ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಸಾಯಿಬಾಬಾ ಅವರ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಪುಟ್ಟಪರ್ತಿಗೆ ವಿಶೇಷ ಐಎಎಫ್ ವಿಮಾನದ ಮೂಲಕ ಆಗಮಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಮಾನವ ಸಂಪನ್ಮೂಲ ಸಚಿವ ನಾರಾ ಲೋಕೇಶ್ ಪುಟ್ಟಪರ್ತಿ ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ಬರಮಾಡಿಕೊಂಡರು.
Latest Videos
