AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Shimla: ಶಿಮ್ಲಾದಲ್ಲಿ ಗರೀಬ್ ಕಲ್ಯಾಣ್ ಸಮ್ಮೇಳನ; ಸರ್ಕಾರವಿನ್ನು ನಿಮ್ಮ ಸೇವಕ ಎಂದ ಪ್ರಧಾನಿ ಮೋದಿ

Garib Kalyan Sammelan: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 11ನೇ ಕಂತು ಆರ್ಥಿಕ ಪ್ರಯೋಜನವನ್ನು ಪ್ರಧಾನ ಮಂತ್ರಿ ಬಿಡುಗಡೆ ಮಾಡಿದ್ದಾರೆ. 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 21,000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

PM Modi in Shimla: ಶಿಮ್ಲಾದಲ್ಲಿ ಗರೀಬ್ ಕಲ್ಯಾಣ್ ಸಮ್ಮೇಳನ; ಸರ್ಕಾರವಿನ್ನು ನಿಮ್ಮ ಸೇವಕ ಎಂದ ಪ್ರಧಾನಿ ಮೋದಿ
ಶಿಮ್ಲಾದಲ್ಲಿ ನರೇಂದ್ರ ಮೋದಿImage Credit source: ANI
TV9 Web
| Edited By: |

Updated on:May 31, 2022 | 12:47 PM

Share

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಿಮಾಚಲ ಪ್ರದೇಶದ ಶಿಮ್ಲಾಕ್ಕೆ ಭೇಟಿ ನೀಡಿದ್ದು, ‘ಗರೀಬ್ ಕಲ್ಯಾಣ್ ಸಮ್ಮೇಳನ’ದಲ್ಲಿ (Garib Kalyan Sammelan) ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಹಾಗೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿ 11ನೇ ಕಂತಿನ ಆರ್ಥಿಕ ಪ್ರಯೋಜನವನ್ನು ಬಿಡುಗಡೆ ಮಾಡಿದ್ದಾರೆ. 2014ಕ್ಕೂ ಮುನ್ನ ಭ್ರಷ್ಟಾಚಾರ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿತ್ತು. 2014ರ ಮೊದಲು, ಸರ್ಕಾರವು ಭ್ರಷ್ಟಾಚಾರವನ್ನು ವ್ಯವಸ್ಥೆಯ ಅತ್ಯಗತ್ಯ ಭಾಗವೆಂದು ಪರಿಗಣಿಸಿತ್ತು. ಆಗ ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬದಲು ಸರ್ಕಾರ ಅದಕ್ಕೆ ಮಣಿದಿತ್ತು. ಆಗ ದೇಶವು ಯೋಜನೆಗಳ ಹಣವನ್ನು ನಿರ್ಗತಿಕರಿಗೆ ತಲುಪುವ ಮೊದಲು ಲೂಟಿ ಮಾಡುವುದು ಹೇಗೆಂದು ನೋಡುತ್ತಿತ್ತು. ಆದರೆ, ನಿಮ್ಮ ಸರ್ಕಾರ ಇನ್ನು ಮುಂದೆ ಯಜಮಾನನಲ್ಲ, ನಿಮ್ಮ ಸೇವಕವಾಗಿರುತ್ತದೆ. ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಗಳಿಂದ ನಮ್ಮ ಯೋಜನೆಗಳು ಜನರಿಗಾಗಿ ಸರ್ಕಾರದ ಅರ್ಥವನ್ನು ಬದಲಾಯಿಸಿವೆ. ಈಗ ಸರ್ಕಾರ ಯಜಮಾನನಲ್ಲ, ಸೇವಕನಾಗಿರುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಪರಾಧ ಮತ್ತು ಭ್ರಷ್ಟಾಚಾರದ ಬಗ್ಗೆ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. 130 ಕೋಟಿ ಭಾರತೀಯರ ಕುಟುಂಬದ ಸದಸ್ಯರಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಜೀವನವನ್ನೇ ನಿಮಗಾಗಿ ಮುಡಿಪಾಗಿಟ್ಟಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಮಂತ್ರಿ ನೇತೃತ್ವದ ಸರ್ಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಈ ಸಾರ್ವಜನಿಕ ಕಾರ್ಯಕ್ರಮವನ್ನು ದೇಶದಾದ್ಯಂತ ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ತಿಳಿಸಿದೆ. ಈ ಸಮ್ಮೇಳನದ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತ ಸರ್ಕಾರದ 9 ಸಚಿವಾಲಯಗಳು, ಇಲಾಖೆಗಳ ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳೊಂದಿಗೆ ನೇರವಾಗಿ ಸಂವಾದ ನಡೆಸಲಿದ್ದಾರೆ. ದೇಶದ ನಾಗರಿಕರ ಜೀವನ ಸೌಕರ್ಯವನ್ನು ಸುಧಾರಿಸಲು ಸರ್ಕಾರಿ ಕಾರ್ಯಕ್ರಮಗಳ ತಲುಪುವಿಕೆ ಮತ್ತು ವಿತರಣೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ಈ ಸಮ್ಮೇಳನದ ಪ್ರಯತ್ನವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 11ನೇ ಕಂತು ಆರ್ಥಿಕ ಪ್ರಯೋಜನವನ್ನು ಪ್ರಧಾನ ಮಂತ್ರಿ ಬಿಡುಗಡೆ ಮಾಡಿದ್ದಾರೆ. 10 ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 21,000 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಸಂದರ್ಭದಲ್ಲಿ, ಪ್ರಧಾನ ಮಂತ್ರಿಯವರು ದೇಶಾದ್ಯಂತ (PM-KISAN) ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ಸಮಾಜದ ಬಡ ವರ್ಗದ ಕೋಟ್ಯಂತರ ಫಲಾನುಭವಿಗಳು ಈ ಯೋಜನೆಗಳಡಿ ಸೌಲಭ್ಯ ಪಡೆದಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ವಸತಿ, ಕುಡಿಯುವ ನೀರು ಪೂರೈಕೆ, ಆಹಾರ, ಆರೋಗ್ಯ, ಜೀವನೋಪಾಯ, ಆರ್ಥಿಕ ಒಳಗೊಳ್ಳುವಿಕೆ ಯೋಜನೆಗಳ ಲಾಭವನ್ನು ನಾಗರಿಕರು ಪಡೆದಿರುವ ಬಗ್ಗೆ ಮತ್ತದರ ಪ್ರಭಾವದ ಕುರಿತು ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ರಾಷ್ಟ್ರಾದ್ಯಂತ ಎಲ್ಲಾ ಜಿಲ್ಲೆಗಳನ್ನು ಒಳಗೊಂಡಂತೆ ಏಕಕಾಲಕ್ಕೆ ಪ್ರಧಾನ ಮಂತ್ರಿ ಮೋದಿ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಅತಿ ದೊಡ್ಡ ಕಾರ್ಯಕ್ರಮ ಇದಾಗಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ ಮತ್ತು ನಗರ), ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಉಜ್ವಲ ಯೋಜನೆ, ಪೋಷಣ್ ಅಭಿಯಾನ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ ಮತ್ತು ನಗರ), ಜಲ ಜೀವನ್ ಮಿಷನ್ ಮತ್ತು ಅಮೃತ್ ಯೋಜನೆ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆ, ಒಂದು ರಾಷ್ಟ್ರ ಒಂದು ಪಡಿತರ ಚೀಟಿ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ, ಆಯುಷ್ಮಾನ್ ಭಾರತ್ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಹಾಗೂ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಸೌಲಭ್ಯ ಪಡೆದಿರುವ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಆಯ್ದ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ವೆಬ್‌ಕಾಸ್ಟ್ ಮೂಲಕ ಇದೇ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಕಿಸಾನ್ ಸಮ್ಮಾನ್ ನಿಧಿಯ 11ನೇ ಕಂತನ್ನು ಸಹ ಬಿಡುಗಡೆ ಮಾಡಲಿದ್ದಾರೆ. ಈ ರಾಷ್ಟ್ರೀಯ ಸಮ್ಮೇಳನವನ್ನು ದೂರದರ್ಶನದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. MyGov ಆ್ಯಪ್ ಮೂಲಕ ರಾಷ್ಟ್ರೀಯ ಕಾರ್ಯಕ್ರಮವನ್ನು ವೆಬ್‌ಕಾಸ್ಟ್ ಮಾಡಲು ಸಹ ನಿಬಂಧನೆಗಳನ್ನು ಮಾಡಲಾಗಿದೆ. ಇದಕ್ಕಾಗಿ ಜನರು ತಮ್ಮ ಹೆಸರನ್ನು ಅಲ್ಲಿ ನೋಂದಾಯಿಸಿಕೊಳ್ಳಬೇಕು. ಇದನ್ನು ಇತರ ಸಾಮಾಜಿಕ ಮಾಧ್ಯಮ ಚಾನಲ್‌ಗಳಾದ ಯೂಟ್ಯೂಬ್, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಇತ್ಯಾದಿಗಳ ಮೂಲಕವೂ ವೀಕ್ಷಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:31 pm, Tue, 31 May 22