ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
Pm Modi In Sathya Sai Baba Samadhi

ಪುಟ್ಟಪರ್ತಿಯ ಸತ್ಯಸಾಯಿ ಬಾಬಾ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

Updated on: Nov 19, 2025 | 3:02 PM

ಪ್ರಧಾನಿ ಮೋದಿ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಸಾಯಿಬಾಬಾ ಅವರ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಶ್ರೀ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಪುಟ್ಟಪರ್ತಿಗೆ ವಿಶೇಷ ಐಎಎಫ್ ವಿಮಾನದ ಮೂಲಕ ಆಗಮಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಮಾನವ ಸಂಪನ್ಮೂಲ ಸಚಿವ ನಾರಾ ಲೋಕೇಶ್ ಪುಟ್ಟಪರ್ತಿ ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ಬರಮಾಡಿಕೊಂಡರು.

ಪುಟ್ಟಪರ್ತಿ, ನವೆಂಬರ್ 19: ಆಂಧ್ರಪ್ರದೇಶದಲ್ಲಿ ಇಂದು ನಡೆದ ಆಧ್ಯಾತ್ಮಿಕ ನಾಯಕ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದಾರೆ. ಈ ಆಚರಣೆಯ ಭಾಗವಾಗಿ, ಪ್ರಧಾನಿ ಮೋದಿ (PM Modi) ಪುಟ್ಟಪರ್ತಿಯಲ್ಲಿರುವ ಸತ್ಯಸಾಯಿ ಬಾಬಾ ಅವರ ಮಹಾಸಮಾಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಪುರೋಹಿತರು ವೇದಗಳ ಪಠಣದ ಮೂಲಕ ಆಶೀರ್ವಾದ ನೀಡಿದರು.

ಶ್ರೀ ಸತ್ಯಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಆಂಧ್ರಪ್ರದೇಶದ ಪುಟ್ಟಪರ್ತಿಗೆ ವಿಶೇಷ ಐಎಎಫ್ ವಿಮಾನದ ಮೂಲಕ ಆಗಮಿಸಿದರು. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಮತ್ತು ಮಾನವ ಸಂಪನ್ಮೂಲ ಸಚಿವ ನಾರಾ ಲೋಕೇಶ್ ಪುಟ್ಟಪರ್ತಿ ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ಬರಮಾಡಿಕೊಂಡರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More