ಐದು ರಾಜ್ಯಗಳಲ್ಲಿ ವಿಕಸಿತ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ: ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

Viksit Bharat Sankalp Yatra: ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ. ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಆರಂಭಿಸಲಾಗಿರುವ ಈ ಯಾತ್ರೆಯು ಈಗಾಗಲೇ ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆದಿದೆ.

ಐದು ರಾಜ್ಯಗಳಲ್ಲಿ ವಿಕಸಿತ ಭಾರತ್ ಸಂಕಲ್ಪ ಯಾತ್ರೆಗೆ ಚಾಲನೆ: ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ
ಪ್ರಧಾನಿ ನರೇಂದ್ರ ಮೋದಿ
Follow us
|

Updated on:Dec 16, 2023 | 5:17 PM

ನವದೆಹಲಿ, ಡಿಸೆಂಬರ್ 16: ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ (Viksit Bharat Sankalp Yatra) ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಸಂಜೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ಜತೆಗೆ, ಇತ್ತೀಚೆಗೆ ವಿಧಾನಸಭಾ ಚುನಾವಣೆ ನಡೆದ ಐದು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಗೆ ಮೋದಿ ಚಾಲನೆ ನೀಡಿದರು. ಇತರ ರಾಜ್ಯಗಳಲ್ಲಿ ಈ ಹಿಂದೆಯೇ ಪ್ರಾರಂಭವಾಗಿದ್ದ ಯಾತ್ರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಐದು ರಾಜ್ಯಗಳಲ್ಲಿ ಆರಂಭಗೊಂಡಿರಲಿಲ್ಲ.

ದೇಶದ ಮೂಲೆ ಮೂಲೆಯಲ್ಲಿರುವ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಅದರ ಪ್ರಯೋಜನಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಆರಂಭಿಸಲಾಗಿರುವ ಈ ಯಾತ್ರೆಯು ಈಗಾಗಲೇ ಹಲವು ರಾಜ್ಯಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಯಾತ್ರೆಗೆ ನವೆಂಬರ್ 15 ರಂದು ಜಾರ್ಖಂಡ್‌ನ ಖುಂಟಿಯಲ್ಲಿ ಚಾಲನೆ ನೀಡಲಾಗಿತ್ತು.

ಇತರ ರಾಜ್ಯಗಳಲ್ಲಿ ಈ ಹಿಂದೆಯೇ ಪ್ರಾರಂಭವಾಗಿದ್ದ ಯಾತ್ರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಐದು ರಾಜ್ಯಗಳಲ್ಲಿ ಆರಂಭಗೊಂಡಿರಲಿಲ್ಲ.

ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆದ ವಿವಿಧ ರಾಜ್ಯಗಳ ಫಲಾನುಭವಿಗಳೊಂದಿಗೆ ಮೋದಿ ಸಂವಾದ ನಡೆಸಿದರು. ಅಂತಹ ಒಬ್ಬ ಫಲಾನುಭವಿಯೊಂದಿಗೆ ಸಂವಹನ ನಡೆಸುತ್ತಾ, ಅವರು ‘ಆತ್ಮ ನಿರ್ಭರ್’ಗೆ ಮಹಿಳೆಯರು ಕೂಡ ಉತ್ತಮ ಕೊಡುಗೆ ನೀಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರವು ಬದ್ಧತೆ ಮತ್ತು ಕಷ್ಟಪಟ್ಟು ದುಡಿಯುವ ಜನರಿಗಾಗಿ ಪಟ್ಟುಬಿಡದೆ ಕೆಲಸ ಮಾಡುತ್ತಿದೆ ಎಂದು ಮೋದಿ ಹೇಳಿದರು. ಜತೆಗೆ, 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಕರೆ ನೀಡಿದರು.

ಇದಕ್ಕೂ ಮುನ್ನ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾತನಾಡಿ, ದೇಶದ ಜನರು ‘ಮೋದಿಜಿಯ ವಿಐಪಿ’ ಆಗಿರುವುದರಿಂದ ಪ್ರತಿಯೊಬ್ಬರ ಕೆಲಸಗಳನ್ನು ಈಗ ತ್ವರಿತವಾಗಿ ಮಾಡಿಕೊಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿ ಚಾಲ್ತಿ ನೀಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಶೇಷತೆಗಳು, ಅದರ ಪ್ರಯೋಜನಗಳು ಏನು?

ಈವರೆಗೆ ಎಲ್ಲೆಲ್ಲಿ ನಡೆದಿದೆ ಯಾತ್ರೆ?

ಇಲ್ಲಿಯವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳು ಮತ್ತು ಗುಜರಾತ್‌ನ ಡ್ಯಾಂಗ್, ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಉತ್ತರ ಮತ್ತು ಮಧ್ಯ ಅಂಡಮಾನ್, ಅರುಣಾಚಲ ಪ್ರದೇಶದ ತವಾಂಗ್, ಒಡಿಶಾದ ಕೋರಾಪುಟ್, ಮಹಾರಾಷ್ಟ್ರದ ನಾಂದೇಡ್, ಉತ್ತರಾಖಂಡದ ಚಂಪಾವತ್, ಬಾರಾಬಂಕಿ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಆಯೋಜಿಸಲಾಗಿದೆ. ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶಕ್ಕೆ ಹೆಚ್ಚಿನ ಭಾಗಗಳನ್ನು ಯಾತ್ರೆ ತಲುಪಿದೆ. ಈ ವೇಳೆ ಕೇಂದ್ರ ಸರ್ಕಾರದ ಜನಕಲ್ಯಾಣ ಯೋಜನೆಗಳ ಮಾಹಿತಿ ನೀಡುವುದರೊಂದಿಗೆ ಜನಸಾಮಾನ್ಯರಿಗೂ ಆರೋಗ್ಯ ಸೌಲಭ್ಯಗಳನ್ನೂ ನೀಡಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:24 pm, Sat, 16 December 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?