Mann Ki Baat: ನಾಳೆ ಮನ್​ ಕೀ ಬಾತ್​ನ ನೂರನೇ ಆವೃತ್ತಿ; ತಮ್ಮದೇ ಮನದ ಮಾತು ಕೇಳಲು ಮೋದಿ ಎಲ್ಲಿರುತ್ತಾರೆ ಗೊತ್ತೇ?

ಧ್ವನಿ ಮುದ್ರೀಕರಿಸಿಕೊಂಡಿರುವ ನೂರನೇ ಸಂಚಿಕೆಯ ಮನ್ ಕೀ ಬಾತ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆದರೆ, ಸದ್ಯ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿರುವ ಮೋದಿ ಭಾನುವಾರವೂ ರಾಜ್ಯದಲ್ಲೇ ಇರಲಿದ್ದಾರೆ. ಅವರು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಕಾರ್ಯಕ್ರಮ ವೀಕ್ಷಣೆ / ಕೇಳಲು ಎಲ್ಲಿರುತ್ತಾರೆ ಗೊತ್ತೇ?

Mann Ki Baat: ನಾಳೆ ಮನ್​ ಕೀ ಬಾತ್​ನ ನೂರನೇ ಆವೃತ್ತಿ; ತಮ್ಮದೇ ಮನದ ಮಾತು ಕೇಳಲು ಮೋದಿ ಎಲ್ಲಿರುತ್ತಾರೆ ಗೊತ್ತೇ?
Follow us
Ganapathi Sharma
|

Updated on:Apr 29, 2023 | 5:33 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಮನ್ ಕೀ ಬಾತ್ (Mann Ki Baat) ಕಾರ್ಯಕ್ರಮದ 100 ನೇ ಸಂಚಿಕೆಯ ಪ್ರಸಾರಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈಗಾಗಲೇ ವಿಶೇಷ ಸಿದ್ಧತೆಗಳನ್ನು ನಡೆಸಿದೆ. ಈ ನಿಟ್ಟಿನಲ್ಲಿ ದೆಹಲಿಯಲ್ಲಿ ಬುಧವಾರ ರಾಷ್ಟ್ರೀಯ ಸಮಾವೇಶ ಆಯೋಜಿಸಲಾಗಿತ್ತು. ಇದರಲ್ಲಿ 105 ಜನರನ್ನು ವಿಶೇಷವಾಗಿ ಆಹ್ವಾನಿಸಲಾಗಿದ್ದು, ಅವರ ಸೃಜನಶೀಲ ಮತ್ತು ಸಾಮಾಜಿಕ ಕಾರ್ಯಗಳನ್ನು ಪ್ರಧಾನಿ ಮೋದಿ ತಮ್ಮ ಮನ್​ ಕೀ ಬಾತ್​ನಲ್ಲಿ ಪ್ರಸ್ತಾಪಿಸಿದ್ದಾರೆ. ನೂರನೇ ಸಂಚಿಕೆಯ ಮನ್ ಕೀ ಬಾತ್ ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ. ಆದರೆ, ಸದ್ಯ ಕರ್ನಾಟಕದಲ್ಲಿ ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿರುವ ಮೋದಿ ಭಾನುವಾರವೂ ರಾಜ್ಯದಲ್ಲೇ ಇರಲಿದ್ದಾರೆ. ಅವರು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಕಾರ್ಯಕ್ರಮ ವೀಕ್ಷಣೆ / ಕೇಳಲು ಎಲ್ಲಿರುತ್ತಾರೆ ಗೊತ್ತೇ?

ರಾಜ್ಯ ಪ್ರವಾಸದಲ್ಲಿರುವ ಮೋದಿ ಇಂದು (ಶನಿವಾರ) ರಾತ್ರಿ ಬೆಂಗಳೂರಿನ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ಅವರು ಚುನಾವಣಾ ಪ್ರಚಾರಕ್ಕೆ ಹೊರಡುವ ಮೊದಲು ರಾಜಭವನದಲ್ಲೇ ಇದ್ದುಕೊಂಡು ಮನ್ ಕೀ ಬಾತ್​​ನ ನೂರನೇ ಸಂಚಿಕೆ ಪ್ರಸಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಂತರ ತೆರಳಲಿದ್ದು ಕೋಲಾರ, ಮೈಸೂರು, ಚನ್ನಪಟ್ಟಣಗಳಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಮನ್​ ಕೀ ಬಾತ್​​ ಆರಂಭವಾಗಿದ್ದು ಯಾವಾಗ?

ಮನ್ ಕೀ ಬಾತ್ ಕಾರ್ಯಕ್ರಮದ ಮೊದಲ ಸಂಚಿಕೆ 2014 ರ ಅಕ್ಟೋಬರ್ 3 ರಂದು ಪ್ರಸಾರವಾಯಿತು. 9 ವರ್ಷಗಳಲ್ಲಿ, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಹಲವಾರು ಜನರ, ಎಲೆಮರೆಯ ಕಾಯಿಯಂತಿದ್ದ ಸಾಧಕರ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಆ ಸಾಧಕರು ಪ್ರಸಿದ್ಧರಾಗಿದ್ದಾರೆ ಮತ್ತು ದೇಶದ ಜನರ ಗಮನ ಸೆಳೆದಿದ್ದಾರೆ.

ಮನ್​ ಕೀ ಬಾತ್​​ನ 99ನೇ ಸಂಚಿಕೆಯಲ್ಲಿ ಮೋದಿ ಅವರು, ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಅಬಾಬತ್ ಕೌರ್ ಬಗ್ಗೆ ಪ್ರಸ್ತಾಪಿಸಿದ್ದರು. ಹರಿಯಾಣದ ಸುನಿಲ್ ಜಗ್ಲಾನ್ ಬಗ್ಗೆ ಪ್ರಧಾನಿ ಮೋದಿ ನಾಲ್ಕು ಬಾರಿ ಪ್ರಸ್ತಾಪಿಸಿದ್ದಾರೆ. ಜಿಂದ್‌ನ ನಿವಾಸಿಯಾದ ಜಗ್ಲಾನ್ ಅವರು ‘ಸೆಲ್ಫಿ ವಿದ್​ ಡಾಟರ್’ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನವು ವಿಶ್ವದ ಸುಮಾರು 80 ದೇಶಗಳನ್ನು ತಲುಪಿದೆ. ಜಮ್ಮುವಿನ ಪಲ್ಲಿಯಲ್ಲಿ ವಾಸಿಸುತ್ತಿರುವ ವಿನೋದ್ ಕುಮಾರ್ ಅವರನ್ನೂ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. 27 ವರ್ಷಗಳಿಂದ ಜೇನು ಸಾಕಾಣಿಕೆ ಮಾಡುತ್ತಿರುವ ಇವರು ವರ್ಷಕ್ಕೆ 15ರಿಂದ 20 ಲಕ್ಷ ರೂಪಾಯಿ ಆದಾಯ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Mann Ki Baat: ಮನ್ ಕಿ ಬಾತ್​​ನ 100ನೇ ಸಂಚಿಕೆ, 9 ಸಾವಿರ ಕಡೆಗಳಲ್ಲಿ ಸಾಕ್ಷಿಯಾಗಲಿರುವ ಹರಿಯಾಣದ 9 ಲಕ್ಷ ಜನ

ಪ್ರಸಾರ ಭಾರತಿಯು 11 ವಿದೇಶಿ ಸೇರಿದಂತೆ 52 ಭಾಷೆಗಳು ಮತ್ತು ಉಪಭಾಷೆಗಳಲ್ಲಿ ಮನ್ ಕೀ ಬಾತ್‌ನ ಅನುವಾದ ಮತ್ತು ಪ್ರಸಾರವನ್ನು ಮಾಡುತ್ತದೆ. ಮನ್ ಕೀ ಬಾತ್ ರೇಡಿಯೊ ಕಾರ್ಯಕ್ರಮವಾಗಿದ್ದು, ಇದನ್ನು ಟಿವಿ ಚಾನೆಲ್‌ಗಳು ಏಕಕಾಲದಲ್ಲಿ ಪ್ರಸಾರ ಮಾಡುತ್ತವೆ. ದೂರದರ್ಶನ ನೆಟ್‌ವರ್ಕ್‌ನ 34 ಚಾನೆಲ್‌ಗಳು ಮತ್ತು 100 ಕ್ಕೂ ಹೆಚ್ಚು ಖಾಸಗಿ ಉಪಗ್ರಹ ಟಿವಿ ಚಾನೆಲ್‌ಗಳು ಈ ವಿನೂತನ ಕಾರ್ಯಕ್ರಮವನ್ನು ದೇಶದ ಮೂಲೆ ಮೂಲೆಗೂ ತಲುಪಿಸುತ್ತವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Sat, 29 April 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್