AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ

ಪ್ರಧಾನಿ ನರೇಂದ್ರ ಮೋದಿ ತೈಲ ಮಿತಬಳಕೆಗಾಗಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. ಎಸ್‌ಪಿಜಿ ಭದ್ರತಾ ವಾಹನಗಳ ಸಂಖ್ಯೆ ಕಡಿಮೆ ಮಾಡುವಂತೆ ಹಾಗೂ ಭದ್ರತೆಗೆ ಪೆಟ್ರೋಲ್-ಡೀಸೆಲ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳನ್ನು ಬಳಸುವಂತೆ ಸೂಚಿಸಿದ್ದಾರೆ. ಸಚಿವರು ಮತ್ತು ಎನ್‌ಡಿಎ ಸರ್ಕಾರಗಳ ಮುಖ್ಯಮಂತ್ರಿಗಳಿಗೂ ಇಂಧನ ಮಿತಬಳಕೆಗೆ ಮೋದಿ ಕರೆ ನೀಡಿದ್ದು, ತಾವೇ ಆ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇರಿಸಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಮಿತವ್ಯಯಕ್ಕೆ ಪ್ರಧಾನಿ ಮೋದಿ ಮೊದಲ ಹೆಜ್ಜೆ: ಬೆಂಗಾವಲು ಪಡೆಗೆ ಕತ್ತರಿ, ಸಚಿವರು, ಎನ್​ಡಿಎ ಸಿಎಂಗಳಿಗೂ ಸೂಚನೆ
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)Image Credit source: TV9 Network
ಗಣಪತಿ ಶರ್ಮಾ
|

Updated on:May 13, 2026 | 9:22 AM

Share

ನವದೆಹಲಿ, ಮೇ 13: ಮಧ್ಯಪ್ರಾಚ್ಯ ಯುದ್ಧ ಹಾಗೂ ಅಂತರರಾಷ್ಟ್ರೀಯ ಅನಿಶ್ಚಿತತೆಗಳ ಹಿನ್ನೆಲೆಯಲ್ಲಿ ಒಂದು ವರ್ಷ ಚಿನ್ನ ಖರೀದಿ ಮಾಡದಂತೆ ಹಾಗೂ ಇಂಧನ ಮಿತ ಬಳಕೆಗೆ ದೇಶದ ಜನತೆಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಇದೀಗ ತಾವೇ ಆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಖುದ್ದು ತಮ್ಮದೇ ಎಸ್‌ಪಿಜಿ ಭದ್ರತಾ ಪಡೆಗೆ ನಿಯೋಜನೆಗೊಳ್ಳುವ ವಾಹನಗಳ ಸಂಖ್ಯೆಯಲ್ಲಿ ಕಡಿತ ಹಾಗೂ ಪೆಟ್ರೋಲ್, ಡೀಸೆಲ್ ಚಾಲಿತ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಪ್ರಧಾನಿ ಕಚೇರಿ ಸೂಚನೆ ನೀಡಿದೆ.

ಮುಖ್ಯಾಂಶಗಳು

  • ಪ್ರಧಾನಿ ಮೋದಿಯವರ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆ ಶೇ 50 ರಷ್ಟು ಕಡಿತಗೊಳಿಸಲು ಪಿಎಂಒ ಆದೇಶ.
  • ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬದಲಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು (EV) ಬಳಸಲು ನಿರ್ಧಾರ.
  • ಇದೇ ಮಾದರಿಯನ್ನು ಅನುಸರಿಸುವಂತೆ ಕೇಂದ್ರ ಸಚಿವರು ಮತ್ತು ಎನ್‌ಡಿಎ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪ್ರಧಾನಿ ಸೂಚನೆ.

ಭಾರತವು ಕಚ್ಚಾ ತೈಲ, ಚಿನ್ನ ಮತ್ತು ಅಡುಗೆ ಎಣ್ಣೆಯಂತಹ ಅನೇಕ ಉತ್ಪನ್ನಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದರಿಂದ ದೇಶದ ಆರ್ಥಿಕತೆಯ ಮೇಲೆ ಅವುಗಳ ಖರೀದಿಯು ಬೀರುವ ಪರಿಣಾಮಗಳ ಬಗ್ಗೆ ಮೋದಿ ಇತ್ತೀಚೆಗೆ ನೀಡಿದ ಸಂದೇಶದಲ್ಲಿ ಪ್ರಸ್ತಾಪಿಸಿದ್ದರು. ವಿದೇಶಿ ವಿನಿಮಯವನ್ನು ಉಳಿಸಲು, ಈ ವಸ್ತುಗಳ ಬಳಕೆಯನ್ನು ಕಡಿಮೆ ಮಾಡುವಂತೆ ಅವರು ಕರೆ ನೀಡಿದ್ದರು. ಈಗ ತಮ್ಮದೇ ಭದ್ರತಾ ಪಡೆಯಲ್ಲಿ ಬದಲಾವಣೆಗಳನ್ನು ತರುವ ಮೂಲಕ, ಅವರು ಆ ಮಾತುಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದಾರೆ.

ಎಲೆಕ್ಟ್ರಿಕ್ ವೆಹಿಕಲ್​​ಗೆ ಆದ್ಯತೆ

ಪ್ರಧಾನಿ ಬೆಂಗಾವಲು ಪಡೆಯ ವಾಹನಗಳ ಸಂಖ್ಯೆಯನ್ನು ಶೇ 50ರಷ್ಟು ಕಡಿತಗೊಳಿಸುವಂತೆ ಪಿಎಂಒ ಆದೇಶಿಸಿದೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದು ಮಿತವ್ಯಯದ ಕ್ರಮಗಳ ಭಾಗವಾಗಿದ್ದು, ಸರ್ಕಾರದ ವೆಚ್ಚಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಇಂಧನ ಉಳಿತಾಯದ ಜೊತೆಗೆ, ಎಲೆಕ್ಟ್ರಿಕ್ ವಾಹನಗಳ ಬಳಕೆಯು ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಅಲ್ಲದೆ, ಬೆಂಗಾವಲು ಪಡೆಯ ಗಾತ್ರ ಚಿಕ್ಕದಾಗುವುದರಿಂದ ರಸ್ತೆಗಳಲ್ಲಿ ಸಂಚಾರದ ವೇಳೆ ಉಂಟಾಗುವ ಅಡಚಣೆಗಳನ್ನು ಕಡಿಮೆ ಮಾಡಲು ಸಹಾಯಕವಾಗಲಿದೆ.

ಕಟ್ಟುನಿಟ್ಟಿನ ಕ್ರಮ ಪ್ರಧಾನಿ ಕಚೇರಿಗಷ್ಟೇ ಸಿಮಿತವಲ್ಲ!

ಈ ಕ್ರಮಗಳು ಕೇವಲ ಪ್ರಧಾನಿ ಕಚೇರಿಗೆ ಸೀಮಿತವಾಗಿಲ್ಲ. ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಇದೇ ರೀತಿಯ ಸೂಚನೆಯನ್ನು ಪ್ರಧಾನಿ ನೀಡಿದ್ದಾರೆ. ಇಂಧನ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಒತ್ತು ನೀಡುವಂತೆ ಮತ್ತು ಬೆಂಗಾವಲು ಪಡೆಯನ್ನು ಆದಷ್ಟು ಕಡಿಮೆ ಮಾಡುವಂತೆ ಅವರು ಕರೆ ನೀಡಿದ್ದಾರೆ. ಇದು ಇಂಧನ ಉಳಿತಾಯಕ್ಕೆ ರಾಷ್ಟ್ರವ್ಯಾಪಿ ಚಳುವಳಿಗೆ ನಾಂದಿ ಹಾಡುವ ನಿರೀಕ್ಷೆಯಿದೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Wed, 13 May 26

Follow Us
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಸಿಗ್ನಲ್ ನಲ್ಲಿ ಯಾರಾದ್ರೂ ಹಂಪ್ ಮಾಡ್ತಾರೇನ್ರಿ? ಕೃಷ್ಣಭೈರೇಗೌಡ ಕ್ಲಾಸ್
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಕನ್ನೇರಿ ಸ್ವಾಮೀಜಿ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಫುಟ್ ಪಾತ್ ತೆರವಿಗೆ ಕೃಷ್ಣಬೈರೇಗೌಡ ದಿಟ್ಟ ಹೆಜ್ಜೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
ಹೈಕಮಾಂಡ್​​​​ನಿಂದ ಬಂತು ಫೋನ್, ಡಿಕೆಶಿಗೆ ಖಡಕ್ ಎಚ್ಚರಿಕೆ
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್‌ಹೋಲ್‌ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA
ಸಿಇಟಿ ರ‍್ಯಾಂಕ್ ಬಂದಿಲ್ಲವೆಂದ ವಿದ್ಯಾರ್ಥಿಗಳ ದೂರಿಗೆ ಸ್ಪಷ್ಟನೆ ನೀಡಿದ KEA