AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್ ಇಲ್ಲದಿದ್ದರೆ, ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು, ಕಾಶ್ಮೀರಿ ಪಂಡಿತರ ವಲಸೆ ನಡೆಯುತ್ತಿರಲಿಲ್ಲ ಎಂಬುದು ನನ್ನ ಅಭಿಪ್ರಾಯ. ಕಾಂಗ್ರೆಸ್​ಗೆ ಕುಟುಂಬ ರಾಜಕಾರಣದ ಹೊರತಾಗಿ ಯೋಚನೆ ಮಾಡಲು ಅಸಾಧ್ಯ ಎಂದು ನರೇಂದ್ರ ಮೋದಿ ಟೀಕಿಸಿದ್ದಾರೆ.

PM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ಸಂಸತ್​ನಲ್ಲಿ ನರೇಂದ್ರ ಮೋದಿ
TV9 Web
| Updated By: ಸುಷ್ಮಾ ಚಕ್ರೆ|

Updated on:Feb 08, 2022 | 1:36 PM

Share

ನವದೆಹಲಿ: ವಂಶ ಪಾರಂಪರಿಕ ಪಕ್ಷಗಳು ನಮ್ಮ ಪ್ರಜಾಪ್ರಭುತ್ವಕ್ಕೆ ದೊಡ್ಡ ಮಾರಕ. ಕಾಂಗ್ರೆಸ್  (Congress) ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆ, ಕಾಶ್ಮೀರಿ ಪಂಡಿತರ ನಿರ್ಗಮನ ಸಂಭವಿಸುತ್ತಿರಲಿಲ್ಲ. ಕೆಲವು ಜನರ ಅಭಿಪ್ರಾಯದಲ್ಲಿ ಇತಿಹಾಸವೆಂದರೆ ಅದು ಕೇವಲ ಒಂದು ಕುಟುಂಬಕ್ಕೆ ಮಾತ್ರ ಸಂಬಂಧಿಸಿದ್ದು. ಅಲ್ಲಿ ದೇಶದ ಇತಿಹಾಸ ಗೋಚರವಾಗುವುದೇ ಇಲ್ಲ ಎಂದು ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಇಂದು ಕೂಡ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ವಾಗ್ದಾಳಿ ಮುಂದುವರೆಸಿದ್ದಾರೆ. ನಿನ್ನೆ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯಕ್ಕೆ ಉತ್ತರಿಸಿದ್ದ ಮೋದಿ ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದರು. ಇಂದಿನ ಸಂಸತ್ ಭಾಷಣದಲ್ಲಿ ಕೂಡ ಕಾಂಗ್ರೆಸ್​​ ವಿರುದ್ಧ ಪ್ರಧಾನಮಂತ್ರಿ ಹರಿಹಾಯ್ದಿದ್ದಾರೆ.

“ಕಾಂಗ್ರೆಸ್ ಭಾರತಕ್ಕೆ ಅಡಿಪಾಯವನ್ನು ಹಾಕಿತು, ಬಿಜೆಪಿ ಕೇವಲ ಧ್ವಜವನ್ನು ಹಾರಿಸಿತು ಎಂದು ಸದನದಲ್ಲಿ ಹೇಳಲಾಗಿದೆ. ಕೆಲವರು ಭಾರತವು 1947ರಲ್ಲಿ ಹುಟ್ಟಿದೆ ಎಂದುಕೊಂಡಿದ್ದಾರೆ. ಈ ಆಲೋಚನೆಯಿಂದಾಗಿ ಸಮಸ್ಯೆಗಳು ಉದ್ಭವಿಸುತ್ತವೆ. ಈ ಮನಸ್ಥಿತಿಯು ಕಳೆದ 50 ವರ್ಷಗಳಿಂದ ದುಡಿಯುವ ಅವಕಾಶ ಪಡೆದವರ ನೀತಿಗಳ ಮೇಲೆ ಪರಿಣಾಮ ಬೀರಿದೆ. ಇದು ವಿಕೃತಿಗಳನ್ನು ಕೂಡ ಸೃಷ್ಟಿಸಿತು. ಈ ಪ್ರಜಾಪ್ರಭುತ್ವ ನಮಗೆ ದಕ್ಕಿರುವುದು ನಿಮ್ಮ ಔದಾರ್ಯದಿಂದಲ್ಲ. ಪ್ರಜಾಪ್ರಭುತ್ವದ ಕತ್ತು ಹಿಸುಕಿದವರು ಆ ಕುರಿತು ಮಾತನಾಡಬಾರದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.

ಒಂದು ರಾಜಕೀಯ ಪಕ್ಷದಲ್ಲಿ ಒಂದು ಕುಟುಂಬವು ಹೆಚ್ಚು ಪ್ರಚಲಿತವಾದಾಗ ದೇಶದ ನಿಜವಾದ ರಾಜಕೀಯ ಪ್ರತಿಭೆಗಳಿಗೆ ತೊಂದರೆಯಾಗುತ್ತದೆ. ‘ಕಾಂಗ್ರೆಸ್ ನಾ ಹೋತಿ, ತೋ ಕ್ಯಾ ಹೋತಾ’ ಎಂದು ಹೇಳಲಾಗಿತ್ತು. ‘ಭಾರತವೇ ಇಂದಿರಾ, ಇಂದಿರಾ ಅವರೇ ಭಾರತ’ ಎಂಬ ಚಿಂತನೆಯ ಫಲವನ್ನು ನಾವು ಈಗ ಅನುಭವಿಸುತ್ತಿದ್ದೇವೆ. ಕಾಂಗ್ರೆಸ್ ಇಲ್ಲದಿದ್ದರೆ, ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು, ಕಾಶ್ಮೀರಿ ಪಂಡಿತರ ವಲಸೆ ನಡೆಯುತ್ತಿರಲಿಲ್ಲ ಎಂಬುದು ನನ್ನ ಅಭಿಪ್ರಾಯ. ಕಾಂಗ್ರೆಸ್ ಕೇವಲ ವಂಶ ಪಾರಂಪರಿಕ ರಾಜಕಾರಣದತ್ತ ಕೇಂದ್ರೀಕರಿಸಿತೇ ವಿನಃ ದೇಶದ ಅಭಿವೃದ್ಧಿಯತ್ತ ಹೆಚ್ಚು ಗಮನ ನೀಡಲಿಲ್ಲ ಎಂದು ಮೋದಿ ಟೀಕಿಸಿದ್ದಾರೆ.

ಇತಿಹಾಸವನ್ನು ಬದಲಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ಅರ್ಬನ್ ನಕ್ಸಲ್ ಬಲೆಗೆ ಸಿಲುಕಿದೆ. ನಗರ ನಕ್ಸಲರು ಅವರ ಸಂಪೂರ್ಣ ಆಲೋಚನಾ ವಿಧಾನವನ್ನು ಸೆರೆಹಿಡಿದಿದ್ದಾರೆ. ನಗರ ನಕ್ಸಲರು ಅವರ ದುಃಸ್ಥಿತಿಯ ಲಾಭವನ್ನು ಪಡೆದುಕೊಂಡಿದ್ದಾರೆ. ಭಾರತದ ಉಜ್ವಲ ಭವಿಷ್ಯದಲ್ಲಿ ನಂಬಿಕೆ ಇಡುವಂತೆ ನಾನು ಎಲ್ಲರನ್ನು ವಿನಂತಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ  ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಯುವಕರ ಪ್ರಯತ್ನದಿಂದಾಗಿ ಭಾರತವು ಸ್ಟಾರ್ಟ್‌ಅಪ್‌ಗಳ ವಿಷಯದಲ್ಲಿ ಅಗ್ರ ಮೂರು ರಾಷ್ಟ್ರಗಳಲ್ಲಿ ಒಂದಾಗಿದೆ. ಸರ್ಕಾರವು ಹೆಚ್ಚಿನ ಉದ್ಯೋಗವನ್ನು ಒದಗಿಸುವ ಕೃಷಿ, ಎಂಎಸ್‌ಎಂಇ ವಲಯದ ಮೇಲೆ ಕೇಂದ್ರೀಕರಿಸಿದೆ ಎಂದು ಪ್ರಧಾನಮಂತ್ರಿ ಹೇಳಿದ್ದಾರೆ. ದೇಶದಲ್ಲಿ ಕೋವಿಡ್-19 ಲಸಿಕೆ ಕುರಿತು ಮಾತನಾಡಿದ ಪ್ರಧಾನಿ ಮೋದಿ, ದೇಶದಲ್ಲಿ 100 ಪ್ರತಿಶತದಷ್ಟು ಲಸಿಕೆ ವಿತರಿಸಲು ನಾವು ವೇಗವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕಳೆದ 2 ವರ್ಷಗಳಲ್ಲಿ ಕೆಲವು ರಾಜಕೀಯ ಪಕ್ಷಗಳ ಕೆಲವು ನಾಯಕರು ಅಪ್ರಬುದ್ಧತೆಯನ್ನು ತೋರಿಸಿದ್ದಾರೆ. ಇದು ರಾಷ್ಟ್ರವನ್ನು ನಿರಾಶೆಗೊಳಿಸಿದೆ. ರಾಜಕೀಯ ಸ್ವಾರ್ಥಕ್ಕಾಗಿ ಹೇಗೆ ಆಟಗಳನ್ನು ಆಡಲಾಗಿದೆ ಎಂಬುದನ್ನು ನಾವು ನೋಡಿದ್ದೇವೆ. ಭಾರತೀಯ ಲಸಿಕೆಗಳ ವಿರುದ್ಧ ಪ್ರಚಾರಗಳನ್ನು ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:  PM Modi in Parliament: ಇನ್ನು 100 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ; ಸಂಸತ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಲೇವಡಿ

ಉಪ್ಪನ್ನು ಸಿದ್ಧಪಡಿಸಿಕೊಳ್ಳಿ ಚುನಾವಣೆಯ ನಂತರ ನಾವು ಮೋದಿ ಮತ್ತು ಯೋಗಿಯನ್ನು ಸಮಾಧಿ ಮಾಡುತ್ತೇವೆ ಎಂದ ಯುಪಿ ಕಾಂಗ್ರೆಸ್ ನಾಯಕ ಅಜಯ್ ರೈ

Published On - 1:17 pm, Tue, 8 February 22

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್