AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 14 ವರ್ಷ ವಯಸ್ಸಿನ ಹುಡುಗಿಯರಿಗೆ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.

HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
Modi Launches Hpv Vaccination Programme
ಸುಷ್ಮಾ ಚಕ್ರೆ
|

Updated on:Feb 28, 2026 | 6:58 PM

Share

ನವದೆಹಲಿ, ಫೆಬ್ರವರಿ 28: ಕೇಂದ್ರ ಸರ್ಕಾರ ರಾಷ್ಟ್ರವ್ಯಾಪಿ 14 ವರ್ಷದ ಎಲ್ಲಾ ಬಾಲಕಿಯರಿಗೆ HPV (ಹ್ಯೂಮನ್ ಪ್ಯಾಪಿಲೋಮವೈರಸ್) ಲಸಿಕೆ ಅಭಿಯಾನವನ್ನು ಆರಂಭಿಸಿದೆ. ಗರ್ಭಕಂಠದ ಕ್ಯಾನ್ಸರ್ (cervical cancer) ನಿಯಂತ್ರಣಕ್ಕೆ ಈ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಇಂದು ಈ ಹೆಚ್​ಪಿವಿ (HPV) ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ, ಮಹಿಳೆಯರು ಆರೋಗ್ಯವಾಗಿದ್ದಾಗ ಮಾತ್ರ ಕುಟುಂಬವು ಚೆನ್ನಾಗಿರುತ್ತದೆ ಎಂದು ಹೇಳಿದರು.

“ಹಿಂದಿನ ಸರ್ಕಾರವು ಮಹಿಳೆಯರ ಸೌಲಭ್ಯಗಳು ಮತ್ತು ಆರೋಗ್ಯವನ್ನು ಮುಖ್ಯವಲ್ಲ ಎಂದು ಪರಿಗಣಿಸಿತ್ತು. ಸಾರ್ವಜನಿಕ ಶೌಚಾಲಯಗಳ ಕೊರತೆಯಿಂದಾಗಿ ಮಹಿಳೆಯರು ಬಳಲುತ್ತಿದ್ದರು. ಹುಡುಗಿಯರು ಹೆಚ್ಚಾಗಿ ಶಾಲೆಯಿಂದ ಹೊರಗುಳಿದಿದ್ದರು. ನಮ್ಮ ಸರ್ಕಾರವು ಈ ವಿಷಯಗಳ ಬಗ್ಗೆ ಯಾವಾಗಲೂ ಸೂಕ್ಷ್ಮವಾಗಿ ಗಮನ ಹರಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಬೆಂಗಳೂರಿನಲ್ಲಿ ಉಚಿತ HPV ಲಸಿಕೆ ಅಭಿಯಾನ ಆರಂಭ

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಸ್ಥಾನದ ಅಜ್ಮೀರ್‌ನ 14 ವರ್ಷದ ಬಾಲಕಿಯರಿಗೆ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದರು. ಇದು ಭಾರತದ ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ.

ನೈರ್ಮಲ್ಯ ಉಪಕ್ರಮಗಳ ಅಡಿಯಲ್ಲಿ ದೊಡ್ಡ ಪ್ರಮಾಣದ ಶೌಚಾಲಯ ನಿರ್ಮಾಣ, ಕೈಗೆಟುಕುವ ಬೆಲೆಯಲ್ಲಿ ಸ್ಯಾನಿಟರಿ ಪ್ಯಾಡ್‌ಗಳನ್ನು ಒದಗಿಸುವುದು ಮತ್ತು ಲಕ್ಷಾಂತರ ಮನೆಗಳಿಗೆ ಶುದ್ಧ ಅಡುಗೆ ಇಂಧನವನ್ನು ನೀಡಲಾಗುತ್ತಿದೆ ಎಂದು ಪ್ರಧಾನ ಮಂತ್ರಿ ಮೋದಿ ಹೇಳಿದ್ದಾರೆ. ಗರ್ಭಾವಸ್ಥೆಯಲ್ಲಿ ಪೌಷ್ಟಿಕ ಆಹಾರವನ್ನು ನೀಡಲು ಗರ್ಭಿಣಿಯರ ಬ್ಯಾಂಕ್ ಖಾತೆಗಳಿಗೆ 5,000 ರೂ.ಗಳನ್ನು ನೇರವಾಗಿ ವರ್ಗಾಯಿಸುವ ಸುರಕ್ಷಿತ ಮಾತೃತ್ವ ಯೋಜನೆಯ ಬಗ್ಗೆಯೂ ಅವರು ಮಾತನಾಡಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:57 pm, Sat, 28 February 26

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು