AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು.

Russia-Ukraine War: ಇಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯವರೊಂದಿಗೆ ಪ್ರಧಾನಿ ಮೋದಿ ಮಾತು
ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮತ್ತು ಪ್ರಧಾನಿ ಮೋದಿ
TV9 Web
| Edited By: |

Updated on:Mar 07, 2022 | 9:48 AM

Share

ರಷ್ಯಾ -ಉಕ್ರೇನ್ ಯುದ್ಧ 12ನೇ ದಿನಕ್ಕೆ ಕಾಲಿಟ್ಟಿದ್ದು, ಯುದ್ಧ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Ukrainian president Volodymyr Zelensky)ಯವರೊಟ್ಟಿಗೆ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆಯೇ ಅವರು ಝೆಲೆನ್ಸ್ಕಿಯವರೊಂದಿಗೆ ಫೋನ್​ನಲ್ಲಿ ಚರ್ಚೆ ನಡೆಸಲಿದ್ದಾರೆ. ಅಂದಹಾಗೇ, ಯುದ್ಧ ಶುರುವಾದ ನಂತರ ಇದು ಎರಡನೇ ಬಾರಿಗೆ ಪ್ರಧಾನಿ ಮೋದಿ ಉಕ್ರೇನ್​ ಅಧ್ಯಕ್ಷರೊಂದಿಗೆ ಮಾತನಾಡುತ್ತಿರುವುದು. ಈಗಾಗಲೇ ಎರಡು ಬಾರಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ರೊಟ್ಟಿಗೆ ಫೋನ್​ನಲ್ಲಿ ಮಾತುಕತೆ ನಡೆಸಿದ್ದರು.

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ಆಕ್ರಮಣ ಮಾಡುತ್ತಿದೆ.  ಅದಾದ ಎರಡನೇ ದಿನಕ್ಕೆ ಅಂದರೆ ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ನಿರ್ಣಯಕ್ಕೆ ಮತಹಾಕಲು ಭಾರತ ಒಪ್ಪಿರಲಿಲ್ಲ. ಅಂದರೆ ಪರ ಅಥವಾ ವಿರೋಧವಾಗಿ ಮತದಾನ ಮಾಡದೆ ತಟಸ್ಥ ನೀತಿ ಕಾಯ್ದುಕೊಂಡಿತ್ತು. ಇದಾದ ಬಳಿಕ ಝೆಲೆನ್ಸ್ಕಿಯವರು ಪ್ರಧಾನಿ ಮೋದಿಯವರೊಟ್ಟಿಗೆ ಮಾತನಾಡಿ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಉಕ್ರೇನ್​ಗೇ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದರು.

ರಷ್ಯಾ-ಉಕ್ರೇನ್​ ಯುದ್ಧದಲ್ಲಿ ಭಾರತ ಯಾರಿಗೂ ಪರವಾಗಿ-ವಿರೋಧವಾಗಿ ನಿಲುವು ವ್ಯಕ್ತಪಡಿಸಿಲ್ಲ. ಶಾಂತಿಯಿಂದ ಮಾತುಕತೆ ನಡೆಸಿ, ಸಮಸ್ಯೆ ಪರಿಹರಿಸಿಕೊಳ್ಳಿ ಎಂಬ ಸಲಹೆಯನ್ನು ನೀಡುತ್ತಲೇ ಇದೆ. ಅದರೊಂದಿಗೆ ಉಕ್ರೇನ್​​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಎರಡೂ ದೇಶಗಳ ಬೆಂಬಲ ಪಡೆಯುತ್ತಿದ್ದು, ಆಪರೇಶನ್​ ಗಂಗಾ ಮೂಲಕ ಈಗಾಗಲೇ ಮುಕ್ಕಾಲು ಪಾಲು ವಿದ್ಯಾರ್ಥಿಗಳನ್ನು ವಾಪಸ್​ ಕರೆತಂದಿದೆ. ಉಕ್ರೇನ್​ಗೆ ಮಾನವೀಯ ನೆರವನ್ನೂ ನೀಡುತ್ತಿದೆ. ಉಕ್ರೇನ್​ನಲ್ಲಿರುವ ಭಾರತೀಯರನ್ನು ರಕ್ಷಿಸಲು ತಾವೂ ಸಹಾಯ ಮಾಡುವುದಾಗಿ ರಷ್ಯಾ ಕೂಡ ಸಮ್ಮತಿ ನೀಡಿದೆ.

ಇದನ್ನೂ ಓದಿ: Russia-Ukraine War Live: ಉಕ್ರೇನ್-ರಷ್ಯಾ ಯುದ್ಧ ಹಿನ್ನೆಲೆ ಬದಲಾದ ಪೋಷಕರ ಮನಸ್ಥಿತಿ; ಸ್ವದೇಶದಲ್ಲೇ ಶಿಕ್ಷಣಕ್ಕೆ ಆಗ್ರಹ

Published On - 9:29 am, Mon, 7 March 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್