ಗಗನಯಾನದ ಯಶಸ್ಸಿನತ್ತ ನಮ್ಮ ಚಿತ್ತ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ

ಮಹಾರಾಷ್ಟ್ರದ ಪರ್ಭಾನಿಯಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಉದ್ದೇಶ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಗಗನಯಾನದ ಯಶಸ್ಸಿನತ್ತ ಭಾರತ ಚಿತ್ತನೆಟ್ಟಿದೆ ಎಂದರು. ಬಿಜೆಪಿ ಸರ್ಕಾರದ 10 ವರ್ಷಗಳ ಸಾಧನೆಗಳನ್ನು ಬಿಚ್ಚಿಟ್ಟ ಅವರು, ಸಂಸದ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಲೂ ವೇದಿಕೆಯನ್ನು ಬಳಸಿಕೊಂಡರು.

ಗಗನಯಾನದ ಯಶಸ್ಸಿನತ್ತ ನಮ್ಮ ಚಿತ್ತ: ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Follow us
Ganapathi Sharma
|

Updated on: Apr 20, 2024 | 1:48 PM

ನಾಂದೇಡ್‌, ಏಪ್ರಿಲ್ 20: ಗಗನ್‌ಯಾನ್‌ ಯೋಜನೆಯ ಯಶಸ್ಸಿಗೆ ದೇಶದ ಜನತೆ ಕಾತರದಿಂದ ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು. ಮಹಾರಾಷ್ಟ್ರದ (Maharashtra) ಪರ್ಭಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತವನ್ನು ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವುದು ಈ ಚುನಾವಣೆಯ ಧ್ಯೇಯವಾಗಿದೆ ಎಂದು ಹೇಳಿದರು.

ಹಿಂದಿನ ಸರ್ಕಾರದಲ್ಲಿ ನಾವು ಚಂದ್ರಯಾನದ ಯಶಸ್ಸನ್ನು ನೋಡಿದ್ದೇವೆ. ಈಗ ಮುಂದಿನ ಸರ್ಕಾರದಲ್ಲಿ 140 ಕೋಟಿ ದೇಶವಾಸಿಗಳು ಗಗನ್ಯಾನದ ಯಶಸ್ಸನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಿದರು. ಸೇನೆಯಿಂದ ಹಿಡಿದು ಕೊರೊನಾ ಕಾಲದ ಔಷಧಿಗಳವರೆಗೆ ದೇಶದ ಜನತೆ ಸ್ವಾವಲಂಬನೆಯ ಉದಾಹರಣೆಗಳನ್ನು ನೋಡುತ್ತಿರುವ ಸಂದರ್ಭದಲ್ಲಿ ದೇಶದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇವಲ ಹತ್ತು ವರ್ಷಗಳಲ್ಲಿ ದೇಶ ಅಭಿವೃದ್ಧಿಯಲ್ಲಿ ಬಹಳ ದೂರ ಕ್ರಮಿಸಿದೆ ಎಂದು ಪ್ರಧಾನಿ ಮೋದಿ ಹೇಳಿದರು. 2014ರಲ್ಲಿ ನಾನು ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾಗ ಮಾಧ್ಯಮಗಳಲ್ಲಿ ಪ್ರತಿದಿನ ಉಗ್ರರ ದಾಳಿ, ಬಾಂಬ್ ಸ್ಫೋಟದ ಸುದ್ದಿ ಬರುತ್ತಿತ್ತು. ಆದರೆ 2019ರಿಂದ ಗಡಿಯಾಚೆಯಿಂದ ಭಯೋತ್ಪಾದಕರ ಒಳನುಸುಳುವಿಕೆ ಕೂಡ ಸ್ಥಗಿತಗೊಂಡಿದೆ ಎಂದರು. ಜತೆಗೆ, ಸರ್ಜಿಕಲ್ ಸ್ಟ್ರೈಕ್ ಬಗ್ಗೆಯೂ ಪ್ರಸ್ತಾಪಿಸಿದರು.

ವಯನಾಡ್​ನಿಂದಲೂ ರಾಹುಲ್ ಪಲಾಯನ: ಮೋದಿ ವ್ಯಂಗ್ಯ

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಕೇರಳದ ವಯನಾಡ್​ನಲ್ಲಿ ಕೂಡ ಜನ ಬೆಂಬಲ ಪಡೆಯುವುದು ಕಷ್ಟವಾಗಲಿದೆ. ಅವರು ಅಲ್ಲಿಂದಲೂ ಪಲಾಯನ ಮಾಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು. ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ರಾಹುಲ್ ಗಾಂಧಿಯನ್ನು ಶೆಹಜಾದಾ (ರಾಜಕುಮಾರ) ಎಂದು ಉಲ್ಲೇಖಿಸಿದ ಮೋದಿ, ಏಪ್ರಿಲ್ 26 ರಂದು ವಯನಾಡ್‌ನಲ್ಲಿ ಮತದಾನಕ್ಕಾಗಿ ಕಾಂಗ್ರೆಸ್ ಕಾಯುತ್ತಿದೆ. 2019 ರಲ್ಲಿ ಅಮೇಥಿಯಿಂದ ಓಡಿಹೋದ ರಾಹುಲ್ ಗಾಂಧಿ ಈ ಬಾರಿ ಚುನಾವಣೆ ನಂತರ ವಯನಾಡ್​ನಿಂದಲೂ ಓಡಿಹೋಗುತ್ತಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

ರಾಹುಲ್ ಗಾಂಧಿ ವಯನಾಡ್‌ನಲ್ಲಿ ಕೂಡ ಬಿಕ್ಕಟ್ಟನ್ನು ಎದುರಿಸುತ್ತಿದ್ದಾರೆ. ಅವರ ಸಹಾಯಕರು ಏಪ್ರಿಲ್ 26 ರಂದು ಮತದಾನಕ್ಕಾಗಿ ಕಾಯುತ್ತಿದ್ದಾರೆ. ಅಮೇಥಿಯಿಂದ ಓಡಿಹೋದ ಅವರು ವಯನಾಡ್​​ನಿಂದಲೂ ಓಡಿಹೋಗಲಿದ್ದಾರೆ ಎಂದು ನೀವು ಊಹಿಸಬಹುದು ಎಂದು ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ