Atal Setu inauguration: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತು ಉದ್ಘಾಟಿಸಿದ ಮೋದಿ

ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಸೇತುವೆಯು ಮುಂಬೈ ಮತ್ತು ಪುಣೆ ಎಕ್ಸ್‌ಪ್ರೆಸ್‌ವೇ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ನಿರ್ಮಾಣ ಹಂತದಲ್ಲಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತಹ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸುತ್ತದೆ. ಪ್ರತಿದಿನ 70,000 ವಾಹನಗಳು ಸೇತುವೆಯನ್ನು ಬಳಸುವ ನಿರೀಕ್ಷೆಯಿದೆ.

Atal Setu inauguration: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಅಟಲ್ ಸೇತು ಉದ್ಘಾಟಿಸಿದ ಮೋದಿ
ನರೇಂದ್ರ ಮೋದಿ
Follow us
|

Updated on:Jan 12, 2024 | 5:22 PM

ಮುಂಬೈ ಜನವರಿ 12: ಅಟಲ್ ಸೇತು (Atal Setu) ಎಂದು  ಕರೆಯಲ್ಪಡುವ ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಉದ್ಘಾಟಿಸಿದ್ದಾರೆ. 21.8 ಕಿಮೀ ಉದ್ದದ ಈ ಆರು ಪಥದ ಸೇತುವೆಯನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ ಸ್ಮರಣಾರ್ಥವಾಗಿ ಸಮರ್ಪಿಸಲಾಗಿದೆ. ₹ 18,000 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಸೇತುವೆಯ ನಿರ್ಮಾಣವು ಮಹತ್ವದ ಮೂಲಸೌಕರ್ಯ ಸಾಧನೆಯನ್ನು ಸೂಚಿಸುತ್ತದೆ.

500 ಬೋಯಿಂಗ್ ವಿಮಾನಗಳ ತೂಕಕ್ಕೆ ಸಮನಾದ ಮತ್ತು ಐಫೆಲ್ ಟವರ್‌ನ ತೂಕದ 17 ಪಟ್ಟು ಅಂದರೆ ಸರಿಸುಮಾರು 177,903 ಮೆಟ್ರಿಕ್ ಟನ್ ಉಕ್ಕನ್ನು ಇದರ ನಿರ್ಮಾಣಕ್ಕೆ ಬಳಸಲಾಗಿದೆ. ಅಟಲ್ ಸೇತು ಮುಂಬೈನ ಸೇವ್ರಿ ಮತ್ತು ರಾಯಗಡ ಜಿಲ್ಲೆಯ ಉರಣ್  ತಾಲೂಕಿನ ನ್ಹವಾ ಶೇವಾವನ್ನು ಸಂಪರ್ಕಿಸುತ್ತದೆ. ಈ ಹಿಂದೆ 2 ಗಂಟೆ ಹಿಡಿಸುತ್ತಿದ್ದ ಮುಂಬೈ ಮತ್ತು ನವಿ ಮುಂಬೈ ನಡುವಿನ ಪ್ರಯಾಣ ಈ ಸೇತುವೆಯಿಂದಾಗಿ ಕೇವಲ 20 ನಿಮಿಷಕ್ಕೆ ಇಳಿಯುತ್ತದೆ. ಇದು ನವಿ ಮುಂಬೈ ಮತ್ತು ಇತರ ಹತ್ತಿರದ ಪ್ರದೇಶಗಳಲ್ಲಿ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುವ ನಿರೀಕ್ಷೆಯಿದೆ. ಇದರಿಂದ ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯೂ ಪರಿಹಾರವಾಗಲಿದೆ ಎಂದು ಅಧಿಕಾರಿಗಳು ನಂಬಿದ್ದಾರೆ.

ಈ ಸೇತುವೆಯು ಮುಂಬೈ ಮತ್ತು ಪುಣೆ ಎಕ್ಸ್‌ಪ್ರೆಸ್‌ವೇ ನಡುವಿನ ಅಂತರವನ್ನು ಕಡಿಮೆ ಮಾಡುತ್ತದೆ. ನಿರ್ಮಾಣ ಹಂತದಲ್ಲಿರುವ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಂತಹ ಪ್ರದೇಶಗಳಿಗೆ ಸಂಪರ್ಕವನ್ನು ಒದಗಿಸುತ್ತದೆ. ಪ್ರತಿದಿನ 70,000 ವಾಹನಗಳು ಸೇತುವೆಯನ್ನು ಬಳಸುವ ನಿರೀಕ್ಷೆಯಿದೆ.

ಅಟಲ್ ಸೇತು

ಮುಂಬೈ ಟ್ರಾನ್ಸ್‌ಹಾರ್ಬರ್ ಲಿಂಕ್​​​ ಗೆ (MTHL) ಈಗ ‘ಅಟಲ್ ಬಿಹಾರಿ ವಾಜಪೇಯಿ ಸೇವ್ರಿ – ನ್ಹವ ಶೇವಾ ಅಟಲ್ ಸೇತು’ ಎಂದು ಹೆಸರಿಸಲಾಗಿದೆ. ಪ್ರಧಾನಿ ಮೋದಿ ಅವರು ಡಿಸೆಂಬರ್ 2016 ರಲ್ಲಿ ಸೇತುವೆಯ ಶಂಕುಸ್ಥಾಪನೆ ಕಾರ್ಯ ನಿರ್ವಹಿಸಿದ್ದರು. ಅಟಲ್ ಸೇತುವನ್ನು ಒಟ್ಟು 17,840 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಸುಮಾರು 21.8 ಕಿಮೀ ಉದ್ದದ ಆರು ಪಥದ ಸೇತುವೆಯಾಗಿದ್ದು, ಸಮುದ್ರದ ಮೇಲೆ ಸುಮಾರು 16.5 ಕಿಮೀ ಉದ್ದ ಮತ್ತು ಭೂಮಿಯ ಮೇಲೆ ಸುಮಾರು 5.5 ಕಿಮೀ ಉದ್ದವಿದೆ.

ಇದು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೇಗವಾಗಿ ಸಂಪರ್ಕವನ್ನು ಒದಗಿಸುತ್ತದೆ ಮತ್ತು ಮುಂಬೈನಿಂದ ಪುಣೆ, ಗೋವಾ ಮತ್ತು ದಕ್ಷಿಣ ಭಾರತಕ್ಕೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಇದು ಮುಂಬೈ ಬಂದರು ಮತ್ತು ಜವಾಹರಲಾಲ್ ನೆಹರು ಬಂದರು ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ.

ಮಹಾರಾಷ್ಟ್ರಕ್ಕೆ ಮೋದಿ ಭೇಟಿ

₹ 30,000 ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿದ್ದಾರೆ. ಮುಂಬೈನಲ್ಲಿ ಪ್ರಧಾನಿ ಮೋದಿ ಅವರು ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ- ನ್ಹವಾ ಶೇವಾ ಅಟಲ್ ಸೇತುವನ್ನು ಉದ್ಘಾಟಿಸಿದರು. ಈಸ್ಟರ್ನ್ ಫ್ರೀವೇಯ ಆರೆಂಜ್ ಗೇಟ್‌ನಿಂದ ಮರೈನ್ ಡ್ರೈವ್‌ಗೆ ಸಂಪರ್ಕ ಕಲ್ಪಿಸುವ ಭೂಗತ ರಸ್ತೆ ಸುರಂಗದ ಶಂಕುಸ್ಥಾಪನೆಯನ್ನೂ ಅವರು ನೆರವೇರಿಸಲಿದ್ದಾರೆ.

₹ 1,975 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಸೂರ್ಯ ಪ್ರಾದೇಶಿಕ ಬೃಹತ್ ಕುಡಿಯುವ ನೀರಿನ ಯೋಜನೆಯ 1 ನೇ ಹಂತವನ್ನು ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಯೋಜನೆಯು ಮಹಾರಾಷ್ಟ್ರದ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮೂಲಕ ಸುಮಾರು 14 ಲಕ್ಷ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದನ್ನೂ ಓದಿ:ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇವಸ್ಥಾನದಲ್ಲಿ ‘ಸ್ವಚ್ಛತಾ ಅಭಿಯಾನ’ದಲ್ಲಿ ಮೋದಿ ಭಾಗಿ 

ಪ್ರಧಾನಿ ಮೋದಿ ಅವರು ಸುಮಾರು ₹ 2000 ಕೋಟಿ ರೈಲ್ವೆ ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಯೋಜನೆಗಳು ‘ಉರಣ್-ಖಾರ್ಕೋಪರ್ ರೈಲುಮಾರ್ಗದ 2 ನೇ ಹಂತ’ದ ಉದ್ಘಾಟನೆಯನ್ನು ಒಳಗೊಂಡಿವೆ, ಇದು ನವಿ ಮುಂಬೈಗೆ ಸಂಪರ್ಕವನ್ನು ಸುಧಾರಿಸುತ್ತದೆ. ಈ ಮೂಲಕ ನೆರೂಲ್/ಬೇಲಾಪುರದಿಂದ ಖಾರ್ಕೋಪರ್ ನಡುವಿನ ಉಪನಗರ ಸೇವೆಗಳನ್ನು ಈಗ ಉರಣ್​​ಗೆ ವಿಸ್ತರಿಸಲಾಗುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Fri, 12 January 24

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ