AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ವರ್ಷದಲ್ಲಿ ಭಯೋತ್ಪಾದನೆಗೆ ಭಾರತದ ಪ್ರತ್ಯುತ್ತರ, ಆರ್ಥಿಕತೆಯಲ್ಲೂ ನಮ್ಮದೇ ಮೇಲುಗೈ: ಪ್ರಧಾನಿ ಮೋದಿ

ಭಾರತವು ಕಳೆದ 11 ವರ್ಷಗಳಲ್ಲಿ ಆರ್ಥಿಕವಾಗಿ ಭಾರಿ ಬೆಳವಣಿಗೆ ಸಾಧಿಸಿದೆ, ದುರ್ಬಲ ರಾಷ್ಟ್ರಗಳ ಪಟ್ಟಿಯಿಂದ ಅಗ್ರ ಐದು ಆರ್ಥಿಕತೆಗಳಲ್ಲಿ ಒಂದಾಗಿದೆ. ಕಡಿಮೆ ಹಣದುಬ್ಬರ ಮತ್ತು ಉತ್ತಮ ಬೆಳವಣಿಗೆ ದೇಶವಾಗಿದೆ. ಇನ್ನು ಭಯೋತ್ಪಾದಕ ದಾಳಿಗೆ ಸರ್ಜಿಕಲ್ ಸ್ಟ್ರೈಕ್, ವಾಯುದಾಳಿಗಳ ಮೂಲಕ ಸೂಕ್ತ ಪ್ರತ್ಯುತ್ತರ ನೀಡುವ ಮೂಲಕ ಭಾರತ ಆತ್ಮವಿಶ್ವಾಸದಿಂದ ಜಾಗತಿಕವಾಗಿ ಸ್ಪರ್ಧಿಸುತ್ತಿದೆ.

11 ವರ್ಷದಲ್ಲಿ ಭಯೋತ್ಪಾದನೆಗೆ ಭಾರತದ ಪ್ರತ್ಯುತ್ತರ, ಆರ್ಥಿಕತೆಯಲ್ಲೂ ನಮ್ಮದೇ ಮೇಲುಗೈ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Oct 18, 2025 | 9:55 AM

Share

ಭಾರತ ಯಾವತ್ತಿಗೂ ಭಯೋತ್ಪಾದಕ ದಾಳಿ ಮಾಡಿದಾಗ ಸುಮ್ಮನೆ ಕೂತಿಲ್ಲ, ಎಲ್ಲದಕ್ಕೂ ಪ್ರತ್ಯುತ್ತರ ನೀಡಿದೆ. ವಾಯುದಾಳಿ, ಸರ್ಜಿಕಲ್ ಸ್ಟ್ರೈಕ್ ಮತ್ತು ಆಪರೇಷನ್ ಸಿಂಧೂರ್​​ಗಳಂತಹ ಸೂಕ್ತ ಉತ್ತರವನ್ನು ಪಾಕಿಸ್ತಾನಕ್ಕೆ ಹಾಗೂ ಭಯೋತ್ಪಾದಕರಿಗೆ ನೀಡಿದೆ ಎಂದು ಪ್ರಧಾನಿ ಮೋದಿ (PM Narendra Modi) ಹೇಳಿದರು. ಅವರು ಎನ್‌ಡಿಟಿವಿ ವಿಶ್ವ ಶೃಂಗಸಭೆಯನ್ನುದ್ದೇಶಿಸಿ ಶುಕ್ರವಾರ (ಅ.17) ಮಾತನಾಡಿದ್ದಾರೆ. ಕಳೆದ 11 ವರ್ಷಗಳಲ್ಲಿ ಭಾರತವು ಬಿಕ್ಕಟ್ಟುಗಳನ್ನು ನಿವಾರಿಸಿದೆ, ದುರ್ಬಲ ಐದು ರಾಷ್ಟ್ರವೂ ಒಂದಾಗಿತ್ತು. ಆದರೆ ಇದೀಗ ಅಗ್ರ ಐದು ಆರ್ಥಿಕತೆ ರಾಷ್ಟ್ರವಾಗಿ ಬೆಳೆದಿದೆ. ಹಣದುಬ್ಬರವು ಶೇಕಡಾ 2 ಕ್ಕಿಂತ ಕಡಿಮೆ ಮತ್ತು ಬೆಳವಣಿಗೆ ಶೇಕಡಾ 7 ಕ್ಕಿಂತ ಹೆಚ್ಚಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.

11 ವರ್ಷಗಳಲ್ಲಿ ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿದೆ

ಭಾರತ ಕಳೆದ 11 ವರ್ಷಗಳಲ್ಲಿ ತನ್ನ ಬಿಕ್ಕಟ್ಟುಗಳನ್ನು ನಿವಾರಿಸಿದೆ, ದುರ್ಬಲ ರಾಷ್ಟ್ರದಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ಬೆಳೆದಿದೆ. ಭಾರತದ ಹಣದುಬ್ಬರ ಕೂಡ 2ಕ್ಕಿಂತ ಕಡಿಮೆಯಾಗಿದೆ. ಹಾಗೂ ದೇಶದ ಬೆಳವಣಿಗೆ ಶೇಕಡಾ 7 ಕ್ಕಿಂತ ಹೆಚ್ಚಾಗಿದೆ. ಸಣ್ಣ ವ್ಯವಹಾರಗಳಿಂದ ದೊಡ್ಡ ಕೈಗಾರಿಕೆಗಳವರೆಗೆ, ಭಾರತವು ಸ್ವಾವಲಂಬಿ ಮತ್ತು ಆತ್ಮವಿಶ್ವಾಸವನ್ನು ಹೊಂದಿದೆ. ಭಯೋತ್ಪಾದಕ ದಾಳಿಯ ನಂತರ, ಭಾರತವು ಸರ್ಜಿಕಲ್ ಸ್ಟ್ರೈಕ್‌ಗಳು, ವಾಯುದಾಳಿಗಳು ಮತ್ತು ಆಪರೇಷನ್ ಸಿಂಧೂರ್‌ನಂತಹ ಕಾರ್ಯಾಚರಣೆಗಳೊಂದಿಗೆ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರಗಳು ಬಲವಂತದ ಸುಧಾರಣೆಗಳನ್ನು ಜಾರಿಗೆ ತಂದವು, ಆದರೆ ಇದೀಗ ಅವುಗಳಲ್ಲಿ ಬದಲಾವಣೆಗಳನ್ನು ತರಲಾಗಿದೆ. ಜಾಗತಿಕವಾಗಿ ಭಾರತ ಎಲದರಲ್ಲೂ ಪೈಪೋಟಿಯನ್ನು ನೀಡುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: ದೆಹಲಿಯಲ್ಲಿ ಶ್ರೀಲಂಕಾ ಪ್ರಧಾನಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಭಾರತವು ಪ್ರತಿಯೊಂದರಲ್ಲೂ ಸುಧಾರಣೆ

ತಮ್ಮ ಸರ್ಕಾರವು ಪ್ರತಿಯೊಂದು ಸುಧಾರಣೆಯನ್ನು ತಂದಿದೆ. ಅದರಲ್ಲಿ ಸ್ಥಿತಿಸ್ಥಾಪಕತ್ವ ಹೊಂದಿದೆ. ಇದರ ಜತೆಗೆ ಹೊಸ ಹೊಸ ವಿಚಾರಗಳಲ್ಲಿ ಕ್ರಾಂತಿಯನ್ನು ತಂದಿದೆ. ಭಯೋತ್ಪಾದಕ ದಾಳಿಯ ನಂತರ ಭಾರತ ಈಗ ಮೌನವಾಗಿಲ್ಲ, ಬದಲಿಗೆ ಸರ್ಜಿಕಲ್ ಮತ್ತು ವಾಯುದಾಳಿಗಳನ್ನು ಬಳಸುವಾಗ ಪ್ರತೀಕಾರ ತೀರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಭಾರತ ನಿಲ್ಲುವ ಮನಸ್ಥಿತಿಯನ್ನು ಹೊಂದಿಲ್ಲ. ಯಾವುದೇ ತಡೆಗಳು ಬಂದರು ಅದನ್ನು ಎದುರಿಸುವ ಶಕ್ತಿ ಇದೆ. ನಮ್ಮ ಜತೆಗೆ 140 ಕೋಟಿ ಭಾರತೀಯರಿದ್ದರೆ. ಭಾರತ ಆರ್ಥಿಕವಾಗಿ ಬೆಳೆದಿದೆ. ಜಗತ್ತಿನ ಮುಂದೆ ನಾವು ಆರ್ಥಿಕವಾಗಿ ಬೆಳೆದು ನಿಂತಿದ್ದಾನೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ