AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 'ದಿ ಲೈಟ್ & ದಿ ಲೋಟಸ್' ಪಿಪ್ರಹ್ವಾ ಬುದ್ಧ ಅವಶೇಷಗಳ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. 127 ವರ್ಷಗಳ ನಂತರ ಭಾರತಕ್ಕೆ ಮರಳಿದ ಈ ಐತಿಹಾಸಿಕ ಅವಶೇಷಗಳು ದೇಶದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿನಿಧಿಸುತ್ತವೆ. ಬುದ್ಧನ ಉದಾತ್ತ ಚಿಂತನೆಗಳನ್ನು ಯುವಜನರಿಗೆ ತಲುಪಿಸುವುದು ಮತ್ತು ಭಾರತದ ಪ್ರಾಚೀನ ಬೌದ್ಧ ಪರಂಪರೆಯನ್ನು ಸಂರಕ್ಷಿಸುವುದು ಈ ಪ್ರದರ್ಶನದ ಮುಖ್ಯ ಉದ್ದೇಶವಾಗಿದೆ.

ಇದು ಬುದ್ಧನ ಉದಾತ್ತ ಚಿಂತನೆಗೆ ಸಾಕ್ಷಿ: ಪವಿತ್ರ ಪಿಪ್ರಹ್ವಾ ಅವಶೇಷಗಳ ಪ್ರದರ್ಶನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ಅಕ್ಷಯ್​ ಪಲ್ಲಮಜಲು​​
|

Updated on: Jan 03, 2026 | 1:41 PM

Share

ದೆಹಲಿ, ಜ.3: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೆಹಲಿಯ ರಾಯ್ ಪಿಥೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ‘ದಿ ಲೈಟ್ & ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್’ ಎಂಬ ಪಿಪ್ರಹ್ವಾ ರೆಲಿಕ್ಸ್‌ ಅಂತರರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದ್ದಾರೆ. 127 ವರ್ಷಗಳ ನಂತರ ಭಾರತಕ್ಕೆ ತರಲಾದ ಭಗವಾನ್ ಬುದ್ಧನ ಪಿಪ್ರಹ್ವಾ ರತ್ನದ ಅವಶೇಷಗಳ ಬಗ್ಗೆ ದೇಶಕ್ಕೆ ತಿಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಲಾಗಿದೆ. ಈ ಪ್ರದರ್ಶನದಲ್ಲಿ 1898 ರ ಉತ್ಖನನ ಮತ್ತು 1971-1975 ರ ಪಿಪ್ರಹ್ವಾ ಸ್ಥಳದಲ್ಲಿ ಉತ್ಖನನದ ಸಮಯದಲ್ಲಿ ಪತ್ತೆಯಾದ ಅವಶೇಷಗಳು, ರತ್ನದ ಅವಶೇಷಗಳನ್ನು ಇಡಲಾಗಿದೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಪ್ರದರ್ಶನ ದೇಶದ ಐತಿಹಾಸಿಕ ಸಾಂಸ್ಕೃತಿಯ ಪರಂಪರೆಯನ್ನು ಪ್ರತಿನಿಧಿಸುತ್ತದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಕಾಲದ ನಂತರ ಪಿಪ್ರಾಹ್ವಾ ಅವಶೇಷಗಳನ್ನು ಮರಳಿ ತರಲಾಗಿದೆ. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯ ಮತ್ತು ಕೋಲ್ಕತ್ತಾದ ಭಾರತೀಯ ವಸ್ತುಸಂಗ್ರಹಾಲಯದಲ್ಲಿ ಸುರಕ್ಷಿತವಾಗಿ ಸಂಗ್ರಹ ಮಾಡಲಾಗಿದೆ. ಈ ಪ್ರದರ್ಶನವು ಭಗವಾನ್ ಬುದ್ಧನ ಉದಾತ್ತ ಚಿಂತನೆಗಳನ್ನು ಮತ್ತಷ್ಟು ಜನಪ್ರಿಯಗೊಳಿಸುವ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಮ್ಮ ಯುವಜನರು ಮತ್ತು ನಮ್ಮ ಶ್ರೀಮಂತ ಸಂಸ್ಕೃತಿಯ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಾಢವಾಗಿಸುವ ಪ್ರಯತ್ನದಲ್ಲಿ ಒಂದಾಗಿದೆ. ಈ ಅವಶೇಷಗಳ ವಾಪಸಾತಿಗೆ ಶ್ರಮಿಸಿದ ಪ್ರತಿಯೊಬ್ಬರನ್ನು ನಾನು ಕೃತಜ್ಞತೆಯಿಂದ ಶ್ಲಾಘಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭದ್ರತಾ ಪಡೆ ನಡೆಸಿದ ಬಹುದೊಡ್ಡ ಕಾರ್ಯಚರಣೆ: ಗುಂಡಿನ ಚಕಮಕಿಯಲ್ಲಿ 14 ಮಾವೋವಾದಿಗಳು ಸಾವು

ಇಲ್ಲಿದೆ ನೋಡಿ ವಿಡಿಯೋ

ಈ ಕಾರ್ಯಕ್ರಮದಲ್ಲಿ ಇಡಲಾಗಿದ್ದ ಪ್ರದರ್ಶನಗಳು ದೇಶ ಮತ್ತು ವಿದೇಶಿದಿಂದ ಇತಿಹಾಸಕಾರರು, ಸಾಂಸ್ಕೃತಿಕ ಉತ್ಸಾಹಿಗಳು ಮತ್ತು ಬೌದ್ಧ ಅನುಯಾಯಿಗಳ ಗಮನ ಸೆಳೆದಿದ್ದು, ಭಾರತದ ಪ್ರಾಚೀನ ಪರಂಪರೆಯನ್ನು ಸಂರಕ್ಷಿಸುವ ಮತ್ತು ಆಚರಿಸುವ ಪ್ರಯತ್ನಗಳನ್ನು ಪ್ರದರ್ಶಿಸುತ್ತದೆ ಎಂದು ಹೇಳಲಾಗಿದೆ. ಇನ್ನು ಪ್ರಧಾನಿ ಮೋದಿ ಅವರು ಇದಕ್ಕೂ ಮೊದಲು ಸಾವಿತ್ರಿಬಾಯಿ ಫುಲೆ ಮತ್ತು ರಾಣಿ ವೇಲು ನಾಚಿಯಾರ್ ಅವರ ಜನ್ಮ ವಾರ್ಷಿಕೋತ್ಸವ ಪ್ರಯುಕ್ತ ಅವರಿಗೆ ಗೌರವ ಸಲ್ಲಿಸಿದ್ದಾರೆ. ಸೇವೆ ಮತ್ತು ಶಿಕ್ಷಣದ ಮೂಲಕ ಭಾರತೀಯ ಸಮಾಜವನ್ನು ಪರಿವರ್ತಿಸುವಲ್ಲಿ ಸಾವಿತ್ರಿಬಾಯಿ ಫುಲೆ ಪಾತ್ರ ದೊಡ್ಡದ್ದು ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ