PM Modi US Visit: ಕ್ವಾಡ್ ಶೃಂಗಸಭೆಗಾಗಿ ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ

|

Updated on: Sep 21, 2024 | 8:18 PM

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ 3 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಕ್ವಾಡ್ ಶೃಂಗಸಭೆಗಾಗಿ ಈಗಾಗಲೇ ಪ್ರಧಾನಿ ಮೋದಿ ಅಮೆರಿಕದ ಫಿಲಡೆಲ್ಫಿಯಾಕ್ಕೆ ತಲುಪಿದ್ದಾರೆ. ಪಿಎಂ ಮೋದಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

PM Modi US Visit: ಕ್ವಾಡ್ ಶೃಂಗಸಭೆಗಾಗಿ ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ
ಅಮೆರಿಕದ ಫಿಲಡೆಲ್ಫಿಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ
Follow us on

ವಾಷಿಂಗ್ಟನ್: ತಮ್ಮ ಮೂರು ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಫಿಲಡೆಲ್ಫಿಯಾಕ್ಕೆ ತಲುಪಿದ್ದಾರೆ. ಅವರು ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮತ್ತು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೆಹಲಿಯಿಂದ ಅಮೆರಿಕಕ್ಕೆ ಹೊರಡುವಾಗ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತೀಯ ವಲಸಿಗರನ್ನು ಭೇಟಿಯಾಗಲು ಉತ್ಸುಕರಾಗಿದ್ದೇನೆ ಎಂದಿದ್ದರು.

ಅಮೆರಿಕಾದಲ್ಲಿ ಮೋದಿ ಅಮೆರಿಕದ ಅಧ್ಯಕ್ಷ ಜೋ ಬೈಡೆನ್ ಅವರ ತವರು ವಿಲ್ಮಿಂಗ್ಟನ್, ಡೆಲವೇರ್​ನಲ್ಲಿ ಆಯೋಜಿಸಿರುವ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಅವರು ಆಸ್ಟ್ರೇಲಿಯನ್ ಪ್ರಧಾನ ಮಂತ್ರಿ ಆಂಥೋನಿ ಅಲ್ಬನೀಸ್ ಮತ್ತು ಅವರ ಜಪಾನಿನ ಪ್ರತಿನಿಧಿ ಫ್ಯೂಮಿಯೊ ಕಿಶಿಡಾ ಅವರನ್ನು ಭೇಟಿಯಾಗಲಿದ್ದಾರೆ.


ಮಹತ್ವದ ಅಮೇರಿಕಾ ಭೇಟಿಗೆ ತೆರಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದು, ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗಾಗಿ ಕೆಲಸ ಮಾಡಲು ಕ್ವಾಡ್ ಶೃಂಗಸಭೆ ವೇದಿಕೆಯಾಗಿ ಹೊರಹೊಮ್ಮಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಭೇಟಿ ಮಾಡಲು ಮತ್ತು ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದರು. ಮೋದಿ ಅವರು ತಮ್ಮ ಭೇಟಿಯ ಸಮಯದಲ್ಲಿ ನ್ಯೂಯಾರ್ಕ್‌ನ ಜನರಲ್ ಅಸೆಂಬ್ಲಿಯಲ್ಲಿ ಭಾರತೀಯ ಸಮುದಾಯದ ಸಭೆಯನ್ನು ಉದ್ದೇಶಿಸಿ ಮತ್ತು ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ಇದನ್ನೂ ಓದಿ: ನನ್ನ ತಾಯಿ ವಾಸಿಸುವ ಮನೆಯೂ ನಿಮ್ಮ ಕಾರಿನಷ್ಟೇ ದೊಡ್ಡದು; ಒಬಾಮಾಗೆ ಹೀಗೆ ಹೇಳಿದ್ದರಂತೆ ಪ್ರಧಾನಿ ಮೋದಿ

ಇತರ ಜಾಗತಿಕ ನಾಯಕರೊಂದಿಗೆ, ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ನ್ಯೂಯಾರ್ಕ್‌ಗೆ ಹೋಗುತ್ತಾರೆ. ಅಲ್ಲಿ ಅವರು ಸೆಪ್ಟೆಂಬರ್ 22ರಂದು ಲಾಂಗ್ ಐಲ್ಯಾಂಡ್‌ನಲ್ಲಿ ದೊಡ್ಡ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮರುದಿನ, ಸೆಪ್ಟೆಂಬರ್ 23ರಂದು ಅವರು ಭಾರತಕ್ಕೆ ಹಿಂದಿರುಗುವ ಮೊದಲು ಯುಎನ್‌ನ ಶೃಂಗಸಭೆಯಲ್ಲಿ ಮಾತನಾಡುತ್ತಾರೆ. ನ್ಯೂಯಾರ್ಕ್‌ನ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಜಿಯಂನಲ್ಲಿ ಭಾರತೀಯ ವಲಸೆಗಾರರನ್ನು ಉದ್ದೇಶಿಸಿ ಅವರ ಭಾಷಣ ನಡೆಯಲಿದೆ.


ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ ಅಬ್ದುಲ್ಲಾ, ಮುಫ್ತಿ, ಗಾಂಧಿ ಕುಟುಂಬದ ಆಡಳಿತವನ್ನು ಕೊನೆಗೊಳಿಸಲಿದೆ; ಅಮಿತ್ ಶಾ

ಏನಿದು ಕ್ವಾಡ್ ಶೃಂಗಸಭೆ?:

– ಕ್ವಾಡ್ ಆಸ್ಟ್ರೇಲಿಯಾ, ಭಾರತ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ಅನ್ನು ಒಳಗೊಂಡಿರುವ ಒಂದು ಕಾರ್ಯತಂತ್ರದ ಮೈತ್ರಿಯಾಗಿದೆ.

– ಈ ವರ್ಷ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಈ ರಾಷ್ಟ್ರಗಳ ನಾಯಕರಿಗೆ ಆತಿಥ್ಯ ವಹಿಸುತ್ತಾರೆ. ಅವರು ಪ್ರತಿಯೊಬ್ಬರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತಾರೆ. ಇದೇ ಮೊದಲ ಬಾರಿಗೆ ಬೈಡೆನ್ ವಿದೇಶಿ ನಾಯಕರನ್ನು ವಿಲ್ಮಿಂಗ್ಟನ್‌ಗೆ ಆಹ್ವಾನಿಸಿದ್ದು, ಇದು ಭಾರತೀಯ ಪ್ರಧಾನಿ ನರೇಂದ್ರ ಮೋದಿ, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನಿನ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರೊಂದಿಗಿನ ಬಲವಾದ ಸಂಬಂಧವನ್ನು ಸೂಚಿಸುತ್ತದೆ.


– ಈ ಶೃಂಗಸಭೆಯು ಬೈಡೆನ್ ಅವರ ಕೊನೆಯ ಕ್ವಾಡ್ ಸಭೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಾದ ಮೊದಲ ವರ್ಷದಲ್ಲಿ ಈ ಶೃಂಗಸಭೆಗೆ ಆದ್ಯತೆ ನೀಡಿದರು ಮತ್ತು ಹೆಚ್ಚಿನ ಪ್ರಾಮುಖ್ಯತೆಯ ಮಟ್ಟಕ್ಕೆ ಬೆಳೆಸಿದರು.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:16 pm, Sat, 21 September 24