PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ

PM Modi Addressing 76th UNGA | ಕಳೆದ ವರ್ಷ ಕೊರೊನಾ ಅಟ್ಟಹಾಸ ಮಿತಿ ಮೀರಿದ್ದರಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ವರ್ಚುವಲ್ ಆಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು. ಈ ಬಾರಿ ವಿಶ್ವಸಂಸ್ಥೆಯಲ್ಲಿ ಇಂದು ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ.

PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ
ನರೇಂದ್ರ ಮೋದಿ (ಸಂಗ್ರಹ ಚಿತ್ರ)
Updated By: ಸುಷ್ಮಾ ಚಕ್ರೆ

Updated on: Sep 25, 2021 | 6:36 PM

ನ್ಯೂಯಾರ್ಕ್: ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇದೀಗ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 76ನೇ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಕಳೆದ ವರ್ಷ ಕೊರೊನಾ ಅಟ್ಟಹಾಸ ಮಿತಿ ಮೀರಿದ್ದರಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ವರ್ಚುವಲ್ ಆಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ನಡೆಸಲಾಗಿತ್ತು. ಈ ಬಾರಿ ವಿಶ್ವಸಂಸ್ಥೆಯಲ್ಲಿ ಇಂದು ಪ್ರಧಾನಿ ಮೋದಿ ಮಾತನಾಡುತ್ತಿದ್ದಾರೆ.

ಕಳೆದ ಎರಡು ದಿನಗಳಿಂದ ಸಭೆಗಳು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆ ಮಾತುಕತೆ, ಕ್ವಾಡ್ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಬಳಿಕ ನ್ಯೂಯಾರ್ಕ್ ತಲುಪಿದ್ದರು. ಇಂದಿಗೆ ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಮುಕ್ತಾಯವಾಗಲಿದ್ದು, ನಾಳೆ ಭಾರತಕ್ಕೆ ಆಗಮಿಸಲಿದ್ದಾರೆ. ಈಗಾಗಲೇ ವಿಶ್ವಸಂಸ್ಥೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭವಾಗಿದೆ.

YouTube video player

ಭಾರತದಲ್ಲಿ ಹೂಡಿಕೆಯನ್ನು ಆಕರ್ಷಿಸಲು 5 ಜಾಗತಿಕ ಸಿಇಒಗಳ ಜೊತೆ ಕೂಡ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಇಂದಿನ ಸಭೆಯಲ್ಲಿ ಮುಖ್ಯವಾಗಿ ಕೋವಿಡ್ ಸಮಸ್ಯೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆಯಿದೆ. ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ, ಬಡತನ ನಿರ್ಮೂಲನೆ, ಆರ್ಥಿಕ ಚೇತರಿಕೆ, ಮಹಿಳಾ ಸಬಲೀಕರಣ, ಅಫ್ಘನಿಸ್ತಾನ ಬಿಕ್ಕಟ್ಟು, ಪಾಕಿಸ್ತಾನ, ಚೀನಾ ಕುರಿತು ಇಂದಿನ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಸುಮಾರು 109 ರಾಷ್ಟ್ರಗಳು ಮತ್ತು ಸರ್ಕಾರಗಳ ಮುಖ್ಯಸ್ಥರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಲಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಕೆಲವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಲಿದ್ದಾರೆ. 2019ರಲ್ಲಿ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ ಕಳೆದ ವರ್ಷ ವರ್ಚುವಲ್ ಕಾನ್ಫರೆನ್ಸ್ ಇದ್ದ ಕಾರಣ ವಿಡಿಯೋ ಸಂದೇಶವನ್ನು ಕಳುಹಿಸಿದ್ದರು. ಇದೀಗ ಈ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣದ ಬಗ್ಗೆ ಇಡೀ ವಿಶ್ವವೇ ಗಮನವಿಟ್ಟಿದೆ.

ಇದನ್ನೂ ಓದಿ: Quad Summit | ವಿಶ್ವದ ಅಭ್ಯುದಯ ಮತ್ತು ಶಾಂತಿಗಾಗಿ ಕ್ವಾಡ್ ಶ್ರಮಿಸುತ್ತಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಸ್ವೀಕರಿಸಿದ ಉಡುಗೊರೆ, ಸ್ಮರಣಿಕೆಗಳ ಹರಾಜು; ಕ್ರೀಡಾಪಟುಗಳು ಕೊಟ್ಟ ಗಿಫ್ಟ್​ಗಳಿಗೆ ಭರ್ಜರಿ ಬೇಡಿಕೆ

(PM Modi in UNGA Summit PM Narendra Modi addressing 76th Session of United Nations General Assembly)

Published On - 6:30 pm, Sat, 25 September 21