AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಪ್ರಯಾಣಿಕರು ಒಂದೊಮ್ಮೆ ಮನೆಯಲ್ಲೇ ಔಷಧಿ ಮರೆತು ಹೋದರೆ ಇನ್ಮುಂದೆ ಚಿಂತಿಸಬೇಕಿಲ್ಲ

ಒಂದೊಮ್ಮೆ ರೈಲು ಪ್ರಯಾಣಿಕರು ಮನೆಯಲ್ಲೇ ಔಷಧಿಯನ್ನು ಮರೆತುಬಂದಿದ್ದರೆ ಚಿಂತಿಸಬೇಕಿಲ್ಲ, ಅದಕ್ಕೆ ಪರಿಹಾರವನ್ನು ರೈಲ್ವೆ ಇಲಾಖೆ ನೀಡಲಿದೆ. ಪ್ರಯಾಣಕ್ಕಾಗಿ ಪ್ಯಾಕಿಂಗ್ ಮಾಡುವಾಗ ಕೆಲವೊಮ್ಮೆ ಅಗತ್ಯ ವಸ್ತುಗಳು ಮರೆತೇ ಹೋಗುತ್ತವೆ ಅದರಲ್ಲಿ ಔಷಧಿ ಕೂಡ ಒಂದು

ರೈಲು ಪ್ರಯಾಣಿಕರು ಒಂದೊಮ್ಮೆ ಮನೆಯಲ್ಲೇ ಔಷಧಿ ಮರೆತು ಹೋದರೆ ಇನ್ಮುಂದೆ ಚಿಂತಿಸಬೇಕಿಲ್ಲ
ರೈಲ್ವೆ ನಿಲ್ದಾಣ
ನಯನಾ ರಾಜೀವ್
|

Updated on: Nov 14, 2024 | 8:04 AM

Share

ಒಂದೊಮ್ಮೆ ರೈಲು ಪ್ರಯಾಣಿಕರು ಮನೆಯಲ್ಲೇ ಔಷಧಿಯನ್ನು ಮರೆತುಬಂದಿದ್ದರೆ ಚಿಂತಿಸಬೇಕಿಲ್ಲ, ಅದಕ್ಕೆ ಪರಿಹಾರವನ್ನು ರೈಲ್ವೆ ಇಲಾಖೆ ನೀಡಲಿದೆ. ಪ್ರಯಾಣಕ್ಕಾಗಿ ಪ್ಯಾಕಿಂಗ್ ಮಾಡುವಾಗ ಕೆಲವೊಮ್ಮೆ ಅಗತ್ಯ ವಸ್ತುಗಳು ಮರೆತೇ ಹೋಗುತ್ತವೆ ಅದರಲ್ಲಿ ಔಷಧಿ ಕೂಡ ಒಂದು. ಬೆಳಗ್ಗೆ ತಿಂಡಿ ತಿಂದಾಗ ಅಥವಾ ರಾತ್ರಿ ಊಟ ಮಾಡಿದ ಬಳಿಕ ಮಾತ್ರೆ ತೆಗೆದುಕೊಳ್ಳಬೇಕಿತ್ತು ಎಂಬುದು ನೆನಪಾಗುತ್ತದೆ. ಆಗ ಒಂದೊಮ್ಮೆ ಮಾತ್ರೆ ತೆಗೆದುಕೊಳ್ಳದಿದ್ದರೆ ಏನಾಗಬಹುದು ಎನ್ನುವ ಆತಂಕವೂ ಶುರುವಾಗುತ್ತದೆ. ಆದರೆ ಇನ್ನು ಅದಕ್ಕೆ ಚಿಂತಿಸಬೇಕಿಲ್ಲ.

ಭಾರತೀಯ ರೈಲ್ವೆಯು ದೇಶಾದ್ಯಂತ 18 ನಿಲ್ದಾಣಗಳಲ್ಲಿ ವಿಶೇಷ ವ್ಯವಸ್ಥೆಯನ್ನು ಮಾಡಲಿದೆ. ಜನೌಷಧಿ ಕೇಂದ್ರಗಳನ್ನು ತೆರೆಯಲಿದೆ. ಈ ಕೇಂದ್ರಗಳಲ್ಲಿ ಉತ್ತರ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್ ಸೇರಿವೆ. ಈ ಹಿಂದೆ ಪ್ರಾಯೋಗಿಕ ಯೋಜನೆಯಾಗಿ 61 ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅವು ಯಶಸ್ವಿಯಾಗಿ ನಡೆಯುತ್ತಿವೆ.

ಈ ಕೇಂದ್ರಗಳಲ್ಲಿ ಕಡಿಮೆ ಬೆಲೆಗೆ ಔಷಧಗಳು ಲಭ್ಯವಿರುತ್ತವೆ ಲಲಿತ್‌ಪುರ, ಬಾದಶಹನಗರ, ಉತ್ತರ ಪ್ರದೇಶದ ಬರೇಲಿ, ಬಿಹಾರದ ಸಮಸ್ತಿಪುರ್, ದುರ್ಗಾಪುರ, ಬಾರ್ಮರ್, ರಾಜಸ್ಥಾನದ ಫಲ್ನಾ, ಗುಜರಾತಿನ ಚಂದ್ಲೋಡಿಯಾ, ರಾಜ್‌ಕೋಟ್, ವಾಪಿ, ಛತ್ತೀಸ್‌ಗಢದ ಬಿಲಾಸ್‌ಪುರ್, ಮಧ್ಯಪ್ರದೇಶದ ಕಟ್ನಿ, ಪಶ್ಚಿಮ ಬಂಗಾಳದ ನೇತಾಜಿ, ತೆಲಂಗಾಣದ ಕಚೇಗೌಡ, ತ್ರಿಪುರಾದ ಅಗರ್ತಲ , ತಮಿಳುನಾಡಿನ ನಾಗಕೋಯಿಲ್, ಕರ್ನಾಟಕದಲ್ಲಿ ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ. ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ ತೆರೆಯಲಾಗುವುದು.

ಮತ್ತಷ್ಟು ಓದಿ: ಝಾನ್ಸಿ: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನಿಗೆ ಕಚ್ಚಿದ ಹಾವು, ಹಠಾತ್ ಕಾಲ್ತುಳಿತ

1963 ಔಷಧಗಳು ಇಲ್ಲಿ ಲಭ್ಯವಿದೆ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳ ಉದ್ದೇಶವು ಈ ಕೇಂದ್ರಗಳ ಮೂಲಕ ಎಲ್ಲಾ ಜನರಿಗೆ, ವಿಶೇಷವಾಗಿ ಬಡವರಿಗೆ, ಕೈಗೆಟುಕುವ ಬೆಲೆಯಲ್ಲಿ ಔಷಧಿಗಳು ಲಭ್ಯವಾಗುವಂತೆ ಮಾಡುವುದು, ಆ ಮೂಲಕ ಆರೋಗ್ಯದ ವೆಚ್ಚವನ್ನು ಕಡಿಮೆ ಮಾಡುವುದು. ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರದ ಅಡಿಯಲ್ಲಿ ವಿವಿಧ ಉತ್ಪನ್ನಗಳು 1963 ಔಷಧಗಳು ಮತ್ತು 293 ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಒಳಗೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ