
‘‘ಅಮೆರಿಕದ ಅಂಕಲ್ ಚರ್ಮದ ಆಧಾರದ ಮೇಲೆ ಭಾರತೀಯರನ್ನು ನಿಂದಿಸಿದ್ದು ತಪ್ಪು’’ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾಗೆ ತಿರುಗೇಟು ನೀಡಿದ್ದಾರೆ. ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ ಅವಮಾನಿಸುತ್ತಿದ್ದಾರೆ ಎಂದರು.
ಪೂರ್ವ ಭಾರತದವರು ಚೀನೀಯರಂತೆ ಕಂಡರೆ ದಕ್ಷಿಣ ಭಾರತದವರು ಆಫ್ರಿಕನ್ನರನ್ನು ಹೋಲುತ್ತಾರೆ ಆದರೆ ನಾವು ಎಲ್ಲಾ ಭಾಷಿಗರನ್ನು ಗೌರವಿಸುತ್ತೇವೆ ಎಂದು ವಿವಾದ ಹುಟ್ಟುಹಾಕಿದ್ದರು. ತೆಲಂಗಾಣದ ವಾರಂಗಲ್ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಏಕೆ ಅವಮಾನಿಸುತ್ತಿದ್ದಾರೆ ಎಂದು ಈಗ ನನಗೆ ಅರ್ಥವಾಗುತ್ತಿದೆ ಎಂದು ಹೇಳಿದರು.
ಆದಿವಾಸಿ ಕುಟುಂಬದ ಮಗಳಾಗಿರುವ ದ್ರೌಪದಿ ಮುರ್ಮು ಅವರನ್ನು ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸುತ್ತಿದೆ ಎಂದು ನಾನು ತುಂಬಾ ಯೋಚಿಸುತ್ತಿದ್ದೆ ಆದರೆ ಇಂದು ನನಗೆ ಕಾರಣ ತಿಳಿಯಿತು. ನಾನು ಇಂದು ತುಂಬಾ ಕೋಪಗೊಂಡಿದ್ದೇನೆ, ಯಾರಾದರೂ ನನ್ನನ್ನು ನಿಂದಿಸಿದರೆ, ನಾನು ಅದನ್ನು ಸಹಿಸಿಕೊಳ್ಳಬಲ್ಲೆ, ಆದರೆ ಜನರನ್ನು ಚರ್ಮದ ಆಧಾರದಲ್ಲಿ ನಿಂತಿಸಿದರೆ ನಾನು ಸಹಿಸಿಕೊಳ್ಳುವುದಿಲ್ಲ ಎಂದರು.
ಮತ್ತಷ್ಟು ಓದಿ: ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣ್ತಾರೆ: ಸ್ಯಾಮ್ ಪಿತ್ರೋಡಾ
ಸ್ಯಾಮ್ ಪಿತ್ರೋಡಾ ನೀಡಿದ ಸಂದರ್ಶನದಲ್ಲಿ ನಾವು 75 ವರ್ಷಗಳ ಕಾಲ ಸಂತೋಷದ ವಾತಾವರಣದಲ್ಲಿ ಬದುಕಿದ್ದೇವೆ, ಕೆಲವು ಭಿನ್ನಾಭಿಪ್ರಾಯಗಳಿದ್ದರೂ ಒಟ್ಟಿಗೆ ವಾಸಿಸುತ್ತಿದ್ದೇವೆ. ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ, ಪಶ್ಚಿಮದ ಜನರು ಅರಬ್ರಂತೆ ಕಾಣುತ್ತಾರೆ, ಉತ್ತರದಲ್ಲಿರುವ ಜನರು ಬಿಳಿಯಂತೆ ಕಾಣುತ್ತಾರೆ ಮತ್ತು ಬಹುಶಃ ದಕ್ಷಿಣದ ಜನರು ಆಫ್ರಿಕನ್ನರಂತೆ ಕಾಣುತ್ತಾರೆ ಎಂದರು.
ಮೋದಿ ವಿಡಿಯೋ
ಪಿತ್ರೋಡಾ ಅಮೆರಿಕದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ಇದೆ ಎಂದು ಹೇಳಿದ್ದರು. ಒಬ್ಬ ವ್ಯಕ್ತಿ 100 ಮಿಲಿಯನ್ ಡಾಲರ್ ಮೌಲ್ಯದ ಆಸ್ತಿಯನ್ನು ಹೊಂದಿದ್ದರೆ ಅವರ ಮರಣದ ನಂತರ 45ರಷ್ಟು ಆಸ್ತಿಯನ್ನು ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ ಮತ್ತು ಶೇ.55ರಷ್ಟು ಆಸ್ತಿ ಸರ್ಕಾರದ ಮಾಲೀಕತ್ವದಲ್ಲಿರುತ್ತದೆ. ಇದೊಂದು ಕುತೂಹಲಕಾರಿ ಕಾನೂನು ಎಂದು ಪಿತ್ರೋಡಾ ಹೇಳಿದ್ದರು.
ನಿಮ್ಮ ತಲೆಮಾರಿನಲ್ಲಿ ಆಸ್ತಿ ಸಂಪಾದಿಸಿ ಅದನ್ನು ಬಿಟ್ಟು ಹೋಗುತ್ತಿದ್ದೀರೆಂದರೆ, ಸಾರ್ವಜನಿಕರಿಗೆ ನೀವು ಆಸ್ತಿ ಬಿಟ್ಟುಹೋಗಬೇಕಾಗುತ್ತದೆ. ಎಲ್ಲಾವೂ ಅಲ್ಲ, ಅರ್ಧದಷ್ಟು ಆಸ್ತಿ ಮಾತ್ರ. ಇದು ನನಗೆ ನ್ಯಾಯಯುತ ಎನಿಸುತ್ತದೆ ಎಂದು ಸ್ಯಾಮ್ ಪಿತ್ರೋಡಾ ಹೇಳಿದ್ದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:21 pm, Wed, 8 May 24