ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಪ್ರವಾಸದಲ್ಲಿದ್ದು, ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಭಾರತದ ಸಮುದ್ರಯಾನವನ್ನು ಜಾಗತಿಮಟ್ಟಿಕ್ಕೆ ತಲುಪಿಸುವ ನಿಟ್ಟಿನಲ್ಲಿ, ONGC (Oil and Natural Gas Corporation) ಸಮುದ್ರ ಸರ್ವೈವಲ್ ಸೆಂಟರ್​​ನ್ನು ಉದ್ಘಾಟಿಸಿದರು. ದಕ್ಷಿಣ ಗೋವಾದ ಬೆತುಲ್ ಗ್ರಾಮದಲ್ಲಿ ಈ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಇದರ ಜತೆಗೆ ಇಂಡಿಯಾ ಎನರ್ಜಿ ವೀಕ್ 2024ನ್ನು ಕೂಡ ಅನಾವರಣಗೊಳಿಸಿದರು.

ONGC ಸೀ ಸರ್ವೈವಲ್ ಸೆಂಟರ್, ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮ ಉದ್ಘಾಟಿಸಿದ ಪ್ರಧಾನಿ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 06, 2024 | 12:00 PM

ಗೋವಾ, ಫೆ.6: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಫೆ.6) ONGC (Oil and Natural Gas Corporation) ಸಮುದ್ರ ಸರ್ವೈವಲ್ ಸೆಂಟರ್​​ನ್ನು ಉದ್ಘಾಟಿಸಿದರು. ದಕ್ಷಿಣ ಗೋವಾದ ಬೆತುಲ್ ಗ್ರಾಮದಲ್ಲಿ ಈ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಇದರ ಜತೆಗೆ ಇಂಡಿಯಾ ಎನರ್ಜಿ ವೀಕ್ 2024ನ್ನು ಕೂಡ ಅನಾವರಣಗೊಳಿಸಿದರು. ಇನ್ನು ಈ ಯೋಜನೆಯನ್ನು 2047ಕ್ಕೆ ಗುರಿಯಾಗಿಸಿಕೊಂಡಿದ್ದು. ಈ ಯೋಜನೆಗೆ 1,330 ಕೋಟಿ ರೂ. ವೆಚ್ಚವನ್ನು ಮಾಡಲಾಗುವುದು ಎಂದು ಹೇಳಲಾಗಿದೆ.

ಈ ಯೋಜನೆ ಬಗ್ಗೆ ಪ್ರಧಾನಮಂತ್ರಿಗಳ ಕಾರ್ಯಾಲಯ ನೀಡಿದ ಹೇಳಿಕೆ ಪ್ರಕಾರ, ONGC ಸಮುದ್ರ ಸರ್ವೈವಲ್ ಸೆಂಟರ್​​​ನ್ನು ಅತ್ಯಾಧುನಿಕ ಇಂಟಿಗ್ರೇಟೆಡ್ ಸೀ ಸರ್ವೈವಲ್ ಟ್ರೈನಿಂಗ್ ಸೆಂಟರ್ ಆಗಿ ಅಭಿವೃದ್ಧಿಪಡಿಸಲಾಗಿದೆ. ವಾರ್ಷಿಕವಾಗಿ 10,000-15,000 ಸಿಬ್ಬಂದಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿದ್ದು, ಭಾರತದ ಸಮುದ್ರಯಾನದ ತರಬೇತಿಯನ್ನು ಜಾಗತಿಕಮಟ್ಟಕ್ಕೆ ಕೊಂಡೊಯ್ಯಲಿದೆ.

ಇದನ್ನೂ ಓದಿ: ಜಾತಿ, ಧರ್ಮ, ಪ್ರಾಂತ್ಯ ಬೇಧವಿಲ್ಲ, ಎಲ್ಲರಿಗೂ ಒಂದೇ ಕಾನೂನು, ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡನೆ

ಇಂಡಿಯಾ ಎನರ್ಜಿ ವೀಕ್ 2024 ಮೂಲಕ ಇಂಧನ ಅಗತ್ಯತೆಗಳಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯನ್ನು ಹೊಂದಿದೆ. ಫೆಬ್ರವರಿ 6 ರಿಂದ 9 ರವರೆಗೆ ಗೋವಾದಲ್ಲಿ ಆಯೋಜಿಸಲಾದ ಕಾರ್ಯಕ್ರಮ ಭಾರತದ ಅತಿದೊಡ್ಡ ಮತ್ತು ಏಕೈಕ ಸಮಗ್ರ ಇಂಧನ ಪ್ರದರ್ಶನದ ಸಮ್ಮೇಳನವಾಗಿದೆ. ಇದು ದೇಶದ ಶಕ್ತಿ ಮೌಲ್ಯ ಸರಪಳಿಯನ್ನು ಒಟ್ಟುಗೂಡಿಸುತ್ತದೆ. ಹಾಗೂ ಭಾರತದ ಶಕ್ತಿ ಪರಿವರ್ತನೆ ಗುರಿಗಳಿಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಕಾರ್ಯಕ್ರಮದ ನಂತರ ಜಾಗತಿಕ ತೈಲ ಮತ್ತು ಅನಿಲ ಸಿಇಒಗಳು ಹಾಗೂ ತಜ್ಞರೊಂದಿಗೆ ಪ್ರಧಾನಿ ಸಭೆ ನಡೆಸಲಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

&

ಇಂಡಿಯಾ ಎನರ್ಜಿ ವೀಕ್ 2024 ಕಾರ್ಯಕ್ರಮದಲ್ಲಿ ಕೆನಡಾ, ಜರ್ಮನಿ, ನೆದರ್ಲ್ಯಾಂಡ್ಸ್, ರಷ್ಯಾ, ಯುಕೆ ಮತ್ತು ಯುಎಸ್ ದೇಶಗಳು ಭಾಗವಹಿಸಲಿದೆ. ಭಾರತೀಯ ಎಂಎಸ್‌ಎಂಇಗಳು ಇಂಧನ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲಿದೆ. ಇದರ ಜತೆಗೆ ವಿಶೇಷವಾಗಿ ಮೇಕ್ ಇನ್ ಇಂಡಿಯಾ ಪೆವಿಲಿಯನ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:59 am, Tue, 6 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ