PM Modi US Visit: ಸೆಪ್ಟೆಂಬರ್​​ನಲ್ಲಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್​​ನಲ್ಲಿ ಅಮೆರಿಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಭಾರತ ಹಾಗೂ ಅಮೆರಿಕದ ನಡುವೆ ಸುಂಕದ ವಿಚಾರವಾಗಿ ಭಿನ್ನಾಭಿಪ್ರಾಯ ಏರ್ಪಟ್ಟಿದೆ. ಮೋದಿ ಅಮೆರಿಕ ಭೇಟಿ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಮುಂಬರುವ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಗಾಗಿ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.

PM Modi US Visit: ಸೆಪ್ಟೆಂಬರ್​​ನಲ್ಲಿ ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ ಪ್ರಧಾನಿ ಮೋದಿ
ನರೇಂದ್ರ ಮೋದಿ
Image Credit source: The Hindu

Updated on: Aug 13, 2025 | 9:18 AM

ವಾಷಿಂಗ್ಟನ್, ಆಗಸ್ಟ್​ 13:ಸುಂಕದ ಬಗ್ಗೆ ಭಾರತ(India)ಮತ್ತು ಅಮೆರಿಕ(America) ನಡುವೆ ವಿವಾದವಿದೆ. ವ್ಯಾಪಾರ ಒಪ್ಪಂದದ ಬಗ್ಗೆಯೂ ಮಾತುಕತೆ ನಡೆಯುತ್ತಿದೆ. ಈ ಮಧ್ಯೆ, ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್‌ನಲ್ಲಿ ಅಮೆರಿಕಕ್ಕೆ ಭೇಟಿ ನೀಡಬಹುದು ಎನ್ನುವ ಮಾಹಿತಿ ಲಭ್ಯವಾಗಿದೆ . ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯೂ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಪ್ರಧಾನಿ ಮೋದಿಯವರ ಮುಂಬರುವ ಅಮೆರಿಕ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ವಿಶ್ವಸಂಸ್ಥೆ ಸಾಮಾನ್ಯ ಸಭೆಗಾಗಿ ಪ್ರಧಾನಿ ಮೋದಿ ಅಮೆರಿಕದಲ್ಲಿ ಇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಹೊರತಾಗಿ, ಪ್ರಧಾನಿ ಮೋದಿ ಮತ್ತು ಡೊನಾಲ್ಡ್ ಟ್ರಂಪ್ ನಡುವೆ ಸಭೆ ನಡೆಯಲಿದೆ. ಈ ಸಮಯದಲ್ಲಿ, ಎರಡೂ ದೇಶಗಳ ನಡುವಿನ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸುಂಕದ ಕುರಿತು ಸಾಮಾನ್ಯ ಒಪ್ಪಂದಕ್ಕೆ ಬರಲು ಪ್ರಯತ್ನ ನಡೆಯಲಿದೆ. ಪ್ರಧಾನಿ ಮೋದಿಯವರ ಭೇಟಿಯ ಸಮಯದಲ್ಲಿ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಮತ್ತಷ್ಟು ಓದಿ: ಭಾರತದೊಂದಿಗೆ ಸುಂಕ ಯುದ್ಧ, ಟ್ರಂಪ್ ತನ್ನನ್ನು ತಾನೇ ನಾಶ ಮಾಡಿಕೊಳ್ಳುತ್ತಿದ್ದಾರೆ ಎಂದ ಅಮೆರಿಕ ಅರ್ಥಶಾಸ್ತ್ರಜ್ಞ

ಭಾರತದ ಮೇಲೆ ಅಮೆರಿಕ ಶೇ. 50 ರಷ್ಟು ಸುಂಕ ವಿಧಿಸಿರುವ ಸಮಯದಲ್ಲಿ ಪ್ರಧಾನಿ ಮೋದಿ ಅವರ ಅಮೆರಿಕ ಭೇಟಿಯ ಮಹತ್ವದ್ದಾಗಿದೆ. ಪ್ರಸ್ತುತ ಶೇ. 25 ರಷ್ಟು ಸುಂಕ ಜಾರಿಯಲ್ಲಿದ್ದು, ಕೆಲವೇ ದಿನಗಳಲ್ಲಿ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ಜಾರಿಗೆ ಬರಲಿದೆ. ಭಾರತ ಅಮೆರಿಕದ ಸುಂಕವನ್ನು ವಿರೋಧಿಸಿದೆ.
ಪ್ರಧಾನಿ ಮೋದಿ ಅವರು ವೈಯಕ್ತಿಕವಾಗಿ ಯಾವುದೇ ಬೆಲೆ ತೆರಲು ಸಿದ್ಧನಿದ್ದೇನೆ, ಆದರೆ ರೈತರ ಹಿತಾಸಕ್ತಿಗಳ ಬಗ್ಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ವರ್ಷದ ಫೆಬ್ರವರಿ ಆರಂಭದಲ್ಲಿ ಪ್ರಧಾನಿ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅವರ ಭಾಷಣಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅವಕಾಶ ನೀಡುವಂತೆ ಭಾರತವು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯನ್ನು ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ 26 ರ ಬೆಳಗ್ಗೆ ಭಾಷಣ ಮಾಡಲು ನಿರ್ಧರಿಸಲಾಗಿದೆ. ಡೊನಾಲ್ಡ್ ಟ್ರಂಪ್ ಸೆಪ್ಟೆಂಬರ್ 23 ರಂದು ಮಾತನಾಡಲಿದ್ದಾರೆ. ಪ್ರಸ್ತುತ, ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಕುರಿತು ಅಧಿಕೃತ ಹೇಳಿಕೆಗಾಗಿ ಕಾಯಲಾಗುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ