ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕ್ರಮ; ಪಾಕ್ ಜೊತೆಗಿನ ಉದ್ವಿಗ್ನತೆ ನಡುವೆ ಮೋದಿ ಶಪಥ

ಪಾಕಿಸ್ತಾನದ ಜೊತೆಗಿನ ಉದ್ವಿಗ್ನತೆಯ ನಡುವೆ ಪ್ರಧಾನಿ ನರೇಂದ್ರ ಮೋದಿರ "ಭಯೋತ್ಪಾದನೆಯ ವಿರುದ್ಧ ಹಾಗೂ ಭಯೋತ್ಪಾದನೆಗೆ ಬೆಂಬಲ ನೀಡುವವರ ವಿರುದ್ಧ ನಿರ್ಣಾಯಕ ಕ್ರಮ ತೆಗೆದುಕೊಳ್ಳುತ್ತೇವೆ" ಎಂದು ಪ್ರತಿಜ್ಞೆ ಮಾಡಿದ್ದಾರೆ. ಅಂಗೋಲಾ ಅಧ್ಯಕ್ಷ ಜೊವೊ ಮ್ಯಾನುಯೆಲ್ ಗೊನ್ಕಾಲ್ವ್ಸ್ ಲೊರೆಂಕೊ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಬೆದರಿಕೆ ಎಂದು ಹೇಳಿದ್ದಾರೆ.

ಭಯೋತ್ಪಾದಕರ ವಿರುದ್ಧ ನಿರ್ಣಾಯಕ ಕ್ರಮ; ಪಾಕ್ ಜೊತೆಗಿನ ಉದ್ವಿಗ್ನತೆ ನಡುವೆ ಮೋದಿ ಶಪಥ
Prime Minister Modi

Updated on: May 03, 2025 | 3:43 PM

ನವದೆಹಲಿ, ಮೇ 3: ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ “ದೃಢ ಮತ್ತು ನಿರ್ಣಾಯಕ ಕ್ರಮ” ತೆಗೆದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ. ಅಂಗೋಲಾ ಅಧ್ಯಕ್ಷ ಜೊವೊ ಲೊರೆಂಕೊ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಭಯೋತ್ಪಾದನೆ ಮಾನವೀಯತೆಗೆ ದೊಡ್ಡ ಬೆದರಿಕೆಯಾಗಿದೆ ಎಂದು ನಾವು ಸರ್ವಾನುಮತದಿಂದ ಹೇಳಿದ್ದೇವೆ” ಎಂದು ಹೇಳಿದ್ದಾರೆ. ಭಾರತ-ಪಾಕಿಸ್ತಾನ ರಾಷ್ಟ್ರಗಳು ಉದ್ವಿಗ್ನತೆಯ ನಡುವೆ ಪರಸ್ಪರರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ನಡುವೆ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ವಿರುದ್ಧ “ದೃಢ ಮತ್ತು ನಿರ್ಣಾಯಕ ಕ್ರಮ” ತೆಗೆದುಕೊಳ್ಳಲು ಭಾರತ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪುನರುಚ್ಛರಿಸಿದ್ದಾರೆ.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೋದಿ ಅವರ ಹೇಳಿಕೆ ಬಂದಿದೆ. ಈ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದರು. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF) ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು. ದಾಳಿಕೋರರಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಎಂದು ದೃಢಪಟ್ಟಿದೆ.

ಇದನ್ನೂ ಓದಿ: Pahalgam Attack: ಗಡಿಯಲ್ಲಿ ಉದ್ವಿಗ್ನತೆ; ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿಷೇಧ

ಇದನ್ನೂ ಓದಿ
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಪಹಲ್ಗಾಮ್ ದಾಳಿ ನಡೆದ ಒಂದು ದಿನದ ನಂತರ ನಡೆದ ಭದ್ರತಾ ಸಚಿವ ಸಂಪುಟ ಸಮಿತಿ ಸಭೆಯ ನಂತರ ಪ್ರಧಾನಿ ಮೋದಿ ನ್ಯಾಯವನ್ನು ಪಡೆಯಲು ಭಾರತ ಯಾವುದೇ ಅವಕಾಶವನ್ನು ಬಿಡುವುದಿಲ್ಲ ಎಂದು ಎಚ್ಚರಿಸಿದ್ದರು. “ನಾವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತೇವೆ, ಪತ್ತೆಹಚ್ಚುತ್ತೇವೆ ಮತ್ತು ಶಿಕ್ಷಿಸುತ್ತೇವೆ. ನಾವು ಅವರನ್ನು ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಭಾರತದಿಂದ ದಾಳಿಯ ಭಯ; ಆಹಾರ ಸಂಗ್ರಹಿಸಿಟ್ಟುಕೊಳ್ಳಲು ಗಡಿ ಭಾಗದ ಜನರಿಗೆ ಪಾಕಿಸ್ತಾನ ಸೂಚನೆ

ಪಾಕಿಸ್ತಾನದ ವಿರುದ್ಧ ಭಾರತ ಹಲವು ಕ್ರಮಗಳನ್ನು ಕೈಗೊಂಡಿದೆ. ಸಿಂಧೂ ನದಿ ಒಪ್ಪಂದ ರದ್ದು, ಪಾಕಿಸ್ತಾನದ ವಿಮಾನಗಳಿಗೆ ವಾಯುಮಾರ್ಗ ಬಂದ್, ವಾಘಾ-ಅಟ್ಟಾರಿ ಗಡಿ ಬಂದ್, ಪಾಕಿಸ್ತಾನಕ್ಕೆ ಭಾರತದ ಸಮುದ್ರಮಾರ್ಗ ಬಂದ್ ಹೀಗೆ ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದೆ. ಇಂದು ಮುಂಜಾನೆ, ಪಾಕಿಸ್ತಾನದ ವಿರುದ್ಧ ಮತ್ತೊಂದು ಮಹತ್ವದ ಕ್ರಮದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಪಾಕಿಸ್ತಾನಿ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ನಿಷೇಧಿಸಿದೆ. ಇದಲ್ಲದೆ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಆದೇಶದ ಪ್ರಕಾರ, ಭಾರತವು ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ