AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಆರ್​ಎಸ್​​​ ಡಿಎನ್ಎಯಲ್ಲೇ ಸ್ವಜನಪಕ್ಷಪಾತ, ಭ್ರಷ್ಟಾಚಾರವಿದೆ: ತೆಲಂಗಾಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಬಿಆರ್​ಎಸ್, ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಅರಳುತ್ತದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎಂದಿಗೂ ಅದನ್ನು ಬಿಡುವುದಿಲ್ಲ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.

ಬಿಆರ್​ಎಸ್​​​ ಡಿಎನ್ಎಯಲ್ಲೇ ಸ್ವಜನಪಕ್ಷಪಾತ, ಭ್ರಷ್ಟಾಚಾರವಿದೆ: ತೆಲಂಗಾಣದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ನರೇಂದ್ರ ಮೋದಿ
ಗಣಪತಿ ಶರ್ಮಾ
| Edited By: |

Updated on:Nov 08, 2023 | 9:24 AM

Share

ಹೈದರಾಬಾದ್, ನವೆಂಬರ್ 7: ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (BRS) ಹಾಗೂ ಕಾಂಗ್ರೆಸ್​ (Congress) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣ ವಿಧಾನಸಭೆ ಪ್ರಚಾರಕ್ಕಾಗಿ ಎಲ್​ಬಿ ಸ್ಟೇಡಿಯಂನಲ್ಲಿ ಬಿಜೆಪಿ ಆಯೋಜಿಸಿದ್ದ ಬಿಸಿ ಸ್ವಾಭಿಮಾನ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸ್ವಜನಪಕ್ಷಪಾತ, ಭ್ರಷ್ಟಾಚಾರ ಮತ್ತು ತುಷ್ಟೀಕರಣ ಎಂಬುದು ಬಿಆರ್​​ಎಸ್ ಮತ್ತು ಕಾಂಗ್ರೆಸ್​​ ಪಕ್ಷಗಳ ಡಿಎನ್​ಎಯಲ್ಲೇ ಅಡಗಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.

ಬಿಆರ್​ಎಸ್, ಕಾಂಗ್ರೆಸ್ ರಕ್ಷಣೆಯಲ್ಲಿ ಭ್ರಷ್ಟಾಚಾರ ಅರಳುತ್ತದೆ. ಕಾಂಗ್ರೆಸ್ ಮತ್ತು ಬಿಆರ್‌ಎಸ್ ಎಂದಿಗೂ ಅದನ್ನು ಬಿಡುವುದಿಲ್ಲ. ಹಿಂದುಳಿದ ವರ್ಗದ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಎಂದು ಪ್ರಧಾನಿ ಮೋದಿ ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶ್ಲಾಘಿಸಿದ ಪ್ರಧಾನಿ, ಹಿಂದುಳಿದ ವರ್ಗದ ಜನರ ಹಕ್ಕುಗಳನ್ನು ಪೂರೈಸುವುದು ಎನ್‌ಡಿಎ. ಅವರಿಗೆ ನ್ಯಾಯಯುತ ಪ್ರಾತಿನಿಧ್ಯವನ್ನು ಒದಗಿಸುವುದು ಎನ್‌ಡಿಎ. ನಾವು ಎಪಿಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. 1996ರಲ್ಲಿ ಬುಡಕಟ್ಟು ಜನಾಂಗದ ನಾಯಕ ಪಿ.ಎಸ್.ಸಂಗಮಾಜಿ ಅವರನ್ನು ಲೋಕಸಭಾ ಸ್ಪೀಕರ್ ಹುದ್ದೆಗೆ ಆಯ್ಕೆ ಮಾಡಿದಾಗ ಅಟಲ್‌ಜಿ ಸಂಪೂರ್ಣ ಬೆಂಬಲ ನೀಡಿದರು ಎಂದು ಮೋದಿ ಹೇಳಿದರು.

ದೇಶಕ್ಕೆ ಮೊದಲ ಬುಡಕಟ್ಟು ಜನಾಂಗದ ಲೋಕಸಭೆ ಸ್ಪೀಕರ್ ಬಾಲ ಯೋಗಿ ಜೀಯನ್ನು ನೀಡಿದ್ದು ಎನ್‌ಡಿಎ. ಬುಡಕಟ್ಟು ಮಹಿಳೆಯಾಗಿದ್ದ ದ್ರೌಪದಿ ಮುರ್ಮು ಅವರನ್ನು ನಾವು ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದ್ದೇವೆ. ನಾವು ಹಿಂದುಳಿದ ವರ್ಗದ ನಾಯಕರಾಗಿರುವ ರಾಮ್ ನಾಥ್ ಕೋವಿಂದ್ ಅವರನ್ನು ಕೂಡ ರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿದ್ದೇವೆ. ದೇಶದ ಮೊದಲ ಒಬಿಸಿ ಪ್ರಧಾನಮಂತ್ರಿಯಾದ ನನ್ನನ್ನು ದೇಶವಾಸಿಗಳ ಆಶೀರ್ವಾದದೊಂದಿಗೆ ಎನ್‌ಡಿಎ ಆಯ್ಕೆ ಮಾಡಿದೆ. 27 ಒಬಿಸಿ ಕ್ಯಾಬಿನೆಟ್ ಮಂತ್ರಿಗಳಿದ್ದಾರೆ, ಇದು ದಾಖಲೆಯಾಗಿದೆ ಎಂದು ಅವರು ಹೇಳಿದರು.

ತೆಲಂಗಾಣ ವಿಧಾನಸಭಾ ಚುನಾವಣೆ ಕುರಿತು ಮಾತನಾಡಿದ ಪ್ರಧಾನಿ, ರಾಜ್ಯದಲ್ಲಿ ಬದಲಾವಣೆಯ ಬಿರುಗಾಳಿ ಎದ್ದಿದೆ. ರಾಜ್ಯದ ಜನತೆ ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ. ಎಲ್ಲರೂ ತೆಲಂಗಾಣದಲ್ಲಿ ಬದಲಾವಣೆಯತ್ತ ಚಿತ್ತ ಹರಿಸಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ‘ಅಭಿವೃದ್ಧಿ ವಿರೋಧಿ’ ಸರ್ಕಾರ ಇಲ್ಲಿದೆ. ಈಗ ಅದನ್ನು ಹೊರಹಾಕುವ ಸಮಯ ಬಂದಿದೆ. ರಾಜ್ಯದಲ್ಲಿ ‘ಕಮಲ’ ಅರಳುವುದನ್ನು ನೀವು ಖಚಿತಪಡಿಸಿಕೊಳ್ಳಬೇಕು ಎಂದು ಮೋದಿ ಕರೆ ನೀಡಿದರು.

ಇದನ್ನೂ ಓದಿ: ಮಹಾರಾಷ್ಟ್ರ ಪಂಚಾಯತ್ ಚುನಾವಣೆ ಫಲಿತಾಂಶ: ಮರಾಠಾ vs ಒಬಿಸಿ ಧ್ರುವೀಕರಣ ಸ್ಪಷ್ಟ ಎಂದ ವಿಶ್ಲೇಷಕರು

ಬಿಆರ್​ಎಸ್​​​ ಕಾಂಗ್ರೆಸ್​​ನ ಸಿ ಟೀಮ್: ಮೋದಿ

ಬಿಆರ್‌ಎಸ್ ತನ್ನ ಕುಟುಂಬಕ್ಕೆ ಮಾತ್ರ ಆದ್ಯತೆ ನೀಡುತ್ತಿದೆ. ಲಂಗಾಣ ಸರ್ಕಾರ ಬಿಸಿಯೂಟದತ್ತ ಗಮನ ಹರಿಸಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಿಆರ್‌ಎಸ್ ಸಿ ಟೀಮ್ ಆಗಿದೆ ಎಂದು ಮೋದಿ ಟೀಕಿಸಿದರು. ಮೋದಿಯನ್ನು ಪ್ರಧಾನಿ ಮಾಡಲು ಎಲ್​ಬಿ ಸ್ಟೇಡಿಯಂನಲ್ಲಿ ಬುನಾದಿ ಹಾಕಲಾಗಿತ್ತು. ಇದೀಗ ತೆಲಂಗಾಣದಲ್ಲಿ ಹಿಂದುಳಿದ ವರ್ಗದವರನ್ನು ಮುಖ್ಯಮಂತ್ರಿ ಮಾಡುವ ಪ್ರಕ್ರಿಯೆಯ ಆರಂಭವೂ ಇಲ್ಲೇ ನಡೆಯಲಿದೆ ಎಂದು ಪ್ರಧಾನಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:53 pm, Tue, 7 November 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್