32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ

32nd International Conference of Agricultural Economists: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು ದೆಹಲಿಯಲ್ಲಿ ಉದ್ಘಾಟಿಸಿದರು. 65 ವರ್ಷಗಳ ನಂತರ ಭಾರತದಲ್ಲಿ ಇಂತಹ ಸಮಾವೇಶವನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನೀವೆಲ್ಲರೂ ವಿಶ್ವದ ವಿವಿಧ ದೇಶಗಳಿಂದ ಬಂದಿದ್ದೀರಿ. 120 ಮಿಲಿಯನ್ ರೈತರ ಪರವಾಗಿ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ ಎಂದರು.

32ನೇ ಅಂತಾರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನ ಉದ್ಘಾಟಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Aug 03, 2024 | 10:49 AM

ದೆಹಲಿ, ಆ.3: ಪ್ರಧಾನಿ ಮೋದಿ ಅವರು ಇಂದು (ಆ.3) ದೆಹಲಿಯಲ್ಲಿ 32ನೇ ಅಂತರರಾಷ್ಟ್ರೀಯ ಕೃಷಿ ಅರ್ಥಶಾಸ್ತ್ರಜ್ಞರ ಸಮ್ಮೇಳನವನ್ನು (ಐಸಿಎಇ) ಉದ್ಘಾಟಿಸಿದರು. ಆಗಸ್ಟ್ 2 ರಿಂದ 7ವರೆಗೆ ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ತ್ರೈವಾರ್ಷಿಕ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದಾರೆ.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 65 ವರ್ಷಗಳ ನಂತರ ಭಾರತದಲ್ಲಿ ಇಂತಹ ಸಮಾವೇಶವನ್ನು ಆಯೋಜಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ನೀವೆಲ್ಲರೂ ವಿಶ್ವದ ವಿವಿಧ ದೇಶಗಳಿಂದ ಬಂದಿದ್ದೀರಿ. 120 ಮಿಲಿಯನ್ ರೈತರ ಪರವಾಗಿ ನಾನು ನಿಮ್ಮನ್ನು ಸ್ವಾಗತಿಸುತ್ತೇನೆ. ಭಾರತದ 30 ದಶಲಕ್ಷಕ್ಕೂ ಹೆಚ್ಚು ಮಹಿಳಾ ರೈತರು ಹಾಗೂ ದೇಶದ 30 ದಶಲಕ್ಷ ಮೀನುಗಾರರ ಪರವಾಗಿ 550 ದಶಲಕ್ಷ ಪ್ರಾಣಿಗಳು ವಾಸಿಸುವ ಹಾಗೂ ಈ ಕೃಷಿ ಪ್ರಧಾನ ಮತ್ತು ಪ್ರಾಣಿಗಳನ್ನು ಪ್ರೀತಿಸುವ ಈ ದೇಶಕ್ಕೆ ಸ್ವಾಗತ ಎಂದು ಹೇಳಿದರು.

ಇಂಟರ್ನ್ಯಾಷನಲ್ ಅಸೋಸಿಯೇಷನ್ ​​ಆಫ್ ಅಗ್ರಿಕಲ್ಚರಲ್ ಎಕನಾಮಿಸ್ಟ್ಸ್ ಆಯೋಜಿಸಿರುವ ಈ ಆರು ದಿನಗಳ ಸಮ್ಮೇಳನದಲ್ಲಿ ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಯಲಿದೆ. ಒಟ್ಟು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಮ್ಮ ಹವಮಾನದ ಬಗ್ಗೆಯೂ ಈ ಕಾರ್ಯಕ್ರಮದಲ್ಲಿ ಚರ್ಚೆಯಾಗಬೇಕಿದೆ. ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಸುಸ್ಥಿರ ಕೃಷಿಯ ಅಗತ್ಯಗಳನ್ನು ನಿಭಾಯಿಸುವ ಬಗ್ಗೆ ಈ ಸಮ್ಮೇಳದಲ್ಲಿ ಚರ್ಚಿಸಬೇಕಾಗಿದೆ.

ಇದನ್ನೂ ಓದಿ: 50,000 ಕೋಟಿಗೂ ಹೆಚ್ಚು ವೆಚ್ಚದ 8 ಹೈ ಸ್ಪೀಡ್ ರಸ್ತೆ ಕಾರಿಡಾರ್ ಯೋಜನೆಗಳಿಗೆ ಸಂಪುಟ ಅನುಮೋದನೆ

ಸಮ್ಮೇಳನವು ಜಾಗತಿಕ ಕೃಷಿಕರು ಅನುಭವಿಸುತ್ತಿರುವ ಸವಾಲುಗಳ ಬಗ್ಗೆ ಭಾರತದ ಕೃಷಿಗಳು ಹೇಗೆ ಸಹಾಯವಾಗಿದೆ ಹಾಗೂ ಪೂರಕವಾಗುವ ವಿಧಾನಗಳ ಬಗ್ಗೆ ತಿಳಿಸಲಿದ್ದಾರೆ. ICAE 2024 ಯುವ ಸಂಶೋಧಕರು ಮತ್ತು ಪ್ರಮುಖ ವೃತ್ತಿಪರಿಗೆ ಈ ವೇದಿಕೆ ತುಂಬಾ ಸಹಾಯವಾಗಲಿದೆ. ಸಂಶೋಧನಾ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಲಿದೆ. ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ನೀತಿ ರಚನೆ ಪರಿಣಾಮ ಏನು ಎಂಬ ಬಗ್ಗೆ ಇಲ್ಲಿ ತಿಳಿಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?