಯ ಮತ್ತು ತಾಳ್ಮೆಯ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ ಮತ್ತು ನಾನು ಗೌರವಿಸುವ ಮತ್ತು ಗೌರವಿಸುವ ಸಹೋದ್ಯೋಗಿ. ಭಾರತದ ಆರ್ಥಿಕ ಭವಿಷ್ಯವನ್ನು ಬದಲಿಸಿದ ವ್ಯಕ್ತಿ ಎಂದು ಅವರು ಇತಿಹಾಸದಲ್ಲಿ ನೆನಪಿಸಿಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.
Published On - 11:07 pm, Thu, 26 December 24